ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಪುತ್ತೂರು ಶಾಖೆ ಮತ್ತು ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಇವರ ಜಂಟಿ ಸಹಯೋಗದೊಂದಿಗೆ ಜರುಗಿತು

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಪುತ್ತೂರು ಶಾಖೆ ಮತ್ತು ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಇವರ ಜಂಟಿ ಸಹಯೋಗದೊಂದಿಗೆ ಮಾತಾ ಅಮೃತಾನಂದಮಯಿ ಮಠ, ಬೋಳೂರು ಹಾಗೂ ಸಮುದಾಯ ದಂತ ವಿಭಾಗ YENEPOYA ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಜ್ಜೋಡಿ ಮಂಗಳೂರು ಇಲ್ಲಿಯ ನುರಿತ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ ತಪಾಸಣಾ, ದಂತ ಚಿಕಿತ್ಸಾ ಮತ್ತು ಉಚಿತ ಕಣ್ಣಿನ ತಪಾಸಣೆ ಶಿಬಿರವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಪುತ್ತೂರಿನ ಪರ್ಲಡ್ಕ – ಬೈಪಾಸ್ ರಸ್ತೆಯ ಆಶ್ಮಿ ಕಂಫರ್ಟ್‍ನಲ್ಲಿ ಜರುಗಿತು. ಮಾತಾ ಅಮೃತಾನಂದಮಯಿ ಮಠ, ಬೋಳೂರು ಇಲ್ಲಿನ ವೈದ್ಯರಾದ ಡಾ.ಸುಚಿತ್ರ ಮತ್ತು ಸಮುದಾಯ ದಂತ ವಿಭಾಗ YENEPOYA ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಇಲ್ಲಿನ ವೈದ್ಯರಾದ ಡಾ.ವಿನು ಜೋಸೆಫ್ ಇವರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮ ಉದ್ಘಾಟಿಸಿದ ಮಾತಾ ಅಮೃತಾನಂದಮಯಿ ಮಠ, ಬೋಳೂರು ಇಲ್ಲಿನ ವೈದ್ಯರಾದ ಡಾ.ದೇವದಾಸ್ ಇವರು ಮಾತನಾಡಿ, ಇಂದಿನ ಒತ್ತಡದ ಜೀವನವು ಹಲವಾರು ರೋಗಗಳಿಗೆ ಕಾರಣವಾಗುತ್ತಿದೆ. ಅದಕ್ಕಾಗಿಯೇ ಇಂತಹ ಶಿಬಿರಗಳನ್ನು ಆಯೋಜಿಸಿಲಾಗುತ್ತಿದ್ದು, ಹೆಚ್ಚಿನ ಜನರು ಇದರ ಸದುಪಯೋಗವನ್ನು ಪಡೆಯುವಂತಾಗಲಿ ಎಂದು ಹಾರೈಸಿದರು. ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಇದರ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಎಸ್ ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಪುತ್ತೂರು ಶಾಖೆ ಸಹಯೋಗದೊಂದಿಗೆ ಮುಂದಿನ ವರ್ಷವು ವೈದ್ಯಕೀಯ ಶಿಬಿರವನ್ನು ಆಯೋಜಿಸುವುದಾಗಿ ಭರವಸೆಯನ್ನು ನೀಡಿದರು ಮತ್ತು ಹೆಚ್ಚಿನ ಶಿಬಿರಾರ್ಥಿಗಳು ಇದರ ಸದುಪಯೋಗವನ್ನು ಪಡೆಯುವಂತಾಗಲಿ ಎಂದು ಆಶಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಮಾತನಾಡಿ, ನಮ್ಮ ಸಂಘವು ಇಂದು 28ನೇ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸಿದ್ದು, ಈ ಶಿಬಿರಕ್ಕೆ ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಇವರು ಉತ್ತಮ ಸಹಕಾರವನ್ನು ನೀಡಿರುತ್ತಾರೆ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಗ್ರಾಹಕರಿಗೆ ನೀಡುವ ಸೇವೆಗಳ ಬಗ್ಗೆ ತಿಳಿಸುತ್ತಾ ಇ-ಸ್ಟ್ಯಾಂಪ್,ವಿಮಾ ಸೌಲಭ್ಯ, ಠೇವಣಾತಿ,ಸಾಲ ಸೌಲಭ್ಯ, ಚಿನ್ನಾಭರಣ ಸಾಲ ಪ್ರತೀ ಗ್ರಾಂ ಗೇ ಅತೀ ಹೆಚ್ಚು ಮೌಲ್ಯ ನೀಡುತ್ತಿದ್ದು ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು. ಈ ಶಿಬಿರದಲ್ಲಿ ಸುಮಾರು 300ಕ್ಕೂ ಮಿಕ್ಕಿ ಶಿಬಿರಾರ್ಥಿಗಳು ಭಾಗವಹಿಸಿ ಶಿಬಿರದ ಸದುಪಯೋಗ ಪಡೆದುಕೊಂಡರು. ಈ ಕಾರ್ಯಕ್ರಮದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ನುರಿತ ವೈದ್ಯರಾದ ಡಾ. ರಮ್ಯ, ಪಿ.ಆರ್.ಡಿ ಸಯ್ಯದ್ ಮತ್ತು ಸಮುದಾಯ ದಂತ ವಿಭಾಗ YENEPOYA ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಇದರ ಪಿ.ಆರ್.ಡಿ ಭರತ್, ಮತ್ತು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ನಿರ್ದೇಶಕರಾದ ಸೀತಾರಾಮ್ ಎನ್, ಸುರೇಶ್ ವಿ ಪೂಜಾರಿ ಉಪಸ್ಥಿತರಿದ್ದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.), ಮಂಗಳೂರು ಇದರ ಉಪಾಧ್ಯಕ್ಷರಾದ ನೇಮಿರಾಜ್ ಪಿ ಸ್ವಾಗತಿಸಿದರು. ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಇದರ ಕಾರ್ಯದರ್ಶಿಯಾದ ರಫೀಕ್ ವಂದಿಸಿದರು. ಸಂಘದ ಸಿಬ್ಬಂದಿ ಶ್ರೀಮತಿ ಹರಿಣಾಕ್ಷಿ ನಿರೂಪಿಸಿದರು.