ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮಂಗಳೂರು ಇನ್ಸ್ಟಿಟ್ಯೂಟ್ ಆಪ್ ಆಂಕೊಲಾಜಿಯ ನಿರ್ದೇಶಕರು ಹಾಗೂ ಸೀನಿಯರ್ ಮೆಡಿಕಲ್ ಆಂಕೊಲಾಜಿಸ್ಟ್ ಡಾ. ಕೃಷ್ಣಪ್ರಸಾದ್ರವರು ಕ್ಯಾನ್ಸರ್ ರೋಗ ಬರಲು ಕಾರಣ, ಅದನ್ನು ತಡೆಗಟ್ಟುವಿಕೆ ಹಾಗೂ ನಿವಾರಣೆಯ ಬಗ್ಗೆ ಅತ್ಯುತ್ತಮ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಡಾ. ಕೃಷ್ಣಪ್ರಸಾದ್ರವರನ್ನು ಸಂಘದ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್, ನಿರ್ದೇಶಕರುಗಳಾದ ಶ್ರೀ ಚಂದ್ರಹಾಸ ಮರೋಳಿ , ಶ್ರೀ ಗೋಪಾಲ್ ಎಮ್. ಶ್ರೀಮತಿ ಉಮಾವತಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಮಂಗಳೂರು ಇನ್ಸ್ಟಿಟ್ಯೂಟ್ ಆಪ್ ಆಂಕೊಲಾಜಿ, ಸ್ಪೇಷಾಲಿಟಿ ಕ್ಯಾನ್ಸರ್ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ಶ್ರೀ ದುರ್ಗದಾಸ್ ಅಡಪ, ಶ್ರೀ ರಾಜೇಶ್ ಶೆಟ್ಟಿ ಮತ್ತಿತ್ತರರು ಉಪಸ್ಥಿತರಿದ್ದರು.