
ಕಾರ್ಯಕ್ರಮವನ್ನು ಉದ್ಘಾಟಿಸಿದ ಮುಲ್ಕಿ-ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್‍ರವರು ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ಗ್ರಾಹಕರು ಹಾಗೂ ಸಾರ್ವಜನಿಕರಿಗೆ ಆರೋಗ್ಯ ಶಿಬಿರದಂತಹ ಸಾಮಾಜಿಕ ಕಾರ್ಯವನ್ನು ಹಮ್ಮಿಕೊಳ್ಳುವ ಮೂಲಕ ಜನರ ಮನಸ್ಸನ್ನು ಮುಟ್ಟುವಂತಹ ಕೆಲಸವನ್ನು ಮಾಡುತ್ತಿದೆ ಎಂದರು.
ಮಾತಾ ಅಮ್ರತನಂದಾಮಯಿ ಮಠ ಬೋಳೂರು ಇದರ ವೈದ್ಯರಾದ ಡಾ. ದೇವದಾಸ್‍ರವರು ಮಾತನಾಡಿ ಜನರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಉತ್ತಮ ಆಹಾರ ಪದ್ಧತಿಯನ್ನು ಅನುಸರಿಸಬೇಕು. ಸಣ್ಣ ಆರೋಗ್ಯ ಸಮಸ್ಯೆ ಇದ್ದರೂ ಆರಂಭದಲ್ಲೇ ಚಿಕಿತ್ಸೆ ಪಡೆಯಬೇಕು ನಿರ್ಲಕ್ಷ್ಯ ಮಾಡಬಾರದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರು ಮಾತನಾಡಿ ಪ್ರತೀ ವರ್ಷವೂ ಪಂಜಿಮೊಗರು ಶಾಖೆಯ ಗ್ರಾಹಕರು ಹಾಗೂ ಸಾರ್ವಜನಿಕರಿಗೆ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಶಿಬಿರ ಆಯೋಜಿಸುತ್ತಿದ್ದು, ವರ್ಷದಿಂದ ವರ್ಷಕ್ಕೆ ಶಿಬಿರದ ಪ್ರಯೋಜನ ಪಡೆಯುವವರ ಸಂಖ್ಯೆಯು ಹೆಚ್ಚಾಗುತ್ತಿದ್ದು, ದಶಮಾನೋತ್ಸವದ ಪ್ರಯುಕ್ತ ಈ ಮೆಗಾ ಆರೋಗ್ಯ ಶಿಬಿರಕ್ಕೆ ಸಾರ್ವಜನಿಕರ ಧನಾತ್ಮಕ ಸ್ಪಂದನೆಗೆ ಕೃತಜ್ಞತೆಯನ್ನು ಸಲ್ಲಿಸಿದರು.
ಈ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀ ಪ್ರವೀಣ್ ಬಿ. ನಾಯಕ್, ಕರ್ನಾಟಕ ಸೌಹಾರ್ಧ ಸಹಕಾರಿಯ ಹಿರಿಯ ವ್ಯವಸ್ಥಾಪಕರಾದ ಶ್ರೀ ಗುರುಪ್ರಸಾದ್ ಬಂಗೇರ, ಕಾವೂರು ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಚಂದ್ರಶೇಖರ್ ಕುಮಾರ್, ಮಾತಾ ಅಮೃತಾನಂದಮಯಿ ಮಠದ ವೈದ್ಯಕೀಯ ಶಿಬಿರ ಆಯೋಜನಾಧಿಕಾರಿ ಶ್ರೀಮತಿ ಸುಚಿತ್ರಾ ಕೆ.ರಾವ್, ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಇದರ ಕಣ್ಣಿನ ವಿಭಾಗ ಮುಖ್ಯಸ್ಥರಾದ ಡಾ. ಬದ್ರಿನಾಥ್ ತಳ್ವಾರ್, ಶ್ರೀ ಶಾರದೋತ್ಸವ ಸೇವಾ ಟ್ರಸ್ಟ್‍ನ ಅಧ್ಯಕ್ಷರಾದ ಉಮೇಶ್ ಪೂಜಾರಿ ಮತ್ತು ಶ್ರೀ ಕೃಷ್ಣ ಭಜನಾ ಮಂದಿgದ ಅಧ್ಯಕ್ಷರಾz ಶ್ರೀÀ ವಾಮನ್ ಪೂಜಾರಿ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ನಿರ್ದೇಶಕರುಗಳಾದ ಪರಮೇಶ್ವರ ಜಿ. ಪೂಜಾರಿ, ಶ್ರೀ ರಮಾನಾಥ್ ಸನಿಲ್, ಶ್ರೀ ಚಂದ್ರಹಾಸ್ ಮರೋಳಿ, ಶ್ರೀ ಮುದ್ದು ಮೂಡುಬೆಳ್ಳೆ ಶ್ರೀ ಬಿ.ಪಿ. ದಿವಾಕರ್, ಶ್ರೀ ಗೋಪಾಲ್ ಎಂ., ಮತ್ತು ಶ್ರೀಮತಿ ಉಮಾವತಿ ಉಪಸ್ಥಿತರಿದ್ದರು. ಸಂಘದ ಸಿಬ್ಬಂದಿ ಶ್ರೀ ನಿತಿನ್ ಕಾರ್ಯಕ್ರಮ ನಿರೂಪಿಸಿದರು.