ಉದ್ಘಾಟಿಸಿ ಮಾತನಾಡಿದ ಬಿ.ಸದಾನಂದ್‍ರವರು ತುಂಬೆ ಪರಿಸರದ ಜನರಿಗೆ ಸಹಕಾರಿಯಾಗುವ ಈ ಕಾರ್ಯಕ್ರಮವು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷರಾದ ಚಿತ್ತರಂಜನ್ ಬೋಳಾರ್ ಮಾತನಾಡಿ 18ನೇ ನೂತನ ತುಂಬೆ ಶಾಖೆಯ ಪ್ರಾರಂಭದ ಪ್ರಯುಕ್ತ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡನ್ನು ಉಚಿತವಾಗಿ ಸಂಘದ ಸದಸ್ಯರಿಗೆ ಹಾಗೂ ಸಾರ್ವಜನಿಕರಿಗೆ ಆಯೋಜಿಸಿದ್ದು ಎಲ್ಲರೂ ಇದರ ಸದುಪಯೋಗವನ್ನು ಪಡೆಯುವಂತೆ ಸೂಚಿಸಿದರು. ಈಗಾಗಲೇ ಎಲ್ಲಾ ಶಾಖೆಗಳಲ್ಲೂ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಗ್ರಾಹಕರು ಹಾಗೂ ಸಾರ್ವಜನಿಕರು ಇದರ ಉಪಯೋಗವನ್ನು ಪಡೆದುಕೊಂಡಿರುತ್ತಾರೆ. […]
