ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು, ಇದರ ಮಾಡೂರು ಶಾಖೆಯ ದಶಮಾನೋತ್ಸವದ ಪ್ರಯುಕ್ತ ಮೆಗಾ ಆರೋಗ್ಯ ಶಿಬಿರವು ಶ್ರೀ ಶಿರಡಿ ಸಾಯಿ ಬಾಬಾ ಮಂದಿರ , ಮಾಡೂರು ಕೋಟೆಕಾರು, ಇವರ ಜಂಟಿ ಸಹಯೋಗದೊಂದಿಗೆ, ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ , ನಾಟೆಕಲ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ಕೋಟೆಕಾರ್, ಇಲ್ಲಿಯ ನುರಿತ ವೈದ್ಯರ ತಂಡದವರಿಂದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಾಡೂರು ಶಾಖೆಯ ಆವರಣದಲ್ಲಿ ನಡೆಯಿತು.


ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಮಕ್ಕಳ ವಿಭಾಗದ ಎಚ್.ಓ.ಡಿ. ಡಾ. ಶಂಶಾದ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಹಕಾರಿ ಸೇವೆಯೊಂದಿಗೆ ಸಾಮಾಜಿಕ ಸೇವೆಯನ್ನು ಮಾಡುತ್ತಿರುವುದು ತುಂಬಾ ಒಳ್ಳೆಯ ಕೆಲಸವಾಗಿದೆ. ಮುಂದಿನ ಪೀಳಿಗೆಯವರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಉತ್ತಮ ಆಹಾರ ಪದ್ಧತಿಯನ್ನು ಅನುಸರಿಸಬೇಕು. ಒಳ್ಳೆಯ ಆರೋಗ್ಯ ಬೇಕಾದರೆ ಉತ್ತಮ ಆಹಾರ ವಿಧಾನ ಪಾಲಿಸಬೇಕು” ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಂಘದ ಸ್ಥಾಪಕ ಸದಸ್ಯರೂ ಹಾಗೂ ನಿವೃತ ಮುಖ್ಯೋಪಾಧ್ಯಾಯರಾದ ಶ್ರೀ ಬಿ. ಎಸ್. ಭಾಸ್ಕರ್ ರವರು ಮಾತನಾಡಿ “ಆತ್ಮಶಕ್ತಿ ಸಹಕಾರಿ ಸಂಘವು ನೀಡುತ್ತಿರುವ ಉಚಿತ ವೈದ್ಯಕೀಯ ಶಿಬಿರದಿಂದ ಅನೇಕ ಜನರು ಪ್ರಯೋಜನ ಪಡೆಯುತ್ತಿದ್ದಾರೆ. ಜನರು ಇನ್ನಷ್ಟು ಹೆಚ್ಚಿನ ಪ್ರಯೋಜನವನ್ನು ಪಡೆಯುವಂತಾಗಲಿ” ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರು ಮಾತನಾಡಿ ಪ್ರತೀ ವರ್ಷವೂ ಮಾಡೂರು ಶಾಖೆಯ ವಾಷಿಕೋತ್ಸವದ ಸಂದರ್ಭದಲ್ಲಿ ಶಾಖೆಯ ಗ್ರಾಹಕರು ಹಾಗೂ ಸಾರ್ವಜನಿಕರಿಗೆ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಶಿಬಿರ ಆಯೋಜಿಸುತ್ತಿದ್ದು, ವರ್ಷದಿಂದ ವರ್ಷಕ್ಕೆ ಶಿಬಿರದ ಪ್ರಯೋಜನ ಪಡೆಯುವವರ ಸಂಖ್ಯೆಯು ಹೆಚ್ಚಾಗುತ್ತಿದ್ದು, ಸಂಘದ ಸಾಮಾಜಿಕ ಕಾರ್ಯಕ್ಕೆ ಸಾರ್ವಜನಿಕರ ಧನಾತ್ಮಕ ಸ್ಪಂದನೆಗೆ ಕೃತಜ್ಞತೆಯನ್ನು ಸಲ್ಲಿಸಿದರು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಶಿರಡಿ ಸಾಯಿ ಬಾಬಾ ಮಂದಿರ ಮಾಡೂರು ಇದರ ಆಡಳಿತ ಮೊಕ್ತೇಸರರಾದ ಶ್ರೀ ಕೆ.ಪಿ ಸುರೇಶ್, ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಮಾಡೂರು ಇದರ ಗುರುಸ್ವಾಮಿ ಶ್ರೀ ಭಾಸ್ಕರ್, ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ. ನಿರ್ದೇಶಕರುಗಳಾದ ಶ್ರೀ ಆನಂದ ಎಸ್.ಕೊಂಡಾಣ, ಶ್ರೀ ರಮಾನಾಥ್ ಸನಿಲ್, ಶ್ರೀ ಚಂದ್ರಹಾಸ್ ಮರೋಳಿ, ಶ್ರೀ ಬಿ.ಪಿ. ದಿವಾಕರ್, ಶ್ರೀ ಗೋಪಾಲ್ ಎಂ. ಮತ್ತು ಶ್ರೀಮತಿ ಉಮಾವತಿ, ಉಪಸ್ಥಿತರಿದ್ದರು. ಸಂಘದ ಸಿಬ್ಬಂದಿ ಶ್ರೀ ನಿತಿನ್ ಕಾರ್ಯಕ್ರಮ ನಿರೂಪಿಸಿದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಸ್ವಾಗತಿಸಿದರು. ಮಾಡೂರು ಶಾಖೆಯ ಶಾಖಾಧಿಕಾರಿ ಶ್ರೀಮತಿ ಸೌಮ್ಯಲತಾ ವಂದಿಸಿದರು.