ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು, ಇದರ ದಶಮಾನೋತ್ಸವದ ಪ್ರಯುಕ್ತ ಮೆಗಾ ಆರೋಗ್ಯ ಶಿಬಿರವು ಕುದ್ರೋಳಿ ಯುವಕ ಸಂಘ (ರಿ.) ಇವರ ಜಂಟಿ ಸಹಯೋಗದೊಂದಿಗೆ ಜಸ್ಟಿಸ್ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಹಾಸ್ಪಿಟಲ್‍ನ ದೇರಳಕಟ್ಟೆ ಮಂಗಳೂರು ಇಲ್ಲಿಯ ನುರಿತ ವೈದ್ಯರ ತಂಡದವರಿಂದ ಕುದ್ರೋಳಿ ಯುವಕ ಸಂಘ (ರಿ.) ಕುದ್ರೋಳಿಯಲ್ಲಿ ನಡೆಯಿತು.


ಕಾರ್ಯಕ್ರಮದಲ್ಲಿ2022ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಕುದ್ರೋಳಿ ಯುವಕ ಸಂಘ (ರಿ.) ಇದರ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಕೆ. ಹಾಗೂ ಸಂಘದ ಪಧಾದಿಕಾರಿಗಳನ್ನು ಆತ್ಮಶಕ್ತಿ ಸಂಘದ ವತಿಯಿಂದ ಸನ್ಮಾನಿಸುವ ಮೂಲಕ ಗೌರವಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ನಿರ್ದೇಶಕರುಗಳಾದ ಶ್ರೀ ರಮಾನಾಥ್ ಸನಿಲ್, ಶ್ರೀ ಚಂದ್ರಹಾಸ್ ಮರೋಳಿ, ಶ್ರೀ ಬಿ.ಪಿ. ದಿವಾಕರ್, ಶ್ರೀ ಗೋಪಾಲ್ ಎಂ., ಶ್ರೀಮತಿ ಉಮಾವತಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಜಸ್ಟಿಸ್ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಹಾಸ್ಪಿಟಲ್‍ನ ಎಲುಬು ಮತ್ತು ಮೂಳೆ ತಜ್ಞರಾದ ಡಾ| ಲಾರೆನ್ಸ್ ಮಥಾಯಿಸ್, ಕಣ್ಣಿನ ತಜ್ಞರಾದ ಡಾ| ವಸಂತಿ ಬಂಗೇರ, ಸಾರ್ವಜನಿಕ ಸಂಪರ್ಕ ಅಧಿಕಾರಿಯಾದ ಶ್ರೀ ಅಲೆನ್ ಶಾಜಿ, ಜೆ.ಟಿ ಪ್ರಿಂಟರ್ಸ್‍ನ ಮಾಲಕರಾದ ಶ್ರೀ ಜೋಸೆಫ್ ಥಿಯೋಡರ್, ಕುದ್ರೋಳಿ ಯುವಕ ಸಂಘದ ಗೌರವಾಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಬಂಗೇರ ಹಾಗೂ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.