ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ವತಿಯಿಂದ ಕರ್ನಾಟಕ ಒನ್ ಸೇವಾ ಸಂಸ್ಥೆಯ ಮೂಲಕ ಉಚಿತ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ವಿತರಣಾ ಕಾರ್ಯಕ್ರಮವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಲಾಲ್‍ಭಾಗ್ ಶಾಖೆಯಲ್ಲಿ ನಡೆಯಿತು.

ಮಂಗಳೂರು ಮಹಾನಗರಪಾಲಿಕೆಯ ಸದಸ್ಯರಾದ ಶ್ರೀ ಸುಧೀರ್ ಶೆಟ್ಟಿ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಜನರಿಗೆ ಉತ್ತಮ ಸೇವೆಯನ್ನು ನೀಡುವುದರ ಜೊತೆಯಲ್ಲಿ ಪ್ರಧಾನಿಗಳ ಆಶಯದಂತೆ ಕಡುಬಡವರಿಗೂ ಉಚಿತವಾಗಿ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡನ್ನು ನೀಡುವುದರ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ವಿಶೇಷ ಕಾಳಜಿಯನ್ನು ವಹಿಸಿದೆ. ಆತ್ಮಶಕ್ತಿ ಸಹಕಾರಿ ವಿವಿಧೋದ್ದೇಶ ಸಹಕಾರಿ ಸಂಘವು ಉಚಿತ ಆರೋಗ್ಯ ಕಾರ್ಡ್ ಮೂಲಕ ತನ್ನ ಸಾಮಾಜಿಕ ಬದ್ಧತೆಯನ್ನು ಕೂಡ ನಿರ್ವಹಿಸಿದೆ. ಈ ಸಂದರ್ಭದಲ್ಲಿ ಸಂಘದ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರಿಗೂ ಕೃತಜ್ಞತೆಯನ್ನು ಸಲ್ಲಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರು ಮಾತನಾಡಿ ಸಂಘದ ಶಾಖೆಗಳ ವಾರ್ಷಿಕೋತ್ಸವ ಸಂದರ್ಭದಲ್ಲಿ ಉಚಿತ ಆರೋಗ್ಯ ಶಿಬಿರ, ಉಚಿತ ಕನ್ನಡಕ ವಿತರಣೆ ಹಾಗೂ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ವಿತರಣೆ ಕಾರ್ಯಕ್ರಮವನ್ನು ನಿರಂತರ ಮಾಡುತ್ತಾ ಬರುತ್ತಿದ್ದು ಈಗಾಗಲೇ 2000 ಕ್ಕೂ ಮಿಕ್ಕಿ ಉಚಿತ ಆರೋಗ್ಯ ಕಾರ್ಡ್ ಹಾಗೂ 6000 ಕ್ಕೂ ಮಿಕ್ಕಿ ಉಚಿತ ಕನ್ನಡಕವನ್ನು ವಿತರಿಸಿರುವುದಷ್ಟೇ ಅಲ್ಲದೆ ಆರೋಗ್ಯ ಸಮಸ್ಯೆಯಲ್ಲಿರುವ ಆರ್ಥಿಕ ಬಡ ಕುಟುಂಬಗಳ ಸದಸ್ಯರನ್ನು ಗುರುತಿಸಿ ಅವರಿಗೂ ಆರ್ಥಿಕ ನೆರವನ್ನು ನೀಡಿರುತ್ತದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ. ಹಾಗೂ ನಿರ್ದೇಶಕರುಗಳಾದ ಶ್ರೀ ಜಿ. ಪರಮೇಶ್ವರ ಪೂಜಾರಿ, ಶ್ರೀ ಆನಂದ ಎಸ್. ಕೊಂಡಾಣ ,ಶ್ರೀ ಸುರೇಶ್ ಪೂಜಾರಿ, ಶ್ರೀ ಚಂದ್ರಹಾಸ ಮರೋಳಿ, ಶ್ರೀಮತಿ ಕುಶಾಲಾಕ್ಷಿ ಯಶವಂತ್. ಸಲಹಾ ಸಮಿತಿ ಸದಸ್ಯರಾದ ಶ್ರೀ ಬಾಬು ಎಸ್, ಕರ್ಕೇರ ಉಪಸ್ಥಿತರಿದ್ದರು ಸಂಘದ ಶಾಖಾಧಿಕಾರಿಯಾದ ಶ್ರೀಮತಿ ಸೌಮ್ಯಲತಾ ಇವರು ಕಾರ್ಯಕ್ರಮ ನಿರೂಪಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಅವರು ವಂದನಾರ್ಪಣೆಗೈದರು.