ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇವರ ಸಮನ್ವಯದಲ್ಲಿ ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ (RICM) ಬೆಂಗಳೂರು ಇವರಿಂದ ಸಹಕಾರ ನಿರ್ವಹಣೆಯಲ್ಲಿ ಉನ್ನತ ಡಿಪ್ಲೋಮಾ (HDCM) ನ 30ನೇ ಅಧಿವೇಶನದ ಶಿಕ್ಷಣಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ವಿಶ್ವವಿದ್ಯಾನಿಲಯ ಕಾಲೇಜು, ಹಂಪನಕಟ್ಟದಲ್ಲಿ ಇತ್ತೀಚಿಗೆ ಜರುಗಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ ಪ್ರಸ್ತುತ ಸಹಕಾರ ಕಾಯ್ದೆ ಮತ್ತು ನಿಯಮಗಳಲ್ಲಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನೇಮಕಾತಿ ಹಾಗೂ ನೌಕರರನ್ನು ಉನ್ನತ ಹುದ್ದೆಗೆ ಪದೋನ್ನತಿ ಪಡೆಯಬೇಕಾದರೆ ಆತನ ಅರ್ಹತೆಯಲ್ಲಿ Higher Diploma in Co-Operative Management (HDCM) ಕೋರ್ಸ್‍ನ್ನು ಸರಕಾರವು ನಿಗದಿಪಡಿಸಿರುವುದರಿಂದ ಮುಂದಿನ ದಿನಗಳಲ್ಲಿ ಈ ಶಿಕ್ಷಣ ಅತೀ ಅಗತ್ಯವಿರುತ್ತದೆ. ಈ ಅಗತ್ಯತೆಯನ್ನು ಮನಗಂಡು ನಮ್ಮ ಸಂಘದ ಸಮನ್ವಯದಲ್ಲಿ ಪ್ರಾದೇಶಿಕ ಸಹಕಾರ ನಿರ್ವಹಣ ಸಂಸ್ಥೆ (RICM) ಬೆಂಗಳೂರು ಇವರ ಮೂಲಕ ಜಿಲ್ಲೆಯ ಸಹಕಾರ ಸಂಘಗಳ ಹಿರಿಯ ಸಿಬ್ಬಂದಿಗಳಿಗೆ ಮತ್ತು ಇತರೆ ಎಲ್ಲಾ ಸಿಬ್ಬಂದಿಗಳಿಗೆ ಈ ಕೋರ್ಸ್‍ನ್ನು ಪ್ರಾರಂಭಿಸಿರುವುದು ಸಹಕಾರ ಸಂಘಗಳ ಸಿಬ್ಬಂದಿಗಳಿಗೆ ಅನುಕೂಲಕರವಾಗಿದ್ದು ಇದರ ಸದುಪಯೋಗವನ್ನು ಪಡೆಯುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಸತತ 4 ಬ್ಯಾಚ್‍ನಲ್ಲಿ ಸಂಪೂರ್ಣ ಸಹಕಾರ ನೀಡುತ್ತಿರುವ ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ (RICM) ಬೆಂಗಳೂರು ಇದರ 30ನೇ ಅಧಿವೇಶನದ ಮತ್ತು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇವರ ಸಮನ್ವಯದಲ್ಲಿ 3ನೇ ಬ್ಯಾಚ್‍ನ ತರಬೇತಿ ಸಮನ್ವಯಧಿಕಾರಿ ಶ್ರೀ ಸುರೇಶ್ ಪಿ. ಎನ್ ಇವರಿಗೆ ಶಿಕ್ಷಣಾರ್ಥಿಗಳ ವತಿಯಿಂದ ಗೌರವ ಸಮರ್ಪಿಸಲಾಯಿತು.
ಈ ಸಂದರ್ಭದಲ್ಲಿ ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀ ಪ್ರವೀಣ್ ಬಿ. ನಾಯಕ್ ಮತ್ತು ಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.