ಈ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕ್ರತರಾದ ಅಕ್ಷರ ಸಂತ ಹರೇಕಳ ಹಾಜಬ್ಬರವರು ಹಾಗೂ ಖ್ಯಾತ ಹಿರಿಯ ಸಾಹಿತಿಗಳಾದ ಶ್ರೀ ನಾರಾಯಣ ರೈ ಕುಕ್ಕುವಳ್ಳಿಯವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರಿಗೆ ಸಹಕಾರ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಅಪಾರ ಸಾಧನೆಗಾಗಿ “ಸಜ್ಜನ ಚಂದನ ಸದ್ಭಾವನಾ ಪ್ರಶಸ್ತಿ” ಯನ್ನು ಪ್ರದಾನ ಮಾಡಿದರು. ಶ್ರೀಯುತರು ಸಹಕಾರ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯೊಂದಿಗೆ ಸೇವೆಗೈದು ರಾಜ್ಯದಲ್ಲಿ ಅಲ್ಲದೆ ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿದ್ದಾರೆ. ಇವರಿಗೆ 2016ರಲ್ಲಿ […]
