ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ| ಬಿ.ಜಿ.ಸುವರ್ಣರವರು ಕಾರ್ಯಕ್ರಮವನ್ನು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿ ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ಸೇವೆಯೊಂದಿಗೆ ವೈದ್ಯಕೀಯ ಸೇವೆಯನ್ನು ಮಾಡುತ್ತಿರುವುದು ತುಂಬಾ ಒಳ್ಳೆಯ ಕೆಲಸವಾಗಿದೆ. ಜನರು ಇನ್ನಷ್ಟು ಹೆಚ್ಚಿನ ಪ್ರಯೋಜನವನ್ನು ಪಡೆಯುವಂತಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರು ಮಾತನಾಡಿ ಸಂಘವು ಹಣಕಾಸಿನ ವ್ಯವಹಾರದೊಂದಿಗೆ ಸಾಮಾಜಿಕ ಸೇವೆಗೂ ಕೂಡ ಹೆಚ್ಚಿನ ಮಹತ್ವ ನೀಡುತ್ತಿದ್ದು ಸಂಘದ ವತಿಯಿಂದ ಗ್ರಾಹಕರು ಹಾಗೂ ಸಾರ್ವಜನಿಕರಿಗೆ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಶಿಬಿರ ಆಯೋಜಿಸುತ್ತಿದ್ದು, ವರ್ಷದಿಂದ ವರ್ಷಕ್ಕೆ ಶಿಬಿರದ ಪ್ರಯೋಜನ ಪಡೆಯುವವರ ಸಂಖ್ಯೆಯು ಹೆಚ್ಚಾಗುತ್ತಿದೆ. ಸಂಘದ ನೂತನ 25ನೇ ಶಾಖೆಯು ಶೀಘ್ರದಲ್ಲಿ ಕಾಪುವಿನಲ್ಲಿ ಶುಭಾರಂಭಗೊಳ್ಳಲಿದೆ ಎಂದರು.
ಕಾರ್ಯಕ್ರಮದಲ್ಲಿ2022ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಕುದ್ರೋಳಿ ಯುವಕ ಸಂಘ (ರಿ.) ಇದರ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಕೆ. ಹಾಗೂ ಸಂಘದ ಪಧಾದಿಕಾರಿಗಳನ್ನು ಆತ್ಮಶಕ್ತಿ ಸಂಘದ ವತಿಯಿಂದ ಸನ್ಮಾನಿಸುವ ಮೂಲಕ ಗೌರವಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ನಿರ್ದೇಶಕರುಗಳಾದ ಶ್ರೀ ರಮಾನಾಥ್ ಸನಿಲ್, ಶ್ರೀ ಚಂದ್ರಹಾಸ್ ಮರೋಳಿ, ಶ್ರೀ ಬಿ.ಪಿ. ದಿವಾಕರ್, ಶ್ರೀ ಗೋಪಾಲ್ ಎಂ., ಶ್ರೀಮತಿ ಉಮಾವತಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಜಸ್ಟಿಸ್ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಹಾಸ್ಪಿಟಲ್‍ನ ಎಲುಬು ಮತ್ತು ಮೂಳೆ ತಜ್ಞರಾದ ಡಾ| ಲಾರೆನ್ಸ್ ಮಥಾಯಿಸ್, ಕಣ್ಣಿನ ತಜ್ಞರಾದ ಡಾ| ವಸಂತಿ ಬಂಗೇರ, ಸಾರ್ವಜನಿಕ ಸಂಪರ್ಕ ಅಧಿಕಾರಿಯಾದ ಶ್ರೀ ಅಲೆನ್ ಶಾಜಿ, ಜೆ.ಟಿ ಪ್ರಿಂಟರ್ಸ್‍ನ ಮಾಲಕರಾದ ಶ್ರೀ ಜೋಸೆಫ್ ಥಿಯೋಡರ್, ಕುದ್ರೋಳಿ ಯುವಕ ಸಂಘದ ಗೌರವಾಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಬಂಗೇರ ಹಾಗೂ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು. ಈ ಶಿಬಿರದ ಪ್ರಯೋಜನವನ್ನು 250 ಕ್ಕೂ ಅಧಿಕ ಶಿಬಿರಾರ್ಥಿಗಳು ಪಡೆದರು. ಕುದ್ರೋಳಿ ಯುವಕ ಸಂಘದ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ರವರು ಸ್ವಾಗತಿಸಿ, ಕಾರ್ಯದರ್ಶಿ ಶ್ರೀ ಅರುಣ್ ಕುಮಾರ್ ರವರು ವಂದಿಸಿದರು. ಸಹಾಯಕ ಪ್ರಬಂಧಕರಾದ ಶ್ರೀ ವಿಶ್ವನಾಥ್‍ರವರು ಕಾರ್ಯಕ್ರಮ ನಿರೂಪಿಸಿದರು.