ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ ಬೆಂಗಳೂರು ಇದರ ನಿರ್ದೇಶಕರಾದ ಶ್ರೀ ಎಸ್.ಆರ್. ಸತೀಶ್ಚಂದ್ರ ರವರು ಮಾತನಾಡಿ ನಾನು ಈ ಮಟ್ಟಕ್ಕೆ ಬೆಳೆಯಲು ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆಯ ಪಾತ್ರ ಮಹತ್ವದ್ದು ಹಾಗೂ HDCM ಕೋರ್ಸ್ ನ ಅನುಕೂಲತೆಯ ಬಗ್ಗೆ ತಿಳಿಸಿದರು, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಹಕಾರಿ ಸಿಬ್ಬಂದಿಗಳಿಗೆ ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆಯ ಮೂಲಕ ಉಭಯ ಜಿಲ್ಲೆಗಳ ಸಹಕಾರಿ ಸಂಘಗಳ ಸಿಬ್ಬಂದಿಗಳಿಗೆ ಒಂದು ಉತ್ತಮ ಅವಕಾಶವನ್ನು ಕಲ್ಪಿಸಿದೆ ಮುಂದೆಯೂ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಇಂತಹ ಕಾರ್ಯಗಳ ಮೂಲಕ ಒಂದು ರಾಷ್ಟ್ರ ಶಕ್ತಿಯಾಗಿ ಬೆಳೆಯಲಿ ಎಂದು ಹಾರೈಸಿದರು. ವಿಶ್ವಕರ್ಮ ಸಹಕಾರ ಬ್ಯಾಂಕ್ ಲಿ., ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಹರೀಶ್ ಆಚಾರ್ಯ ರವರು ಇವರು ಮಾತನಾಡಿ ಸಹಕಾರಿ ಕ್ಷೇತ್ರದಲ್ಲಿ ಸಿಬ್ಬಂದಿಗಳು ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಂಡಲ್ಲಿ ಅವರು ಮುಂದಿನ ದಿನಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ರೂಪುಗೊಳ್ಳಲು ಖಂಡಿತ ಸಾಧ್ಯ. ಈ ದಿಸೆಯಲ್ಲಿ ತನ್ನಿಂದ ಯಾವುದೇ ರೀತಿಯ ಸಹಕಾರ ನೀಡಲು ತಾನು ಸಿದ್ದ ಎಂದು ತಿಳಿಸಿದರು.
ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀ ಪ್ರವೀಣ್ ಬಿ. ನಾಯಕ್ ಇವರು ಮಾತನಾಡಿ ಪ್ರಸ್ತುತ ಸಹಕಾರ ಕಾಯ್ದೆ ಮತ್ತು ನಿಯಮಗಳಲ್ಲಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನೇಮಕಾತಿ ಹಾಗೂ ನೌಕರನು ಉನ್ನತ ಹುದ್ದೆಗೆ ಪದೋನ್ನತಿ ಪಡೆಯಬೇಕಾದರೆ ಆತನ ಅರ್ಹತೆಯಲ್ಲಿ Higher Diploma in Co-Operative Management (HDCM) ಕೋರ್ಸ್ನ್ನು ಸರಕಾರವು ನಿಗದಿಪಡಿಸಿರುವುದರಿಂದ ಮುಂದಿನ ದಿನಗಳಲ್ಲಿ ಈ ಶಿಕ್ಷಣ ಅತೀ ಅಗತ್ಯವಿರುತ್ತದೆ. ಈ ಅಗತ್ಯತೆಯನ್ನು ಮನಗಂಡು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಜಿಲ್ಲೆಯ ಸಹಕಾರ ಸಂಘಗಳ ಹಿರಿಯ ಸಿಬ್ಬಂದಿಗಳಿಗೆ ಮತ್ತು ಇತರೆ ಎಲ್ಲಾ ಸಿಬ್ಬಂದಿಗಳಿಗೆ ಈ ಕೊರ್ಸನ್ನು ಪ್ರಾರಂಭಿಸಿರುವುದು ಅನುಕೂಲಕರವಾಗಿದೆ. ಇನ್ನು ಮುಂದಕ್ಕೂ ಈ ತರಬೇತಿಗೆ ಸಹಕಾರ ಕ್ಷೇತ್ರದಲ್ಲಿ ಅನುಭವವುಳ್ಳ ಸಂಪನ್ಮೂಲ ವ್ಯಕ್ತಿಗಳನ್ನು ಕರೆತಂದು ಶಿಕ್ಷಣಾರ್ಥಿಗಳಿಗೆ ಹೆಚ್ಚಿನ ತರಬೇತಿ ನೀಡಿದಲ್ಲಿ ಯಶಸ್ಸು ಖಂಡಿತ ಎಂದರು.
ತರಬೇತಿಯ ಸಮನ್ವಯ ಅಧಿಕಾರಿ ಮತ್ತು ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ ಬೆಂಗಳೂರು ಇದರ ಉಪನ್ಯಾಸಕರಾದ ಶ್ರೀ ಸುರೇಶ್ ಪಿ.ಎನ್ ಮಾತನಾಡಿ ಕಲಿಯುವ ಶಿಕ್ಷಣಕ್ಕೆ ಯಾವುದೇ ಅಂತ್ಯವಿಲ್ಲ. ಅದು ಜೀವನ ಪರ್ಯಾಂತ ಇರುವ ಪ್ರಕ್ರಿಯೆ. ಪ್ರಸ್ತುತ ಈ ತರಬೇತಿಗೆ ಸಂಬಂಧಿಸಿದಂತೆ ಯಾವುದೇ ವಿಷಯಗಳ ಬಗ್ಗೆ ಮಾಹಿತಿಗಳನ್ನು ಅಂತರ್ಜಾಲ ತಂತ್ರಜ್ಞಾನದ ಮೂಲಕ ಸಂಪನ್ಮೂಲ ವ್ಯಕ್ತಿಗಳು ನೀಡುವ ಉಪನ್ಯಾಸಗಳನ್ನು ನೇರವಾಗಿ ಕೇಳಿ ಜ್ಞಾನವನ್ನು ವೃದ್ದಿಸಿ ಆ ಮೂಲಕ ತಮ್ಮನ್ನು ತಾವು ಸುದೃಢಗೊಳಿಸಬಹುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರು ಮಾತನಾಡಿ ಇಂದಿನ ತರಬೇತಿಯ ಸದುಪಯೋಗವನ್ನು ಪಡೆಯುವಂತೆ ಶಿಕ್ಷಣಾರ್ಥಿಗಳಿಗೆ ತಿಳಿಸಿದರು ಹಾಗೂ ಮುಂದಿನ ದಿನಗಳಲ್ಲಿ ಸಹಕಾರ ಕ್ಷೇತ್ರದಲ್ಲಿ ಅನುಭವ ಹೊಂದಿರುವಂತಹ ಸಂಪನ್ಮೂಲ ವ್ಯಕ್ತಿಗಳ ಮೂಲಕ ಹೆಚ್ಚಿನ ಮಾಹಿತಿ ಕಾರ್ಯಗಾರಗಳನ್ನು ಹಾಗೂ ತರಬೇತಿಯನ್ನು ಪರಿಣಾಮಕಾರಿಯಾಗುವಂತೆ ಮಾಡುವುದಾಗಿ ತಿಳಿಸಿದರು. ಮಂಗಳೂರು ಕೆಥೋಲಿಕ್ ಸಹಕಾರಿ ಬ್ಯಾಂಕ್ (ಲಿ.) ನ ಅಧ್ಯಕ್ಷರಾದ ಶ್ರೀ ಅನಿಲ್ ಲೋಬೊ ಹಾಗೂ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಇದರ ನಿರ್ದೇಶಕರಾದ ಶ್ರೀ ವಾಮನ್ ಕೆ. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ತರಬೇತಿಯಲ್ಲಿ 124 ಶಿಕ್ಷಣಾರ್ಥಿಗಳು ಹಾಜರಿದ್ದರು. ಸಂಘದ ನಿರ್ದೇಶಕರಾದ ಶ್ರೀ ಆನಂದ ಎಸ್.ಕೊಂಡಾಣ, ಶ್ರೀ ಸುರೇಶ್ ವಿ.ಪೂಜಾರಿ, ಶ್ರೀ ಚಂದ್ರಹಾಸ ಮರೋಳಿ, ಶ್ರೀಮತಿ ಸುಜಯ ಹೇಮಚಂದ್ರ, ಸಲಹಾ ಸಮಿತಿಯ ಸದಸ್ಯರು ಹಾಗೂ ಸಂಘದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಾನವ ಸಂಪನ್ಮೂಲ ಅಧಿಕಾರಿಯವರಾದ ಶ್ರೀ ರಕ್ಷಿತ್ ಕುಮಾರ್ ಹಾಗೂ ಶಾಖಾಧಿಕಾರಿಯವರಾದ ಶ್ರೀಮತಿ ಚೈತ್ರಾ ಕುಮಾರಿ ಜೆ.ಎನ್ ರವರು ಕಾರ್ಯಕ್ರಮ ನಿರೂಪಿಸಿದರು, ಲೆಕ್ಕಾಧಿಕಾರಿಯಾದ ಶ್ರೀ ವಿಶ್ವನಾಥ್ .ರವರು ಸ್ವಾಗತಿಸಿದರು, ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ.ರವರು ವಂದನಾರ್ಪಣೆಗೈದರು.