ಸಂಘದ ಸದಸ್ಯರಾದ ಶ್ರೀ ಪ್ರದೀಪ್ ಕುಮಾರ್ ಸುವರ್ಣ ಇವರು ಮಾತನಾಡಿ ಸಂಘವು ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತಿದ್ದು, ಅತೀ ಕಡಿಮೆ ಅವಧಿಯಲ್ಲಿ ಉತ್ತಮ ಪ್ರಗತಿಯನ್ನು ಸಾಧಿಸುವುದರ ಜೊತೆಗೆ ಪಡೀಲಿನಲ್ಲಿ ಸಂಘದ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಶಿಲಾನ್ಯಾಸ ನೆರವೇರಿಸಿರುವುದನ್ನು ಪ್ರಶಂಶಿಸಿದರು. ಸಂಘದ ಇನ್ನೋರ್ವ ಸದಸ್ಯರಾದ ಶ್ರೀ ಅಶೋಕ್ ಕುಮಾರ್ ಮಾತನಾಡಿ ಸಂಘದ ಸರ್ವತೋಮುಖ ಪ್ರಗತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವುದು ಸಂಘದ ಹಿರಿಮೆಯನ್ನು ಇನ್ನಷ್ಟು ಹೆಚ್ಚಿಸಿದೆ ಎಂದರು. ಸಂಘವು ಇನ್ನೂ ಹೆಚ್ಚು ವ್ಯವಹಾರವನ್ನು ವಿಸ್ತಾರ ಮಾಡಿ ಹೆಚ್ಚಿನ ಶಾಖೆಗಳನ್ನು ತೆರೆದು ಅಭಿವೃದ್ಧಿ ಹೊಂದುವಂತಾಗಲೀ ಹಾಗೂ ಸಂಘದ ಸಿಬ್ಬಂದಿ ವರ್ಗದ ಉತ್ತಮ ಸೇವೆಯನ್ನು ಹಾಗೂ ನಿರ್ದೇಶಕ ಮಂಡಳಿಯ ಕಾರ್ಯವೈಖರಿಯನ್ನು ಶ್ಲಾಘಿಸಿ ಶುಭ ಹಾರೈಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್‍ರವರು ಸಂಘದ ಬೆಳವಣಿಗೆಗೆ ಸಹಕಾರ ನೀಡಿದ ಸರ್ವರನ್ನು ಅಭಿನಂದಿಸಿ ಸಂಘವು ಪ್ರಧಾನ ಕಚೇರಿಯ ಶಿಲಾನ್ಯಾಸ ನೆರವೇರಿಸಿದ್ದು ಸಂಘದ ಬೆಳವೆಣಿಗೆ ಇನ್ನಷ್ಟು ಹೆಚ್ಚಲು ಪೂರಕವಾಗಿದೆ. ಸಂಘದ ಆಡಳಿತ ಮಂಡಳಿಯ ಕಾರ್ಯಯೋಜನೆಯಿಂದ, ಸಿಬ್ಬಂದಿಗಳ ಶ್ರಮದಿಂದ, ಸಲಹಾ ಸಮಿತಿ ಸದಸ್ಯರು ಹಾಗೂ ಎಲ್ಲಾ ಸದಸ್ಯರ ಸಹಕಾರದಿಂದ ಠೇವಣಿಗಳ ಸಂಗ್ರಹಣೆಯಲ್ಲಿ, ಸಾಲ ನೀಡುವಿಕೆಯಲ್ಲಿ ಹಾಗೂ ವಸೂಲಾತಿಯಲ್ಲಿ ಹೆಚ್ಚಿನ ಪ್ರಗತಿಯನ್ನು ಸಾಧಿಸಿದೆ. ಸಂಘದಲ್ಲಿ ಲಭ್ಯವಿರುವ ವಿವಿಧ ಸೇವೆಗಳ ಬಗ್ಗೆ ಮಾಹಿತಿ ಪಡೆದು ಇದರ ಸದೋಪಯೋಗವನ್ನು ಸದಸ್ಯರು ಹಾಗೂ ಸಾರ್ವಜನಿಕರು ಪಡೆಯಬೇಕಾಗಿ ವಿನಂತಿಸಿದರು. ಶಾಖೆಯ ಪ್ರಗತಿಗೆ ಕಾರಣರಾದ ಸಿಬ್ಬಂದಿ ವರ್ಗವನ್ನು ಅಭಿನಂದಿಸಿದರು.
ಶಾಖೆಗಳ ವಿವಿಧ ಸೇವೆಯ ಪ್ರಗತಿಗೆ ಕಾರಣಕರ್ತರಾದ ಶಾಖೆಯ ಶಾಖಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರನ್ನು ಗೌರವಿಸಲಾಯಿತು. ಸಂಘದ ನಿರ್ದೇಶಕರಾದ ಶ್ರೀ ರಾಮ್‍ದಾಸ್ ಮರೋಳಿ, ಶ್ರೀ ಆನಂದ ಎಸ್ ಕೊಂಡಾಣ, ಶ್ರೀ ಸುರೇಶ್ ವಿ. ಪೂಜಾರಿ, ಶ್ರೀ ರಮಾನಾಥ ಸನಿಲ್,ಶ್ರೀ ಚಂದ್ರಹಾಸ ಮರೋಳಿ, ಶ್ರೀಮತಿ ಸುಜಯ ಹೇಮಚಂದ್ರ ಮತ್ತು ಶ್ರೀಮತಿ ಕುಶಲಾಕ್ಷಿ ಯಶವಂತ್ ಹಾಗೂ ಮುಖ್ಯಕಾರ್ಯನಿರ್ವಣಾಧಿಕಾರಿ (ಪ್ರ) ಶ್ರೀ ವಿಶ್ವನಾಥ್ ಉಪಸ್ಥಿತರಿದ್ದರು.
ಸಂಘದ ನಿರ್ದೇಶಕರಾದ ವಾಮನ್ ಕೆ ಇವರು ಸ್ವಾಗತಿಸಿ, ನಿರ್ದೇಶಕರಾದ ಶ್ರೀ ಜಿ. ಪರಮೇಶ್ವರ ಪೂಜಾರಿಯವರು ಪ್ರಸ್ತಾವನೆ ಗೈದರು, ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ ಇವರು ವಂದಿಸಿದರು. ಸಂಘದ ಸಿಬ್ಬಂದಿಗಳಾದ ಶ್ರೀ ಸಚಿನ್ ಹಾಗೂ ಶ್ರೀಮತಿ ಚೈತ್ರ ಕುಮಾರಿ ಜೆ ಎನ್ ಕಾರ್ಯಕ್ರಮ ನಿರೂಪಿಸಿದರು.