ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್‍ರವರ ಗೌರವ ಉಪಸ್ಥಿತಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಕೆ. ರವರು ಸಂಘದ 2022ರ ಕ್ಯಾಲೆಂಡರ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ಸಂದೀಪ್ ಗರೋಡಿ, ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಮ್ಯಾನೆಜರ್ ಕಿಶೋರ್ ಕುಮಾರ್, ಕ್ಷೇತ್ರದ ಆಡಳಿತ ಮೋಕ್ತೆಸರರಾದ ಶ್ರೀ ದಾಮೋದರ ನಿಸರ್ಗ, […]
Month: December 2021
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 2020-21 ನೇ ಸಾಲಿನ ಸಹಕಾರ ಶಿಕ್ಷಣ ನಿಧಿಯನ್ನು ರಾಜ್ಯ ಸರಕಾರಕ್ಕೆ ನೀಡಲು ರೂ. 2,11,998/- ಮೊತ್ತದ ಚೆಕ್ಕನ್ನು ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ರವರು, ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಲಿ., ಮಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಾದ ಶ್ರೀ ಪುರುಷೋತ್ತಮ ಎಸ್. ಪಿ. ಇವರ ಮೂಲಕ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಕ್ಕೆ ಸಂಘದ ಪ್ರಧಾನ ಕಛೇರಿಯಲ್ಲಿ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ನಿರ್ದೇಶಕರಾದ ಶ್ರೀ ಸೀತಾರಾಮ್ ಎನ್. ಹಾಗೂ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಾದ ಶ್ರೀಮತಿ ಸೌಮ್ಯ ವಿಜಯ್ ಇವರು ಉಪಸ್ಥಿತರಿದ್ದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ 2020-21ನೇ ಸಾಲಿನ ವ್ಯವಹಾರದಲ್ಲಿ ಸರ್ವತೋಮುಖ ಪ್ರಗತಿಯನ್ನು ಸಾಧಿಸಿದ ಹಾಗೂ ಬ್ಯಾಂಕ್‍ನೊಂದಿಗೆ ಉತ್ತಮ ಭಾಂದವ್ಯ ಹೊಂದಿರುವುದಕ್ಕೆ ಅಭಿನಂದಿಸಿ “ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ 2020-21” ಪ್ರಶಸ್ತಿಯನ್ನು ದಿನಾಂಕ 14.12.2021 ರಂದು ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2020-21ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಇವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಇವರಿಗೆ ಪ್ರಶಸ್ತಿ ನೀಡಿ ಅಭಿನಂದಿಸಿ ಗೌರವಿಸಿದರು.
ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ವಿನಯ ಕುಮಾರ್ ಸೂರಿಂಜೆ ನಿರ್ದೇಶಕರುಗಳಾದ , ಶ್ರೀ ಟಿ.ಜಿ. ರಾಜಾರಾಮ ಭಟ್, ಶ್ರೀ ಭಾಸ್ಕರ್ ಎಸ್. ಕೋಟ್ಯಾನ್, ಶ್ರೀ ಬಿ. ನಿರಂಜನ್,ಶ್ರೀ ಎಂ.ವಾದಿರಾಜ್ ಶೆಟ್ಟಿ, ಶ್ರೀ ಸದಾಶಿವ ಉಳ್ಳಾಲ್, ಶ್ರೀ ಎಸ್.ರಾಜು ಪೂಜಾರಿ, ಶ್ರೀ ಶಶಿಕುಮಾರ್ ರೈ ಬಿ., ಶ್ರೀ ರಾಜೇಶ್ ರಾವ್, ಶ್ರೀ ಎಸ್.ಬಿ.ಜಯರಾಮ ರೈ, ಡಾ. ಐಕಳಬಾವ ದೇವಿ ಪ್ರಸಾದ್ ಶೆಟ್ಟಿ, ಶ್ರೀ ಮೋನಪ್ಪ ಶೆಟ್ಟಿ ಎಕ್ಕಾರು, ಶ್ರೀ ಕೆ.ಜೈರಾಜ್ ಬಿ. ರೈ, , ಶ್ರೀ ಕೆ. […]
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಶ್ರೀ ಚಿತ್ತರಂಜನ್ ಬೋಳಾರ್ ಹಾಗೂ ಉಪಾಧ್ಯಕ್ಷರಾಗಿ ಶ್ರೀ ನೇಮಿರಾಜ್. ಪಿ ಅವಿರೋಧವಾಗಿ ಪುನರಾಯ್ಕೆಗೊಂಡಿರುತ್ತಾರೆ.
ಸಂಘದ ಆಡಳಿತ ಮಂಡಳಿಯ ಮುಂದಿನ 5 ವರುಷ ಅವಧಿಗೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ನಿರ್ದೇಶಕರುಗಳಾದ ಶ್ರೀ ಜಿ. ಪರಮೇಶ್ವರ ಪೂಜಾರಿ, ಶ್ರೀ ಆನಂದ ಎಸ್. ಕೊಂಡಾಣ, ಶ್ರೀ ಸೀತಾರಾಮ್.ಎನ್, ಶ್ರೀ ರಮಾನಾಥ ಸನಿಲ್, ಶ್ರೀ ಚಂದ್ರಹಾಸ್ ಮರೋಳಿ, ಶ್ರೀ ಮುದ್ದು ಮೂಡುಬೆಳ್ಳೆ, ಶ್ರೀ ಬಿ.ಪಿ ದಿವಾಕರ, ಶ್ರೀ ಗೋಪಾಲ್ ಎಮ್. ಶ್ರೀಮತಿ ಚಂದ್ರಾವತಿ ಹಾಗೂ ಶ್ರೀಮತಿ ಉಮಾವತಿ ಇವರುಗಳ ಉಪಸ್ಥಿತಿಯಲ್ಲಿ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ ಎಂದು ಚುನಾವಣಾಧಿಕಾರಿಯಾದ ಶ್ರೀ ವಿಲಾಸ್ ರವರು […]