ಕಾರ್ಯಕ್ರಮ ಉದ್ಗಾಟಿಸಿ ಮಾತಾನಾಡಿದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ವೇದವ್ಯಾಸ ಕಾಮತ್ ರವರು ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್‌ರವರ ದಕ್ಷ ಮುಂದಾಳ್ವತದಲ್ಲಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳ ಜೊತೆಗೆ ಉಚಿತ ವೈದ್ಯಕೀಯ ಶಿಬಿರಗಳನ್ನು ಹಮ್ಮಿಕೊಳ್ಳುತ್ತಾ ಬರುತ್ತಿದೆ. ಇನ್ನು ಮುಂದೆಯೂ ಹೆಚ್ಚು ಹೆಚ್ಚು ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿ ಜನರ ಮೆಚ್ಚುಗೆಯನ್ನು ಪಡೆಯುವಂತಾಗಲಿ ಎಂದು ಹೇಳಿದರು. ಜನರು ಉಚಿತ ವೈದ್ಯಕೀಯ ಶಿಬಿರದಲ್ಲಿ ಸಿಗುವ ಸೌಲಭ್ಯವನ್ನು ಪಡೆದು, ಅದರ ಪ್ರಯೋಜನವನ್ನು ಪಡೆಯಬೇಕೆಂದು ವಿನಂತಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕಳೆದ 10 ವರ್ಷಗಳಿಂದ 40ಕ್ಕೂ ಮಿಕ್ಕಿ ಉಚಿತ ವ್ಯೆದ್ಯಕೀಯ ಶಿಬಿರಗಳನ್ನು ಆಯೋಜಿಸಿದೆ. ವೈದ್ಯಕೀಯ ತಪಾಸಣೆಯು ಕೇವಲ ಶಿಬಿರಗಳಿಗೆ ಸೀಮಿತವಾಗಬಾರದು, ಶಿಬಿರದಲ್ಲಿ ವೈದ್ಯರು ನೀಡಿದ ಸಲಹೆಗಳನ್ನು ಪಡೆದು ,ತಮ್ಮ ಆರೋಗ್ಯ ಸಮಸ್ಯೆಗಳನ್ನು ಪ್ರಾರಂಭದಲ್ಲೇ ತಿಳಿದು ಅದಕ್ಕೆ ತಕ್ಕ ಪರಿಹಾರ ಕಂಡುಕೊಳ್ಳಬೇಕೆAದು ನಮ್ಮ ಆಶಯ. ಈ ಉದ್ದೇಶದಿಂದ ನಾವು ಇಂತಹ ಉಚಿತ ಆರೋಗ್ಯ ಶಿಬಿರಗಳನ್ನು ನಡೆಸುತ್ತಾ ಬಂದಿದ್ದೇವೆ.
ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಇದರ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ. ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಶ್ರೀ ದಿವಾಕರ್ ಪಾಂಡೇಶ್ವರ, ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಶ್ರೀಮತಿ ವೀಣಾ ಮಂಗಳಾ, ಮಂಗಳೂರು ಮಹಾನಗರ ಪಾಲಿಕೆಯ ನಿಕಟಪೂರ್ವ ಸದಸ್ಯರಾದ ಶ್ರೀ ಜೆ. ಸುರೇಂದ್ರ, ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಮಧುಮೇಹ ಚಿಕಿತ್ಸಾ ತಜ್ನರಾದ ಡಾ. ಶ್ರೀಕಾಂತ್ ಹೆಗ್ಡೆ, ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರೀ ರಶೀದ್, ಶ್ರೀ ಗುರು ಆಯುರ್ವೇದದ ಶ್ರೀಮತಿ ಪ್ರಮೋದಾ ರಾಧಿಕಾ, ಆಯುರ್ವೇದ ವೈದ್ಯರಾದ ಡಾ. ರಾಧಿಕಾ ಭಟ್, ಕಂಕನಾಡಿ ಬ್ರಹ್ಮ ಬೈದರ್ಕಳ ಗರೋಡಿ ಕ್ಷೇತ್ರದ ಆಡಳಿತ ಮೋಕ್ತೆಸಶರರಾದ ಶ್ರಿ ದಿನೇಶ್ ಅಂಚನ್, ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ (ರಿ.) ಜಪ್ಪಿನಮೊಗರು ಇದರ ಅಧ್ಯಕ್ಷರಾದ ಶ್ರಿ ನಾಗರಾಜ್ ಬಿ.ವಿ, ಆರೋಗ್ಯ ಸಮಿತಿ ಸಂಚಾಲಕರಾದ ಶ್ರೀ ರಂಜನ್ ಕುಮಾರ್ ,ಮಹಿಳಾ ಘಟಕದ ಅಧ್ಯಕ್ಷೆಯಾದ ಶ್ರೀಮತಿ ಸುಮತಿ ಮೇಗಿನಮನೆ ಮತ್ತಿತ್ತರರು ಉಪಸ್ಥಿತರಿದ್ದರು. ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಶ್ರೀ ಪ್ರೇಮಾನಂದ ಶೆಟ್ಟಿ ಯವರು ಕಾರ್ಯಕ್ರಮಕ್ಕೆ ಆಗಮಿಸಿ ಶುಭಕೋರಿದರು.
ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ (ರಿ.) ಜಪ್ಪಿನಮೊಗರು ಇದರ ಪ್ರಧಾನ ಕಾರ್ಯದರ್ಶಿ ಶ್ರೀ ಚಂದ್ರಹಾಸ ಕಟ್ಟಪುಣಿ ಸ್ವಾಗತಿಸಿ, ಮಂದಿರದ ಮೇಲ್ವಿಚರಕರಾದ ಶ್ರೀ ಅಶೋಕ್ ತಂದೋಳಿಗೆ ವಂದಿಸಿದರು.