
ಈ ಕಾರ್ಯಕ್ರಮವನ್ನು ಮಹಾನಗರ ಪಾಲಿಕೆ ಸಾರ್ವಜನಿಕ ಆರೋಗ್ಯ,ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶ್ರೀ ಸಂದೀಪ್ ಗರೋಡಿ ಸಸಿ ನೆಡುವ ಮೂಲಕ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಮಾತನಾಡಿ ಪರಿಸರವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಂಘದ ವತಿಯಿಂದ ಪಡೀಲ್ ರಾಷ್ಟಿçÃಯ ಹೆದ್ದಾರಿಯ ಡಿವೈಡರ್ ಹಾಗು ಸುತ್ತಮುತ್ತ ಪರಿಸರದಲ್ಲಿ ಸುಮಾರು ೫೦೦ ಗಿಡಗಳನ್ನು ನೆಡಲಾಗಿದೆ ಹಾಗೂ ಈ ಸಸಿಗಳ ಪೋಷಣೆಯ ಸಂಪೂರ್ಣ ಜವಾಬ್ದಾರಿ ಸಂಘವೇ ವಹಿಸಲಿದೆ ಎಂದರು. ಈ ಕಾರ್ಯಕ್ರಮದಲ್ಲಿ ತಾರಸಿಯಲ್ಲಿ ಭತ್ತದ ಕೃಷಿಕರು ಶ್ರೀ ಕೃಷ್ಣಪ್ಪ ಗೌಡ ಪಡ್ಡಂಬೈಲ್ ಹಾಗೂ ಪರಿಸರ ಪ್ರೇಮಿ ಶ್ರೀ ಮಾಧವ ಉಳ್ಳಾಲ್ ಇವರಿಗೆ ಪರಿಸರ ಪುರಸ್ಕಾರ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಪ್ರಕಾಶ್ ರಾವ್, ಜಂಟಿ ನಿಬಂಧಕರು, ಕಾನೂನು ಕೋಶ, ಸಹಕಾರ ಇಲಾಖೆ, ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ (ನಿ.) ಬೆಂಗಳೂರು ಉಪಾಧ್ಯಕ್ಷರಾದ ಶ್ರೀ ಕೆ.ಕೆ. ಮಹೇಂದ್ರ ಪ್ರಸಾದ್ ಗೌಡ, ಪ್ರಭಾರ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಪಿ.ಆಶಾಲತಾ, ಮೂರ್ತೆದಾರರ ಮಹಾಮಂಡಲ ಇದರ ಅಧ್ಯಕ್ಷರಾದ ಶ್ರೀ ಸಂಜೀವ ಪೂಜಾರಿ, ಅಳಪೆ ಉತ್ತರ ವಾರ್ಡ್ ಕಾರ್ಪೋರೇಟರ್ ಶ್ರೀಮತಿ ರೂಪಶ್ರೀ, ಕಣ್ಣೂರು ವಾರ್ಡ್ ಕಾರ್ಪೋರೇಟರ್ ಶ್ರೀಮತಿ ಚಂದ್ರಾವತಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ನಿರ್ದೇಶಕರುಗಳಾದ ಶ್ರೀ ಜಿ. ಪರಮೇಶ್ವರ್ ಪೂಜಾರಿ, ಶ್ರೀ ಆನಂದ ಎಸ್.ಕೊಂಡಾಣ, ಶ್ರೀ ಸೀತಾರಾಮ್ ಎನ್., ಶ್ರೀ ರಮಾನಾಥ್ ಸನಿಲ್, ಶ್ರೀ ಚಂದ್ರಹಾಸ್ ಮರೋಳಿ, ಶ್ರೀ ಗೋಪಾಲ್ ಎಮ್., ಶ್ರೀ ದಿವಾಕರ ಬಿ.ಪಿ., ಶ್ರೀಮತಿ ಚಂದ್ರಾವತಿ, ಶ್ರೀಮತಿ ಉಮಾವತಿ ಉಪಸ್ಥಿತರಿದ್ದರು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಸ್ವಾಗತಿಸಿದರು ಹಾಗೂ ಸಿಬ್ಬಂದಿ ನಿತಿನ್ ನಿರೂಪಿಸಿದರು.