ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ 9 ನೇ ವಾರ್ಷಿಕೋತ್ಸವ, ಗ್ರಾಹಕರ ಸಭೆ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಂಘದ ಸದಸ್ಯರಿಗೆ ಹಾಗೂ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮವು ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ನಗರದ ಕದ್ರಿ, ಮಲ್ಲಿಕಟ್ಟೆಯ ಲಯನ್ಸ್ ಸೇವಾ ಮಂದಿರದ ಸಭಾಭವನದಲ್ಲಿ ಜರುಗಿತು.

ಸಂಘದ ಸದಸ್ಯರುಗಳಾದ ಶ್ರೀ ದಿವಾಕರ್ ವಿ. , ಶ್ರೀ ಗಣೇಶ್ ಸನಿಲ್, ಶ್ರೀ ಯಶವಂತ, ಶ್ರೀ ಲಕ್ಷ್ಮೀ ನಾರಾಯಣ್ ಹಾಗೂ ಶ್ರೀಮತಿ ದೇವಕಿ ಉಳ್ಳಾಲ್ ಇವರುಗಳು ದ್ವೀಪ ಪ್ರಜ್ವಲನೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಂಘದ ಸದಸ್ಯರಾದ ಶ್ರೀ ಲಕ್ಷ್ಮೀ ನಾರಾಯಣ ರವರು ಮಾತನಾಡಿ ಸಂಘದಲ್ಲಿ ದೊರಕುವ ಸೇವೆ ಸೌಲಭ್ಯಗಳ ಬಗ್ಗೆ ಹರ್ಷವ್ಯಕ್ತಪಡಿಸಿ, ಇನ್ನೂ ಹೆಚ್ಚು ವ್ಯವಹಾರವನ್ನು ವಿಸ್ತಾರ ಮಾಡಿ ಹೆಚ್ಚಿನ ಶಾಖೆಗಳನ್ನು ತೆರೆದು ಅಭಿವೃದ್ಧಿ ಹೊಂದುವಂತಾಗಲೀ ಹಾಗೂ ಕೊರೋನಾ ಸಮಯದಲ್ಲಿ ಸಂಘವು ಸಾಮಾಜಿಕ ಬದ್ಧತೆಯನ್ನು ಮನಗಂಡು ಸದಸ್ಯರಿಗೆ ಮಾಡಿದ ಸಹಾಯಗಳನ್ನು ನೆನಪಿಸಿ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗಕ್ಕೆ ಧನ್ಯವಾದ ಕೋರಿದರು. ಮತ್ತೋರ್ವ ಸದಸ್ಯರಾದ ಶ್ರೀ ಮೋಹನ್ ರವರು ಮಾತನಾಡಿ ಸಂಘವು ಇನ್ನೂ ಎತ್ತರಕ್ಕೆ ಬೆಳೆದು ಹೆಚ್ಚು ಹೆಚ್ಚು ಶಾಖೆಗಳನ್ನು ಹೊಂದಿ ಹಿಂದುಳಿದವರಿಗೆ ಇನ್ನಷ್ಟು ಉದ್ಯೋಗವಕಾಶವನ್ನು ಸೃಷ್ಟಿಸಬೇಕು ಎಂದರು. ಸಂಘದ ಸಿಬ್ಬಂದಿ ವರ್ಗದ ಉತ್ತಮ ಸೇವೆಯನ್ನು ಹಾಗೂ ನಿರ್ದೇಶಕ ಮಂಡಳಿಯ ಕಾರ್ಯವೈಖರಿಯನ್ನು ಸಂಘದ ಸದಸ್ಯರಾದ ಶ್ರೀ ಕೃಷ್ಣಪ್ಪ ಪೂಜಾರಿ ಇವರು ಶ್ಲಾಘಿಸಿ ಶುಭ ಹಾರೈಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್‍ರವರು ಸಂಘದ ಬೆಳವಣಿಗೆಗೆ ಸಹಕಾರ ನೀಡಿದ ಸರ್ವರನ್ನು ಅಭಿನಂದಿಸಿ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಿದ್ದಾಂತದೊಂದಿಗೆ ಪ್ರಾರಂಭಗೊಂಡ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ದಿನಾಂಕ 30/01/2012 ರಂದು ಕೇಂದ್ರದ ಮಾಜಿ ವಿತ್ತ ಸಚಿವರಾದ ಶ್ರೀ ಬಿ. ಜನಾರ್ಧನ ಪೂಜಾರಿಯವರ ಅಮೃತ ಹಸ್ತದಿಂದ ಉದ್ಘಾಟನೆಗೊಂಡು ಕೇವಲ 9 ವರ್ಷ ಅವಧಿಯಲ್ಲಿ 17 ಶಾಖೆಗಳನ್ನು ತೆರೆದಿದ್ದು ಇದೀಗ ತನ್ನ ಕಾರ್ಯವ್ಯಾಪ್ತಿಯನ್ನು ಉಡುಪಿ, ಕೊಡಗು, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳ ಸಹಿತ 5 ಜಿಲ್ಲೆಗಳಿಗೆ ವ್ಯಾಪಿಸಿರುವುದರೊಂದಿಗೆ ಇನ್ನೂ ಹೆಚ್ಚಿನ ಶಾಖೆಗಳನ್ನು ತೆರೆಯಲಿದೆ ಎಂದು ತಿಳಿಸಿದರು, ಸಂಘದ ಸ್ವಂತ ಆಡಳಿತ ಕಛೇರಿಯ ಕಾಮಗಾರಿಯು ಭರದಿಂದ ಸಾಗುತ್ತಿದ್ದು ಮುಂದಿನ ಮಾರ್ಚ್ ಅಂತ್ಯಕ್ಕೆ ಉದ್ಘಾಟಣೆಗೊಳ್ಳಲಿದ್ದು, ಸಂಘದ ದಶಮಾನೋತ್ಸವದಲ್ಲಿ ಸುಮಾರು 10,000 ಚದರಡಿಯ ಸ್ವಂತ ಕಟ್ಟಡವನ್ನು ಹೊಂದಲಿರುವ ಜಿಲ್ಲೆಯ ಏಕೈಕ ಸಂಸ್ಥೆ ಯಾಗಲಿದೆ ಎಂದರು , ಮಾನ್ಯ ಸದಸ್ಯರ ಸಹಕಾರ ಮತ್ತು ಸಿಬ್ಬಂದಿ ವರ್ಗದವರ ಕಠಿಣ ಪರಿಶ್ರಮ, ಕಾರ್ಯದಕ್ಷತೆ ಹಾಗೂ ಪಾರದರ್ಶಕ ವ್ಯವಹಾರದಿಂದ ಪ್ರಸ್ತುತ ಈ ಸಾಲಿನಲ್ಲಿ ಕೊರೋನಾ ಮಹಾಮಾರಿಯಿಂದ ಯಾವುದೇ ಹಿನ್ನಡೆಯಿಲ್ಲದೆ ತನ್ನ ವ್ಯವಹಾರವನ್ನು ದಾಖಲೆ ಪ್ರಮಾಣದಲ್ಲಿ ಹೆಚ್ಚಿಸಿ ರೂ. 500 ಕೋಟಿಗೂ ಮಿಕ್ಕಿ ವ್ಯವಹಾರವನ್ನು ನಡೆಸಿದ್ದು , ಆಡಳಿತ ಮಂಡಳಿ ಪರವಾಗಿ ಸರ್ವರಿಗೂ ಕೃತಜ್ಞತೆಯನ್ನು ಸಲ್ಲಿಸಿದರು.

ಶಾಖೆಗಳ ವಿವಿಧ ಸೇವೆಯ ಪ್ರಗತಿಗೆ ಕಾರಣಕರ್ತರಾದ ಶಾಖೆಯ ಶಾಖಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರನ್ನು ಗೌರವಿಸಲಾಯಿತು. ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ. ಹಾಗೂ ನಿರ್ದೇಶಕರುಗಳಾದ ಶ್ರೀ ರಾಮ್‍ದಾಸ್ ಮರೋಳಿ, ಶ್ರೀ ಆನಂದ ಎಸ್ ಕೊಂಡಾಣ, ಶ್ರೀ ಸುರೇಶ್ ವಿ. ಪೂಜಾರಿ, ಶ್ರೀ ಸೀತಾರಾಮ್ ಎನ್., ಶ್ರೀ ರಮಾನಾಥ ಸನಿಲ್, ಶ್ರೀ ಚಂದ್ರಹಾಸ ಮರೋಳಿ, ಶ್ರೀಮತಿ ಸುಜಯ ಹೇಮಚಂದ್ರ ಮತ್ತು ಶ್ರೀಮತಿ ಕುಶಲಾಕ್ಷಿ ಯಶವಂತ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ , ಸಂಘದ ಸಲಹಾ ಸಮಿತಿಯ ಸದಸ್ಯರು ಹಾಗೂ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.
ಸಂಘದ ಲೆಕ್ಕಿಗರಾದ ಶ್ರೀ ವಿಶ್ವನಾಥ್ ಇವರು ಸ್ವಾಗತಿಸಿ, ಮಾನವ ಸಂಪನ್ಮೂಲ ಅಧಿಕಾರಿಯವರಾದ ಶ್ರೀ ರಕ್ಷಿತ್ ಕುಮಾರ್ ಇವರು ವಂದಿಸಿದರು. ಸಂಘದ ಶಾಖಾಧಿಕಾರಿಯವರಾದ ಶ್ರೀಮತಿ ಹರಿಣಾಕ್ಷಿ ಕಾರ್ಯಕ್ರಮವನ್ನು ನಿರೂಪಿಸಿದರು.