ಮಂಗಳ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಕೆ.ಜೆ.ದೇವಾಡಿಗ ಕ್ರೀಡಾ ಜ್ಯೋತಿ ಬೆಳಗಿಸುವ ಮೂಲಕ ಕ್ರೀಡಾ ಸಂಗಮಕ್ಕೆ ಚಾಲನೆ ನೀಡಿದರು. ಕರಾವಳಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಎ.ಎಸ್. ವೆಂಕಟೇಶ್ ಇವರು ಕ್ರೀಡಾ ಧ್ವಜಾರೋಹಣ ನಡೆಸಿದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್, ವಿಶ್ವಕರ್ಮ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಹರೀಶ್ ಆಚಾರ್, ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಜೈರಾಜ್ ಬಿ. ರೈ, ಬಂಟ್ವಾಳ ಕಾಥೋಲಿಕ್ ಕ್ರೆಡಿಟ್ ಕೋ-ಅಪರೇಟಿವ್ ಸಂಘದ ಅಧ್ಯಕ್ಷರಾದ ಶ್ರೀ ಜೀವನ್ ಲಾಯ್ಡ್ ಪಿಂಟೋ ಇವರುಗಳು ಸಹಕಾರಿ ವರ್ಣದ ಬೆಲೂನ್ ಹಾರಿಸುವುದರ ಮೂಲಕ ವಿವಿಧ ಕ್ರೀಡೆಗಳಿಗೆ ಚಾಲನೆ ನೀಡಿದರು.
ಈ ಕಾರ್ಯಕ್ರಮಕ್ಕೆ ಆಗಮಿಸಿದ ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಮಂಗಳೂರು ರಿಕ್ಷಾ ಮತ್ತು ಕಾರು ಚಾಲಕರ ಸಂಘ ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಐವನ್ ಡಿ’ಸೋಜಾ ರವರು ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ ನೀಡಿ, “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ದಶಮಾನೋತ್ಸವದ ಈ ಸುಸಂದರ್ಭದಲ್ಲಿ ಅವಿಭಜಿತ ದ.ಕ. ಜಿಲ್ಲೆಯ ಸಹಕಾರಿಗಳನ್ನು ಒಂದೇ ವೇದಿಕೆಯಲ್ಲಿ ಸೇರುವಂತೆ ಮಾಡಿರುವ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರ ಸಹಕಾರ ಮನೋಭಾವವನ್ನು ಪ್ರಶಂಸಿಸಿದರು.
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಭುವನೇಂದ್ರ ಸಹಕಾರಿ ಸಂಘ ಮಂಗಳೂರು ಇದರ ನಿರ್ದೇಶಕರಾದ ಶ್ರೀ ಡಿ. ವೇದವ್ಯಾಸ್ ಕಾಮತ್ರವರು ಮಹಿಳಾ ಹಾಗೂ ಪುರುಷರ ಹಗ್ಗಜಗ್ಗಾಟ ಪಂದ್ಯಕ್ಕೆ ಚಾಲನೆ ನೀಡಿ ಕ್ರೀಡಾಳುಗಳಿಗೆ ಶುಭ ಹಾರೈಸಿ ಮಾತನಾಡಿ ಆತ್ಮಶಕ್ತಿ ಸಹಕಾರ ಸಂಘವು ತನ್ನ ವಿಶಿಷ್ಟವಾದ ಕಾರ್ಯವೈಖರಿಯೊಂದಿಗೆ ಎಲ್ಲಾ ಸಹಕಾರಿಗಳ ಪ್ರಶಂಸೆಗೆ ಪಾತ್ರವಾಗಿದೆ ಎಂದರು.
ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಮಾತನಾಡಿ ಸಂಘದ ಹತ್ತು ವರ್ಷದ ಯಶಸ್ಸನ್ನು ಸವಿನೆನಪಿನಲ್ಲಿಡಲು ಅವಿಭಜಿತ ದ.ಕ. ಜಿಲ್ಲೆಯ ಸಹಕಾರಿಗಳಿಗೆ ಸಹಕಾರಿ ಕ್ರೀಡಾ ಸಂಗಮವನ್ನು ಆಯೋಜಿಸಲಾಗಿದೆ. ಈ ಕ್ರೀಡೋತ್ಸವದಲ್ಲಿ ಭಾಗವಹಿಸಿದ ಎಲ್ಲಾ ಸಹಕಾರಿ ಸಂಘಗಳಿಗೆ ಕೃತಜ್ಞತೆ ಸಲ್ಲಿಸಿದರು. ಮುಂದೆಯೂ ಇದೇ ರೀತಿ ವರ್ಷಂಪ್ರತಿ ಕ್ರೀಡೋತ್ಸವವನ್ನು ಆಯೋಜಿಸುವುದಾಗಿ ತಿಳಿಸಿದರು.
ಕ್ರೀಡಾ ಸಂಗಮದಲ್ಲಿ ದ.ಕ ಹಾಗೂ ಉಡುಪಿ ಜಿಲ್ಲೆಯ ಸುಮಾರು 500 ಕ್ಕೂ ಅಧಿಕ ಸಹಕಾರ ಸಂಘಗಳ ಆಡಳಿತ ಮಂಡಳಿ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು. ಈ ಕ್ರೀಡಾಕೂಟದಲ್ಲಿ ಪುರುಷರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಫಿಶ್ ಮಾರ್ಕ್ ಫೆಡರೇಶನ್ ನಿ. ಮಂಗಳೂರು ಇವರು ಪ್ರಥಮ ಸ್ಥಾನವನ್ನು, ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿ. ಕೊಕ್ಕರ್ಣೆ ಇವರು ದ್ವಿತೀಯ ಸ್ಥಾನವನ್ನು, ಕ್ರಿಕೆಟ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಸಮಾಜ ಸೇವಾ ಸಹಕಾರಿ ಸಂಘ ನಿ. ಬಂಟ್ವಾಳ, ಬಂಟ್ವಾಳ ಕಾಥೋಲಿಕ್ ಕ್ರೆಡಿಟ್ ಕೋ-ಅಪರೇಟಿವ್ ಸಂಘ ನಿ. ಬಿ.ಸಿ.ರೋಡ್ ದ್ವಿತೀಯ ಸ್ಥಾನವನ್ನು, ಹಗ್ಗಜಗ್ಗಾಟದಲ್ಲಿ ಸಮಾಜ ಸೇವಾ ಸಹಕಾರಿ ಸಂಘ ನಿ. ಬಂಟ್ವಾಳ, ಇವರು ಪ್ರಥಮ ಸ್ಥಾನವನ್ನು, ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಸುಳ್ಯ ಇವರು ದ್ವಿತೀಯ ಸ್ಥಾನವನ್ನು, ಮಹಿಳೆಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇವರು ಪ್ರಥಮ ಸ್ಥಾನವನ್ನು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಫಿಶ್ ಮಾರ್ಕ್ ಫೆಡರೇಶನ್ ನಿ. ಮಂಗಳೂರು ಇವರು ದ್ವಿತೀಯ ಸ್ಥಾನವನ್ನು, ಹಗ್ಗಜಗ್ಗಾಟದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇವರು ಪ್ರಥಮ ಸ್ಥಾನವನ್ನು, ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ನಿ. ಇವರು ದ್ವಿತೀಯ ಸ್ಥಾನವನ್ನು, ಕ್ರಿಕೆಟ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ವಿಶ್ವಕರ್ಮ ಸಹಕಾರಿ ಬ್ಯಾಂಕ್ ಮಂಗಳೂರು, ದ್ವಿತೀಯ ಸ್ಥಾನವನ್ನು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಫಿಶ್ ಮಾರ್ಕ್ ಫೆಡರೇಶನ್ ನಿ. ಮಂಗಳೂರು ಇವರು ಪಡೆದಿದ್ದಾರೆ. ಅಲ್ಲದೇ ಪುರುಷರು ಮತ್ತು ಮಹಿಳೆಯರಿಗೆ ವೈಯಕ್ತಿಕ ವಿಭಾಗದಲ್ಲಿ 100 ಮೀ. ಓಟ 200 ಮೀ. ಓಟ ಗುಂಡೆಸೆತ, ಉದ್ದ ಜಿಗಿತ ಹಾಗೂ ಇತರ ಮನೋರಂಜನಾ ಕ್ರೀಡೆಗಳು ಜರುಗಿತು.
ಈ ಸಹಕಾರಿ ಕ್ರೀಡಾ ಸಂಗಮದಲ್ಲಿ ದ.ಕ.ಜಿಲ್ಲಾ ಕೋಳಿ ಸಾಕಾಣೆದಾರರ ವಿವಿಧೋದ್ದೇಶ ಸಹಕಾರ ಸಂಘ, ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ದಯಾನಂದ ಅಡ್ಯಾರ್, ಸಮಾಜ ಸೇವಾ ಸಹಕಾರಿ ಸಂಘ ಬಂಟ್ವಾಳ ಇದರ ಅಧ್ಯಕ್ಷರಾದ ಶ್ರೀ ಸುರೇಶ್ ಕುಲಾಲ್, ಒಡಿಯೂರು ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿ. ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಸುರೇಶ್ ರೈ, ಮಂಗಳೂರು ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ಭಾಸ್ಕರ ರಾವ್, ಸಿಂಚನ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕರಾದ ಡಾ. ಜಯವಂತ್ ನಾಯಕ್, ಪ್ರಿಯದರ್ಶಿನಿ ಸಹಕಾರಿ ಸಂಘ ನಿ. ಹಳೆಯಂಗಡಿ ಇದರ ಅಧ್ಯಕ್ಷರಾದ ಹೆಚ್. ವಸಂತ್ ಬೆರ್ನಾರ್ಡ್, ಸಿಂಡಿಕೇಟ್ ರೈತರ ಸಹಕಾರಿ ಸಂಘ ಕೊಕ್ಕರ್ಣೆ ಇದರ ನಿರ್ದೇಶಕಿ ಡಾ. ಸುನಿತಾ ಶೆಟ್ಟಿ,, ಸೌಹಾರ್ದ ಸಹಕಾರಿ ಒಕ್ಕೂಟದ ಅಧಿಕಾರಿ ಶ್ರೀ ಗುರುಪ್ರಸಾದ್ ಬಂಗೇರ ಹಾಗೂ ಆ.ವಿ.ಸ.ಸಂಘದ ಉಪಾದ್ಯಕ್ಷರಾದ ಶ್ರೀ ನೇಮಿರಾಜ್ ಪಿ., ನಿರ್ದೇಶಕರುಗಳಾದ ಶ್ರೀ ಆನಂದ ಎಸ್. ಕೊಂಡಾಣ, ಶ್ರೀ ಚಂದ್ರಹಾಸ ಮರೋಳಿ, ಶ್ರೀ ದಿವಾಕರ ಬಿ.ಪಿ., ಶ್ರೀ ಗೋಪಾಲ್ ಎಮ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಬ್ರಹ್ಮಶ್ರೀ ನಾರಾಯಣಗುರು ಚ್ಯಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ವಾಮನ್ ಕೆ., ಹಾಗೂ ಇತರೆ ಸಹಕಾರಿ ಸಂಘದ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಸಮಾರೋಪ ಸಂಪನ್ನಗೊಂಡಿತು.