ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ದಶಮಾನೋತ್ಸವದ ಅಂಗವಾಗಿ ನಡೆದ ಗ್ರಾಹಕ ಸಭೆ ಹಾಗೂ ಸಿಬ್ಬಂದಿಗಳಿಗೆ ಸಾಧನಾ ಪ್ರಶಸ್ತಿ ವಿತರಣೆ ಕಾರ್ಯಕ್ರಮವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಸಂಘದ ಕೇಂದ್ರ ಕಛೇರಿ ಪಡೀಲ್ ಮಂಗಳೂರು ಇಲ್ಲಿ ಜರಗಿತು. ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶ್ರೀ ಮಾಧವ ಸುವರ್ಣ, ಶ್ರೀ ಕೃಷ್ಣಪ್ಪ ಗೌಡ ಪಡ್ಡಂಬೈಲ್, ಶ್ರೀ ಯಶವಂತ ಪೂಜಾರಿ, ಶ್ರೀ ಕೃಷ್ಣಪ್ಪ ಪೂಜಾರಿ ಎಮ್ ಹಾಗೂ ಶ್ರೀ ಗೋಪಾಲ ಇವರುಗಳು ದ್ವೀಪ ಪ್ರಜ್ವಲನೆ ಮಾಡುವುದರ ಮೂಲಕ ಚಾಲನೆ ನೀಡಿದರು.


ಸಂಘದ ಹಿರಿಯ ಸದಸ್ಯರಾದ ಶ್ರೀ ಕೃಷ್ಣಪ್ಪ ಪೂಜಾರಿ ಎಮ್. ಹಾಗೂ ಶ್ರೀ ಟಿಪೇಶ್ ಇವರು ಮಾತನಾಡಿ ಸಂಘದ ವ್ಯವಹಾರದ ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಸಂಘವು ಇನ್ನೂ ಹೆಚ್ಚು ವ್ಯವಹಾರವನ್ನು ವಿಸ್ತಾರ ಮಾಡಿ ಹೆಚ್ಚಿನ ಶಾಖೆಗಳನ್ನು ತೆರೆದು ಅಭಿವೃದ್ಧಿ ಹೊಂದುವಂತಾಗಲಿ ಹಾಗೂ ಸಂಘದ ಸಿಬ್ಬಂದಿ ವರ್ಗದ ಉತ್ತಮ ಸೇವೆಯನ್ನು ಹಾಗೂ ನಿರ್ದೇಶಕ ಮಂಡಳಿಯ ಕಾರ್ಯವೈಖರಿಯನ್ನು ಶ್ಲಾಘಿಸಿ ಶುಭ ಹಾರೈಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‍ರವರು ಸಂಘದ ಬೆಳವಣಿಗೆಗೆ ಸಹಕಾರ ನೀಡಿದ ಸರ್ವರನ್ನು ಅಭಿನಂದಿಸಿ ಸಂಘದ ಆಡಳಿತ ಮಂಡಳಿಯ ಕಾರ್ಯಯೋಜನೆಯಿಂದ, ಸಿಬ್ಬಂದಿಗಳ ಶ್ರಮದಿಂದ, ಸಲಹಾ ಸಮಿತಿ ಸದಸ್ಯರು ಹಾಗೂ ಎಲ್ಲಾ ಸದಸ್ಯರ ಸಹಕಾರದಿಂದ ಠೇವಣಿಗಳ ಸಂಗ್ರಹಣೆಯಲ್ಲಿ, ಸಾಲ ನೀಡುವಿಕೆಯಲ್ಲಿ ಹಾಗೂ ವಸೂಲಾತಿಯಲ್ಲಿ ಹೆಚ್ಚಿನ ಪ್ರಗತಿಯನ್ನು ಸಾಧಿಸಿದೆ. ಸಂಘದಲ್ಲಿ ಲಭ್ಯವಿರುವ ವಿವಿಧ ಸೇವೆಗಳ ಬಗ್ಗೆ ಮಾಹಿತಿ ಪಡೆದು ಇದರ ಸದುಪಯೋಗವನ್ನು sಸದಸ್ಯರು ಹಾಗೂ ಸಾರ್ವಜನಿಕರು ಪಡೆಯಬೇಕಾಗಿ ವಿನಂತಿಸಿದರು.ಶಾಖೆಯ ಪ್ರಗತಿಗೆ ಕಾರಣರಾದ ಸಿಬ್ಬಂದಿ ವರ್ಗವನ್ನು ಅಭಿನಂದಿಸಿದರು.
ಈ ಸಮಾರಂಭದಲ್ಲಿ ಸಂಘದ ಸಿಬ್ಬಂದಿಗಳಿಂದ “ದೇಯಿ ಬೈದೆತಿ” ನಾಟ್ಯ ರೂಪಕ ಕಾರ್ಯಕ್ರಮವನ್ನು ಸಂಯೋಜನೆ ಮಾಡಿದ ಕೌಶಿಕ್ ಗರೋಡಿ ಹಾಗೂ ದೀಕ್ಷಾ ಗರೋಡಿ ಇವರನ್ನು ಸನ್ಮಾನಿಸಲಾಯಿತು ಹಾಗೂ ಶಾಖೆಗಳ ವಿವಿಧ ಸೇವೆಯ ಪ್ರಗತಿಗೆ ಕಾರಣಕರ್ತರಾದ ಶಾಖೆಯ ಶಾಖಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ಸಂಘದ ಅಧ್ಯಕ್ಷರಾದ ಶ್ರೀಯುತ ಚಿತ್ತರಂಜನ್ ಬೋಳಾರ್, ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ಹಾಗೂ ನಿರ್ದೇಶಕರಾದ ಶ್ರೀ ಸೀತಾರಾಮ್ ಎಂ., ಶ್ರೀ ದಿವಾಕರ್ ಬಿ. ಪಿ., ಶ್ರೀ ಗೋಪಾಲ್ ಎಂ. ಶ್ರೀಮತಿ ಚಂದ್ರಾವತಿ ಮತ್ತು ಶ್ರೀಮತಿ ಉಮಾವತಿ ಇವರುಸಾಧನಾ ಪ್ರಶಸ್ತಿಗಳನ್ನು ನೀಡಿ ಗೌರವಿಸಿದರು.
ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಇವರು ಸ್ವಾಗತಿಸಿ, ಸಹಾಯಕ ಪ್ರಬಂಧಕರಾದ ಶ್ರೀ ವಿಶ್ವನಾಥ್ ರವರು ವಂದಿಸಿದರು. ಸಂಘದ ಮಾನವ ಸಂಪನ್ಮೂಲ ಅಧಿಕಾರಿ ಶ್ರೀಮತಿ ದೀಪಿಕಾ ಸನಿಲ್ ಕಾರ್ಯಕ್ರಮವನ್ನು ನಿರೂಪಿಸಿದರು.