ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಿ. ಮಂಗಳೂರು ಇವರ ಸಮನ್ವಯದಲ್ಲಿ ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ ಬೆಂಗಳೂರು ಇವರಿಂದ ಸಹಕಾರ ನಿರ್ವಹಣೆಯಲ್ಲಿ ಉನ್ನತ Diploma 19ನೇ ಅಧಿವೇಶನದ Rank ವಿಜೇತರಿಗೆ ಪದಕ ಪ್ರಧಾನ ಸಮಾರಂಭವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ ಬೆಂಗಳೂರು, ಇದರ ನಿರ್ದೇಶಕರಾದ ಶ್ರೀ ಎಸ್.ಆರ್. ಸತೀಶ್ಚಂದ್ರರವರು ಅಧಿವೇಶನವನ್ನು ಉದ್ಘಾಟಿಸಿ ಮಾತನಾಡಿ 25 ವರ್ಷದ ಹಿಂದೆ ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆಯ 3 ದಿನದ ತರಬೇತಿ ಶಿಬಿರದಲ್ಲಿ ಪಾಲ್ಕೊಂಡಿಯಿರುವುದನ್ನು ಸ್ಮರಸಿ ಪ್ರಸ್ತುತ ಇದರ ಸದಸ್ಯರಾಗಿರುವುದೂ ಹೆಮ್ಮೆಯ ವಿಷಯ ಎಂದರು, ಭಾರತ ದೇಶದಲ್ಲಿ ಹಾಲಿನ ಸಹಕಾರಿ ಸಂಘಗಳು ಬೆಳೆದು ಬಂದ ಹಾದಿ ಹಾಗೂ ಪ್ರಸ್ತುತ ಸಹಕಾರಿಗಳು ವರ್ಷವಿಡಿ ತಮ್ಮ ವಿವಿಧ ಕಾರ್ಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದರು. ಸಹಕಾರಿ ಸಂಘಗಳ ಉಪನಿಬಂಧಕರಾದ ಶ್ರೀ […]

ಆರೋಗ್ಯ ಶಿಬಿರ ಕಾರ್ಯಕ್ರಮದ ಶಿಬಿರಾರ್ಥಿಗಳಿಗೆ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಸಂಘದ ಉಳ್ಳಾಲ ಶಾಖೆಯಲ್ಲಿ ನಡೆಯಿತು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಉಳ್ಳಾಲ ಶಾಖೆ, ಬಹ್ಮಶ್ರೀ ನಾರಾಯಣಗುರು ಬಿಲ್ಲವ ಸೇವಾ ಸಂಘ (ರಿ.) ಮತ್ತು ಮಹಿಳಾ ಘಟಕ, ಬಂಡಿಕೊಟ್ಯ, ಉಳ್ಳಾಲ, ವಿದ್ಯಾರಣ್ಯ ಯುವಕ ವೃಂದ (ರಿ) ಮತ್ತು ವಿದ್ಯಾರಣ್ಯ ಕಲಾವೃಂದ, ಉಳ್ಳಾಲ ಇವರ ಜಂಟಿ ಸಹಯೋಗದೊಂದಿಗೆ ಮಾತಾ ಅಮೃತಾನಂದಮಯಿ ಮಠ, ಬೋಳೂರು , ಸಮುದಾಯ ದಂತ ವಿಭಾಗ ಯೆನೆಪೆಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಜ್ಜೋಡಿ ಮಂಗಳೂರು ಇಲ್ಲಿಯ ನುರಿತ ವೈದ್ಯರ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಬಜ್ಪೆ ಶಾಖೆಯ 6 ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಸಂಘದ ಸಲಹಾ ಸಮಿತಿ ಸದಸ್ಯರಾದ ಶ್ರೀ ಪ್ರದೀಪ್ ಕುಮಾರ್ ಸುವರ್ಣ ಹಾಗೂ ಸಂಘದ ಗ್ರಾಹಕರಾದ ಶ್ರೀ ಮಾಧವ ಅಮೀನ್ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಘದ ಸದಸ್ಯರಾದ ಶ್ರೀಯುತ ಪ್ರದೀಪ್ ಕುಮಾರ್ ಸುವರ್ಣ ಇವರು ಆತ್ಮಶಕ್ತಿಯ ಪ್ರಗತಿಯಲ್ಲಿ ಸಂಸ್ಥೆಯ ಸಿಬ್ಬಂದಿಗಳ ಸೇವೆ ಅಮೂಲ್ಯವಾಗಿದ್ದು, ಗ್ರಾಹಕರು ತ್ವರಿತಗತಿಯಲ್ಲಿ ತನ್ನ ಎಲ್ಲಾ ಬ್ಯಾಂಕಿಂಗ್ ಸೇವೆಯನ್ನು ಪಡೆಯುತಿದ್ದು ಈ ಶಾಖೆಯು ಇತರ ರಾಷ್ಟ್ರೀಯ ಬ್ಯಾಂಕಿಂಗ್‍ಗೆ ಸರಿಸಮಾನವಾಗಿ ಬೆಳೆಯುತ್ತಿರುವುದು ಶ್ಲಾಘನೀಯ ಎಂದರು. ಸಭೆಯ ಅಧ್ಯಕ್ಷತೆ ವಹಿಸಿದ ಸಂಘದ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಂಜಿಮೊಗರು ಶಾಖೆ, ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ(ರಿ). ಕಾವೂರು, ಯುವವಾಹಿನಿ(ರಿ) ಕೂಳೂರು ಘಟಕ ಹಾಗೂ ಶ್ರೀ ಕೃಷ್ಣ ಭಜನಾ ಮಂದಿರ ಹಾಗೂ ಶ್ರೀ ಶಾರದೋತ್ಸವ ಸೇವಾ ಟ್ರಸ್ಟ್ ವಿದ್ಯಾನಗರ ಇವರ ಜಂಟಿ ಸಹಯೋಗದೊಂದಿಗೆ ಉಚಿತ ಕನ್ನಡಕ ವಿತರಣಾ ಸಮಾರಂಭವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಸಂಘದ ಪಂಜಿಮೊಗರು ಶಾಖೆಯಲ್ಲಿ ಜರುಗಿತು.

ಈ ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಲ್ಲಿ 120 ಜನರಿಗೆ ಉಚಿತ ಕನ್ನಡಕವನ್ನು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ಶ್ರೀ ರಾಮ್‍ದಾಸ್ ಮರೋಳಿ, ಶ್ರೀ ಜಿ ಪರಮೇಶ್ವರ್ ಪೂಜಾರಿ, ಶ್ರೀ ರಮಾನಾಥ್ ಸನಿಲ್, ಶ್ರೀ ಚಂದ್ರಹಾಸ್ ಮರೋಳಿ, ಶ್ರೀ ಶಾರದೋತ್ಸವ ಸೇವಾ ಟ್ರಸ್ಟ್ ವಿದ್ಯಾನಗರದ ಅಧ್ಯಕ್ಷರಾದ ಉಮೇಶ್ ಪೂಜಾರಿ ಹಾಗೂ ಸಲಹಾ ಸಮಿತಿ ಸದಸ್ಯರಾದ ಶ್ರೀ ಗಣೇಶ್ ಸನಿಲ್ ಉಪಸ್ಥಿತರಿದ್ದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಉಳ್ಳಾಲ ಮಂಗಳೂರು, ಬಹ್ಮಶ್ರೀ ನಾರಾಯಣಗುರು ಬಿಲ್ಲವ ಸೇವಾ ಸಂಘ (ರಿ.) ಮತ್ತು ಮಹಿಳಾ ಘಟಕ, ಬಂಡಿಕೊಟ್ಯ, ಉಳ್ಳಾಲ ಹಾಗೂ ವಿದ್ಯಾರಣ್ಯ ಯುವಕ ವೃಂದ (ರಿ) ವಿದ್ಯಾರಣ್ಯ ಕಲಾವೃಂದ, ಉಳ್ಳಾಲ ಇವರ ಜಂಟಿ ಸಹಯೋಗದೊಂದಿಗೆ ಮಾತಾ ಅಮೃತಾನಂದಮಯಿ ಮಠ, ಬೋಳೂರು , ಸಮುದಾಯ ದಂತ ವಿಭಾಗ ಯೆನೆಪೆಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಜ್ಜೋಡಿ ಮಂಗಳೂರು ಇಲ್ಲಿಯ ನುರಿತ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ ತಪಾಸಣೆ, ಉಚಿತ ದಂತ ಚಿಕಿತ್ಸೆ,ಮತ್ತು ಉಚಿತ ಕಣ್ಣಿನ ತಪಾಸಣೆ, ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್ ವಿತರಣೆ ಶಿಬಿರವು ಉಳ್ಳಾಲ ನಗರಸಭೆಯ ಸಮುದಾಯ ಭವನದಲ್ಲಿ ನಡೆಯಿತು.

ಮಲರಾಯ ದೈವಸ್ಥಾನದ ಅರ್ಚಕರಾದ ಶ್ರೀಯುತ ಮುಂಡ ಯಾನೆ ಲತೀಶ್ ಪೂಜಾರಿ ಹಾಗೂ ಶ್ರೀ ಚೀರುಂಭ ಭಗವತಿ ಕ್ಷೇತ್ರದ ಅರ್ಚಕರಾದ ಶ್ರೀಯುತ ಕಂಡಪ್ಪ ಕಾನ್ವವರ್ ಶಿಬಿರವನ್ನು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಇದರ ಸದುಪಯೋಗವನ್ನು ಹೆಚ್ಚಿನ ಜನರು ಪಡೆದು ಆರೋಗ್ಯ ಪೂರ್ಣ ಜೀವನ ನಡೆಸುವಂತಗಲಿ ಎಂದರು. ಅಧ್ಯಕ್ಷತೆ ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರು ಸಂಘದ ಬೆಳವಣಿಗೆಯ ಬಗ್ಗೆ ಮಾತನಾಡಿ ನಮ್ಮ ಸಹಕಾರಿ ಸಂಘವು ನಿರಂತರವಾಗಿ ಪ್ರತಿಯೊಂದು ಶಾಖೆಯಲ್ಲಿ ಉಚಿತ ವೈದ್ಯಕೀಯ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಬೆಂದೂರ್‍ವೆಲ್ ಮಂಗಳೂರು ಹಾಗೂ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ (ರಿ.) ಜಪ್ಪಿನಮೊಗರು, ಮಂಗಳೂರು ಇವರ ಜಂಟಿ ಸಹಯೋಗದೊಂದಿಗೆ ಉಚಿತ ಕನ್ನಡಕ ವಿತರಣಾ ಸಮಾರಂಭವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಇದರ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಜಪ್ಪಿನಮೊಗರು ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಜರುಗಿತು.

ಈ ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಲ್ಲಿ ಒಟ್ಟು 15 ಜನರಿಗೆ ಕಣ್ಣಿನ ಪೂರೆಯ ಶಸ್ತ್ರ ಚಿಕೆತ್ಸೆಯನ್ನು ಪ್ರಸಾದ್ ನೇತ್ರಾಲಯದಲ್ಲಿ ಉಚಿತವಾಗಿ ನಡೆಸಿದ್ದು, 150 ಜನರಿಗೆ ಉಚಿತವಾಗಿ ಕನ್ನಡಕವನ್ನು ಮಂಗಳೂರು ದಕ್ಷಿಣ ವಿಧಾನಸಭಾ ಶಾಸಕರಾದ ಶ್ರೀ ಡಿ. ವೇದವ್ಯಾಸ ಕಾಮತ್ ಹಾಗು ನಿಕಟಪೂರ್ವ ಶಾಸಕರಾದ ಶ್ರೀ ಜೆ.ಆರ್ ಲೋಬೋ ಇವರು ವಿತರಿಸಿದರು. ಮುಂದಿನ ದಿನಗಳಲ್ಲಿಯೂ ಇಂತಹ ಶಿಬಿರಗಳ ಸದುಪಯೋಗವನ್ನು ಪಡೆಯುವಂತೆ ಶಾಸಕರಾದ ಶ್ರೀ ಡಿ. ವೇದವ್ಯಾಸ ಕಾಮತ್ ತಿಳಿಸಿದರು. ಕಾರ್ಯಕ್ರಮದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ (ರಿ.) ಜಪ್ಪಿನಮೊಗರು ಇದರ […]

ಅತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಂಜಿಮೊಗರು ಶಾಖೆ ,ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ). ಕಾವೂರು, ಯುವವಾಹಿನಿ(ರಿ) ಕೂಳೂರು ಘಟಕ ಹಾಗೂ ಶ್ರೀ ಕೃಷ್ಣ ಭಜನಾ ಮಂದಿರ ಹಾಗೂ ಶ್ರೀ ಶಾರದೋತ್ಸವ ಸೇವಾ ಟ್ರಸ್ಟ್ ವಿದ್ಯಾನಗರ ಇವರ ಜಂಟಿ ಸಹಯೋಗದೊಂದಿಗೆ ಎ ಜೆ ಇನ್ಸ್ಟಿಟ್ಯೂಟ್ of ಮೆಡಿಕಲ್ ಸಾಯನ್ಸ್ & ರಿಸರ್ಚ್ ಸೆಂಟ್‍ರ್ ಮಂಗಳೂರು ಸಮುದಾಯ ದಂತ ವಿಭಾಗ ಯೆನೆಪೆಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಜ್ಜೋಡಿ ಮಂಗಳೂರು ಇಲ್ಲಿಯ ನುರಿತ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ, ದಂತ ಚಿಕಿತ್ಸಾ ಶಿಬಿರ ಮತ್ತು ಉಚಿತ ಕಣ್ಣಿನ ತಪಾಸಣೆ ಹಾಗೂ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ವಿತರಣೆ ಕಾರ್ಯಕ್ರಮವು ದಿನಾಂಕ 23.02.2020ರಂದು ಶ್ರೀ ಕೃಷ್ಣ ಭಜನಾ ಮಂದಿರದ ಅಂಗಣ ವಿದ್ಯಾನಗರ ಪಂಜಿಮೊಗರು ಇಲ್ಲಿ ನಡೆಯಿತು.

ಈ ಕಾರ್ಯಕ್ರಮವನ್ನು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ವೈ ಭರತ್ ಶೆಟ್ಟಿ ಉದ್ಘಾಟಿಸಿದರು. ಅತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಮತ್ತು ಸ್ಥಳೀಯ ಸಂಘ ಸಂಸ್ಥೆಗಳು ತಮ್ಮ ದಿನ ನಿತ್ಯದ ಕಾರ್ಯಗಳನ್ನು ಬದಿಗಿರಿಸಿ ಆರೋಗ್ಯ ಶಿಬಿರಗಳನ್ನು ನಡೆಸುತ್ತಿರುವುದು ಶ್ಲಾಘನೀಯ. ಈ ರೀತಿಯ ಶಿಬಿರಗಳಿಂದ ಸ್ಥಳೀಯರಿಗೆ ಆರೋಗ್ಯದ ಮಾಹಿತಿಯೊಂದಿಗೆ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಮಾಹಿತಿ ದೊರೆಯುತ್ತಿರುವುದು ಉತ್ತಮ ಕಾರ್ಯವೆಂದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಯೆನೆಪಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಇಲ್ಲಿನ ವೈದ್ಯರಾದ ಡಾ|| […]