ಕಾರ್ಯಕ್ರವನ್ನು ಸಂಘದ ಗ್ರಾಹಕರಾದ ಶ್ರೀ ಚಂದ್ರಶೇಖರ ಪೂಜಾರಿ ಮತ್ತು ಶ್ರೀ ದಯಾನಂದರವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸಂಘವು ಮುಂದಿನ ದಿನಗಳಲ್ಲಿ ಸ್ವಂತ ಕಟ್ಟಡ ನಿರ್ಮಿಸುವಲ್ಲಿ ಯಶಸ್ವಿಯಾಗಲಿ ಎಂದು ಹಾರೈಸಿದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ ಪಂಜಿಮೊಗರು ಶಾಖೆಯು ಅತ್ಯಂತ ಕಡಿಮೆ ಅವದಿಯಲ್ಲಿ ಗರಿಷ್ಠ ಬಂಡವಾಳ ಹಾಗೂ ಚಿನ್ನಾಭರಣ ಸಾಲ ಹೊಂದಿರುವ ಬಗ್ಗೆ ಹೆಮ್ಮೆಯನ್ನು ವ್ಯಕ್ತ ಪಡಿಸಿದರು. ಗ್ರಾಹಕರು ಹಾಗೂ ಸಿಬ್ಬಂದಿಗಳ ಪರಸ್ಪರ ಅನ್ಯೋನ್ಯತೆ ಸಂಘದ ಬೆಳವಣಿಗೆಗೆ ಕಾರಣವೆಂದರು. ನಮ್ಮ ಸಂಘವು ಅತೀ ಗರಿಷ್ಠ ಮೊತ್ತ ಪ್ರತೀ ಗ್ರಾಂ ಗೆ ರೂಪಾಯಿ 2800/-ರಂತೆ ಚಿನ್ನಾಭರಣ ಸಾಲವನ್ನು ನೀಡುತ್ತಿರುವ ಸಂಸ್ಥೆಯಾಗಿದ್ದು, ಸದಸ್ಯರು ಈ ಸೌಲಭ್ಯದ ಸದುಪಯೋಗ ಪಡೆಯುವಂತೆ ವಿನಂತಿಸಿದರು.
ಈ ಸಭೆಯಲ್ಲಿ ಗ್ರಾಹಕರು ತಮ್ಮ ವಿವಿಧ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಸಂಘದ ಸದಸ್ಯರು ಹಾಗೂ ಗ್ರಾಹಕರಾದ ಶ್ರೀ ಗಣೇಶ್ ಸನಿಲ್, ಶ್ರೀ ಪುರುಷೋತ್ತಮ ಎಮ್. ಪೂಜಾರಿ, ಶ್ರೀ ದನಂಜಯ ಬಂಗೇರ , ಶ್ರೀ ಪುಷ್ಪರಾಜ್ ಹಾಗೂ ಶ್ರೀ ಭಾಸ್ಕರ್ ಕೋಟ್ಯಾನ್ ಇವರು ಸಂಘದ ಪ್ರಗತಿ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.
ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ, ನಿರ್ದೇಶಕರಾದ ಶ್ರೀ ಆನಂದ ಎಸ್. ಕೊಂಡಾಣ, ಶ್ರೀ ಸೀತಾರಾಮ ಎನ್, ಶ್ರೀ ರಮಾನಾಥ್ ಸನಿಲ್, ಶ್ರೀ ಚಂದ್ರಹಾಸ್ ಮರೋಳಿ ಉಪಸ್ಥಿತರಿದ್ದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪಂಜಿಮೊಗರು ಶಾಖೆಯ ಶಾಖಾಧಿಕಾರಿ ಶ್ರೀಮತಿ ಸುಜಾತ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ವಂದಿಸಿದರು.