
ಸಂಘದ ಗ್ರಾಹಕರಾದ ಶ್ರೀ ಶಾಫಿಯವರು ಮಾತನಾಡಿ ಇತರೆ ಬ್ಯಾಂಕುಗಳAತೆ ನಮ್ಮ ಸಂಘವೂ ಮುಂದಿನ ದಿನಗಳಲ್ಲಿ ಮೊಬೈಲ್ ಅ್ಯಪ್ ಮೂಲಕ ಬ್ಯಾಂಕಿAಗ್ ಸೇವೆ ನೀಡುವಂತಾಗಲಿ ಎಂದರು.
ಸ0ಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಮಾತನಾಡಿ ಸಂಘವು ಈಗಾಗಲೇ ಮಾನ್ಸೂನ್ ವಿಶೇಷ ಚಿನ್ನಾಭರಣ ಸಾಲ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆಯಲ್ಲಿ ಕಡಿಮೆ ಬಡ್ಡಿಗೆ ಚಿನ್ನಾಭರಣ ಸಾಲದ ಜೊತೆಗೆ ವಿಶೇಷ ಕೊಡುಗೆಯನ್ನು ನೀಡುತ್ತಿದ್ದು ಗ್ರಾಹಕರು ಇದರ ಸದುಪಯೋಗ ಮಾಡಿಕೊಳ್ಳುವಂತೆ ತಿಳಿಸಿದರು. ವಾರ್ಷಿಕೋತ್ಸವದ ಪ್ರಯುಕ್ತ ತೊಕ್ಕೊಟ್ಟು ಶಾಖೆಯಲ್ಲಿ ಚಿನ್ನಾಭರಣ ಸಾಲದ ಗ್ರಾಹಕರನ್ನು ಪರಿಚಯಿಸಿದ ಸದಸ್ಯರಿಗೆ ವಿಶೇಷ ಕೊಡುಗೆಯನ್ನು ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಶ್ರೀ ಆನಂದ್ ಎಸ್. ಕೊಂಡಾಣ , ಶ್ರೀ ಚಂದ್ರಹಾಸ್ ಮರೋಳಿ, ಶ್ರೀ ಗೋಪಾಲ್ ಎಮ್. ಉಪಸ್ಥಿತರಿದ್ದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ. ವಂದಿಸಿದರು . ಶಾಖಾಧಿಕಾರಿ ಶ್ರೀಮತಿ ಹರಿಣಾಕ್ಷಿ ಪ್ರಶಾಂತ್ ಕಾರ್ಯಕ್ರಮ ನಿರೂಪಿಸಿದರು.