ಈ ಸಾಲ ಯೋಜನೆಯ ಪ್ರಯುಕ್ತ ಮೈಕ್ರೋ ಸಾಲವನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ರವರು ಸಂಘದ ಸದಸ್ಯರಾದ ಶ್ರೀಮತಿ ಶಾಲಿ, ಶ್ರೀಮತಿ ಶಕುಂತಲ ಹಾಗೂ ಶ್ರೀಮತಿ ನಂದಿನಿರವರಿಗೆ ವಿತರಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಸಹಾಯಕ ಪ್ರಬಂಧಕರಾದ ಶ್ರೀ ವಿಶ್ವನಾಥ, ನೀರುಮಾರ್ಗ ಶಾಖೆಯ ಶಾಖಾಧಿಕಾರಿ ಶ್ರೀ ಸಂದೀಪ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.