ಕಳೆದ ಹದಿನೆಂಟು ವರುಷಗಳಿಂದ ಪ್ರಕಾಶನ, ಸಮಾಜ ಸೇವೆ, ಆರೋಗ್ಯ, ಶೈಕ್ಷಣಿಕ ಸಹಾಯ, ಆರ್ಥಿಕ ಕೊಡುಗೆಗಳ ಮೂಲಕ ತನ್ನ ಸೇವಾಕಾರ್ಯಗಳನ್ನು ಅನುಚಾನವಾಗಿ ನಡೆಸಿಕೊಂಡು ಸಮಾಜಮುಖಿ ಚಿಂತನೆಗಳಿಗೆ ಪ್ರೇರಣೆ ಮಾದರಿಯಾಗಿರುವ ಮಂಗಳೂರಿನ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟಬಲ್ ಟ್ರಸ್ಟ್ ರಿ. ಇದರ ವತಿಯಿಂದ ಆತ್ಮಶಕ್ತಿ ವಿವಿದ್ಧೋದ್ದೇಶ ಸಹಕಾರಿ ಸಂಘ ನಿ.    ಇದರ ಸಹಕಾರದೊಂದಿಗೆ ಇತ್ತೀಚೆಗೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಭವನ, ಕೊಡಿಯಲ್ ಬೈಲ್ ಇಲ್ಲಿ ಜರುಗಿದ ಸರಳ ಕಾರ್ಯಕ್ರಮದಲ್ಲಿ ಕಡು ಬಡತನದ ಅಸಹಾಯಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಹಾಗೂ ಹೃದಯ ಸಂಬಂಧಿ ಅನಾರೋಗ್ಯ ಪೀಡಿತರಿಗೆ ಧನಸಹಾಯವನ್ನು ವಿತರಿಸಲಾಯಿತು.

ಆತ್ಮಶಕ್ತಿ ಪತ್ರಿಕೆಯ ಸಂಪಾದಕರು ಹಾಗೂ ಸ್ಥಾಪಕ ಟ್ರಸ್ಟಿಗಳೂ ಆದ ಶ್ರೀ ವಾಮನ್ ಕೆ. ಇವರು ಈ ಸಂದರ್ಭದಲ್ಲಿ ಮಾತನಾಡಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟಬಲ್ ಟ್ರಸ್ಟಿನ ವತಿಯಿಂದ ಪ್ರತೀ ವರ್ಷ ಕಡೂ ಬಡ ವಿದ್ಯಾರ್ಥಿಗಳನ್ನು ಗುರುತಿಸಿ ವಿದ್ಯಾರ್ಥಿ ವೇತನವನ್ನು ವಿತರಿಸಲಾಗುತ್ತಿದೆ, ಪ್ರಸ್ತುತ ಕೊರೋನ ಸಂಕಷ್ಟ ಕಾಲದಲ್ಲಿ ಆರ್ಥಿಕ ಅಡಚಣೆಯಿಂದ ಬಹಳಷ್ಟು ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರಿಸಲು ಆಗದೆ ಮೊಟಕುಗೊಳಿಸಿರುವುದನ್ನು ಮನಗಂಡು ಅಂತಹ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ಕಾಲೇಜು ಶುಲ್ಕವನ್ನು ಭರಿಸುವುದರ ಮೂಲಕ ಹಾಗೂ ಅನಾರೋಗ್ಯ ಪೀಡಿತರಾದ […]

ಸಹಕಾರ ನಿರ್ವಹಣೆಯಲ್ಲಿ ಉನ್ನತ ಡಿಪ್ಲೋಮಾ ಕೋರ್ಸ್‍ನ 36ನೇ ಅಧಿವೇಶನದ ಉದ್ಘಾಟನಾ ಸಮಾರಂಭವು ದಕ್ಷಿಣ ಕನ್ನಡ ಜಿಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ಜರುಗಿತು. ಈ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ವಿನಯ್ ಕುಮಾರ್ ಸೂರಿಂಜೆ ಇಂತಹ ತರಬೇತಿ ಮೂಲಕ ಸಹಕಾರಿ ಸಂಸ್ಥೆಗಳ ಬೆಳವಣಿಗೆ ಸಾಧ್ಯ, ಸಹಕಾರಿ ಸಂಘವು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕಾದರೆ ಉನ್ನತ ತರಬೇತಿಯ ಅಗತ್ಯವಿದ್ದು, ಇಂದು ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆಯು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮೂಲಕ ನಮ್ಮ ಜಿಲ್ಲೆಯಲ್ಲಿ ತರಬೇತಿಯನ್ನು ಆಯೋಜಿಸಿ ಜಿಲ್ಲೆಯ ಸಹಕಾರಿ ಸಂಘಗಳ ಸಿಬ್ಬಂದಿಗಳ ದಕ್ಷತೆಯನ್ನು ಹೆಚ್ಚಿಸಲು ಅನುಕೂಲ ಮಾಡಿಕೊಟ್ಟಿದೆ, ಇದರ ಸದ್ಬಳಕೆಯಾಗಲಿ ಎಂದು ಶುಭ ಹಾರೈಸಿದರು.

    ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ ಬೆಂಗಳೂರು ಇದರ ನಿರ್ದೇಶಕರಾದ ಶ್ರೀ ಎಸ್.ಆರ್. ಸತೀಶ್ಚಂದ್ರ ರವರು ಮಾತನಾಡಿ ನಾನು ಈ ಮಟ್ಟಕ್ಕೆ ಬೆಳೆಯಲು ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆಯ ಪಾತ್ರ ಮಹತ್ವದ್ದು ಹಾಗೂ HDCM ಕೋರ್ಸ್ ನ ಅನುಕೂಲತೆಯ ಬಗ್ಗೆ ತಿಳಿಸಿದರು, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಹಕಾರಿ ಸಿಬ್ಬಂದಿಗಳಿಗೆ ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆಯ ಮೂಲಕ ಉಭಯ ಜಿಲ್ಲೆಗಳ ಸಹಕಾರಿ ಸಂಘಗಳ ಸಿಬ್ಬಂದಿಗಳಿಗೆ ಒಂದು ಉತ್ತಮ ಅವಕಾಶವನ್ನು ಕಲ್ಪಿಸಿದೆ ಮುಂದೆಯೂ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.)ದ 2019-20ನೇ ಸಾಲಿನ 9ನೇ ವಾರ್ಷಿಕ ಸಾಮಾನ್ಯ ಸಭೆಯು ಘನವೆತ್ತ ಕರ್ನಾಟಕ ರಾಜ್ಯ ಸರಕಾರದ ಆಜ್ಞಾನು ಪ್ರಕಾರ ವೀಡಿಯೋ ಕಾನ್ಫರೆನ್ಸ್/ವರ್ಚುವಲ್ ಮುಖಾಂತರ ದಿನಾಂಕ 18-12-2020 ರ ಶುಕ್ರವಾರ ಪೂರ್ವಾಹ್ನ 9.30 ಕ್ಕೆ ಸರಿಯಾಗಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

ಸಂಘದ 2019-20 ನೇ ಸಾಲಿನ ವಾರ್ಷಿಕ ವರದಿ, ಲೆಕ್ಕಪತ್ರವನ್ನು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ರವರು ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಂಡಿಸಿದರು. ಸಂಘವು 2019-20 ನೇ ಸಾಲಿನಲ್ಲಿ 17 ಶಾಖೆಗಳನ್ನು ಹೊಂದಿದ್ದು, ತನ್ನ ಕಾರ್ಯವ್ಯಾಪ್ತಿಯನ್ನು ಉಡುಪಿ, ಕೊಡಗು, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳ ಸಹಿತ 5 ಜಿಲ್ಲೆಗಳಿಗೆ ವ್ಯಾಪಿಸಿರುತ್ತದೆ . ಸಂಘವು 2020-21 ನೇ ಆರ್ಥಿಕ ಸಾಲಿನಲ್ಲಿ ಇಂದಿನವರೆಗೆ ರೂ. 120 ಕೋಟಿಗೂ ಮಿಕ್ಕಿ ಠೇವಣಿಯನ್ನು ಹೊಂದಿದ್ದು ಇದನ್ನು ಮಾರ್ಚ್ ಅಂತ್ಯಕ್ಕೆ ರೂ. 150 ಕೋಟಿ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ 2021ರ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವು ನಗರದ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ಜರುಗಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್‍ರವರ ಗೌರವ ಉಪಸ್ಥಿತಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಕೆ. ರವರು ಸಂಘದ 2021ರ ಕ್ಯಾಲೆಂಡರ್‍ನ್ನು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಅರ್ಚಕರಾದ ಶ್ರೀ ಪೂವಪ್ಪ ಶಾಂತಿ, ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ಸಂಘದ ನಿರ್ದೇಶಕರಾದ ಶ್ರೀಮತಿ ಸುಜಯ ಹೇಮಚಂದ್ರ, ಶ್ರೀಮತಿ ಕುಶಲಾಕ್ಷಿ ಯಶವಂತ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಹಾಗೂ ಲೆಕ್ಕಧಿಕಾರಿ ಶ್ರೀ ವಿಶ್ವನಾಥ ಉಪಸ್ಥಿತರಿದ್ದರು.