ಸಂಘದ ಆಡಳಿತ ಮಂಡಳಿಯ ಮುಂದಿನ 5 ವರುಷ ಅವಧಿಗೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ನಿರ್ದೇಶಕರುಗಳಾದ ಶ್ರೀ ಜಿ. ಪರಮೇಶ್ವರ ಪೂಜಾರಿ, ಶ್ರೀ ಆನಂದ ಎಸ್. ಕೊಂಡಾಣ, ಶ್ರೀ ಸೀತಾರಾಮ್.ಎನ್, ಶ್ರೀ ರಮಾನಾಥ ಸನಿಲ್, ಶ್ರೀ ಚಂದ್ರಹಾಸ್ ಮರೋಳಿ, ಶ್ರೀ ಮುದ್ದು ಮೂಡುಬೆಳ್ಳೆ, ಶ್ರೀ ಬಿ.ಪಿ ದಿವಾಕರ, ಶ್ರೀ ಗೋಪಾಲ್ ಎಮ್. ಶ್ರೀಮತಿ ಚಂದ್ರಾವತಿ ಹಾಗೂ ಶ್ರೀಮತಿ ಉಮಾವತಿ ಇವರುಗಳ ಉಪಸ್ಥಿತಿಯಲ್ಲಿ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ ಎಂದು ಚುನಾವಣಾಧಿಕಾರಿಯಾದ ಶ್ರೀ ವಿಲಾಸ್ ರವರು ಘೋಷಿಸಿದರು.