ಅವರು ಎ. 30 ರಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 30ನೇ ಶಾಖೆಯನ್ನು ಮಾಣಿ ಕೊಡಾಜೆ ಎ.ಆರ್.ಕಾಂಪ್ಲೆಕ್ಸ್‍ನಲ್ಲಿ ಉದ್ಘಾಟಿಸಿ, ಮಾತನಾಡಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆ ವಹಿಸಿ, ಸಂಘವು ನಿರ್ದೇಶಕರ ಮತ್ತು ಸದಸ್ಯರ ಸಹಕಾರದಲ್ಲಿ ಪ್ರಗತಿ ಸಾಧಿಸಿದೆ. ಸಿಬಂದಿಗಳ ಉತ್ತಮ ಸೇವೆ ಗ್ರಾಹಕರಿಗೆ ಸಂತೃಪ್ತಿಯನ್ನು ಕೊಟ್ಟಿದೆ. ನಾಲ್ಕೈದು ಗ್ರಾಮಗಳ ಸಂಗಮವಾಗಿರುವ ಮಾಣಿಯಲ್ಲಿ 30ನೇ ಶಾಖೆ ತೆರೆಯುವ ಕನಸು ನನಸಾಗಿದೆ ಎಂದು ಹೇಳಿದರು. ಕ್ಯಾಂಪ್ಕೋ ಮಾಜಿ ಅಧ್ಯಕ್ಷರಾದ ಪದ್ಮನಾಭ ಕೊಂಕೋಡಿ ಮಾತನಾಡಿ, ಸಹಕಾರಿ […]
Month: May 2023
ಆತ್ಮಶಕ್ತಿ ವಿವಿದ್ಧೋದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ವತಿಯಿಂದ 50ನೇ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರವನ್ನು ದಿನಾಂಕ 23-04-2023ನೇ ರವಿವಾರ ಬೆಳಗ್ಗೆ ಸಮಯ 9.00ರಿಂದ ಮಧ್ಯಾಹ್ನ 1.00ರ ವರೆಗೆ “ಆತ್ಮಶಕ್ತಿ ಸೌಧ” ಬೈರಾಡಿಕೆರೆ ಹತ್ತಿರ, ಪಡೀಲ್, ಮಂಗಳೂರುನಲ್ಲಿ ಜರುಗಿತು.
ಶಿಬಿರವು ಜುಲೇಖಾ ಯೆನೆಪೋಯ ಇನ್ಸಿಟ್ಯೂಟ್ ಆಫ್ ಓಂಕೋಲಜಿ ಮತ್ತು ಸಮುದಾಯ ದಂತ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ , ಯೆನೆಪೋಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಯೆನೆಪೋಯ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟ ಲೇಡಿಗೋಶನ್ ಆಸ್ಪತ್ರೆ, ಮಂಗಳೂರು ದ.ಕ. ಇವರ ಜಂಟಿ ಸಹಯೋಗದೊಂದಿಗೆ ಆಯೋಜಿಸಲಾಯಿತು. ಗಣ್ಯರು ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀಯುತ […]
ಆತ್ಮಶಕ್ತಿ ವಿವಿದ್ಧೋದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಮಾಡೂರು ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಶಿರಡಿ ಸಾಯಿಬಾಬಾ ಮಂದಿರ ಮಾಡೂರು ಹಾಗೂ ವಿಶ್ವಭಾರತಿ (ರಿ.) ಸತ್ಯನಾರಾಯಣ ಮಂದಿರ ಮಾಡೂರು ಇವರ ಜಂಟಿ ಸಹಯೋಗದೊಂದಿಗೆ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ನಾಟೆಕಲ್ , ದೇರಳಕಟ್ಟೆ ಇಲ್ಲಿಯ ನುರಿತ ವೈದ್ಯರ ತಂಡದವರಿಂದ ಉಚಿತ ಕಣ್ಣಿನ ತಪಾಸಣೆ ಮತ್ತು ಮಾತಾ ಅಮೃತಾನಂದಮಯಿ ಮಠ ಬೋಳೂರು ಇಲ್ಲಿಯ ನುರಿತ ವೈದ್ಯರಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಮಾತೃಶ್ರೀ ಕಾಂಪ್ಲೆಕ್ಸ್, ಮಾಡೂರುನಲ್ಲಿರುವ ಮಾಡೂರು ಶಾಖೆಯ ಆವರಣದಲ್ಲಿ ಆಯೋಜಿಸಲಾಯಿತು.
ಈ ಕಾರ್ಯಕ್ರಮವನ್ನು ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಪೆÇ್ರಪೆಸರ್ ಹಾಗೂ ಎಚ್.ಓ.ಡಿ ಡಾ| ಬದ್ರಿನಾಥ್ ತಲ್ವಾರ್ , ಮಾತಾ ಅಮೃತಾನಂದಮಯಿ ಮಠದ ವೈದ್ಯರಾದ ಡಾ| ದೇವದಾಸ್ ಹಾಗೂ ಡಾ| ಸುಚಿತ್ರಾ ಸೊರಕೆರವರು ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಡಾ| ಬದ್ರಿನಾಥ್ ತಲ್ವಾರ್ ಇವರು ಮಾತನಾಡಿ ವೈದ್ಯಕೀಯ ಚಿಕಿತ್ಸೆಯ ಖರ್ಚು ವೆಚ್ಚಗಳ ಬಗ್ಗೆ ವಿವರಿಸಿದರು. ಇಂತಹ ಶಿಬಿರಗಳಿಂದ ಬಡ ಜನರಿಗೆ ಉತ್ತಮ ಚಿಕಿತ್ಸೆ ನೀಡಲು ಸಹಕಾರಿಯಾಗುತ್ತದೆ ಎಂದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಡಾ|| ದೇವದಾಸ್ ರವರು ಮಾತನಾಡಿ […]
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಇದರ ವತಿಯಿಂದ ನೀರುಮಾರ್ಗದ ಕುಂಡೇವು ಎಂಬಲ್ಲಿ ಶ್ರೀಮತಿ ದಯಾವತಿ ಇವರಿಗೆ ಸಂಘವು ನೀಡಿದ ಭರವಸೆಯಂತೆ ಸುಸಜ್ಜಿತವಾಗಿ ನವೀಕರಣಗೊಂಡ ಮನೆಯ ಪೂಜಾ ಕಾರ್ಯಕ್ರಮವು ಶ್ರೀ ಮನೋಜ್ ಶಾಂತಿಯವರ ಪೌರೋಹಿತ್ಯದಲ್ಲಿ ನಡೆಯಿತು.
ಆತ್ಮಶಕ್ತಿ ಸಂಘದ ಅಧ್ಯಕ್ಷರಾದ “ಸಹಕಾರ ರತ್ನ” ಶ್ರೀ ಚಿತ್ತರಂಜನ್ ಬೋಳಾರ್, ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ, ನಿರ್ದೇಶಕರಾದ ಶ್ರೀ ದಿವಾಕರ್ ಬಿ. ಪಿ, ಶ್ರೀಮತಿ ಉಮಾವತಿ, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿಯಾದ ಶ್ರೀ ಪದ್ಮರಾಜ್. ಆರ್, ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘ ನೀರುಮಾರ್ಗದ ಅಧ್ಯಕ್ಷರಾದ ಶ್ರೀ ಸತೀಶ್ ಅಂಚನ್, ಯುವವಾಹಿನಿ ಕೇಂದ್ರ ಘಟಕದ ಅಧ್ಯಕ್ಷರಾದ ಶ್ರೀ ರಾಜೇಶ್. ಬಿ, ಕಾರ್ಯದರ್ಶಿಯಾದ ಶ್ರೀ ಕುಸುಮಕರ್ ಕುಂಪಲ, ಮಂಗಳೂರು ಯುವ ವಾಹಿನಿ ಘಟಕದ ಅಧ್ಯಕ್ಷರಾದ ಶ್ರೀ ಗಣೇಶ್ […]
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಬಜ್ಪೆ ಶಾಖೆ ಇದರ 9ನೇ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀನಿವಾಸ ಇನ್ಸ್ ಟ್ಯೂಟ್ ಡೆಂಟಲ್ ಸಾಯನ್ಸ್ ಇವರ ಸಹಯೋಗದೊಂದಿಗೆ ಉಚಿತ ದಂತ ಚಿಕಿತ್ಸಾ ಶಿಬಿರವು ಮೊದಲನೇ ಮಹಡಿ, ಸುಜಾತ ಹೋಟೆಲ್ ಕಾಂಪ್ಲೆಕ್ಸ್ ,ಶಾಖೆಯ ಆವರಣದ ಬಳಿ ನಡೆಯಿತು. ಈ ಕಾರ್ಯಕ್ರಮವನ್ನು ಸಂಘದ ಗ್ರಾಹಕರಾದ ಶೀಯುತ ಚಂದಪ್ಪ ಕುಂದರ್ ಇವರು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀನಿವಾಸ ಇನ್ಸ್ ಟ್ಯೂಟ್ ಡೆಂಟಲ್ ಸಾಯನ್ಸ್ ಇಲ್ಲಿನ ವೈದ್ಯರಾದ ಡಾ|| ಸಪ್ನ ಇವರು ಮಾತನಾಡಿ ಹಲ್ಲಿನ ಸುಚಿತ್ವದ ಬಗ್ಗೆ ಮಾಹಿತಿ ಒದಗಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕಳೆದ 9 ವರ್ಷ ಗಳಿಂದ ಇಂತಹ ಶಿಬಿರವನ್ನು ಏರ್ಪಡಿಸುತ್ತಿದ್ದು, ವೈದ್ಯಕೀಯ ತಪಾಸಣೆಯು ಕೇವಲ ಶಿಬಿರಗಳಿಗೆ ಸೀಮಿತವಾಗಬಾರದು, ಶಿಬಿರದಲ್ಲಿ ವೈದ್ಯರು ನೀಡಿದ ಸಲಹೆಗಳನ್ನು ಪಡೆದು ,ತಮ್ಮ ಆರೋಗ್ಯ ಸಮಸ್ಯೆಗಳನ್ನು ಪ್ರಾರಂಭದಲ್ಲೇ ತಿಳಿದು ಅದಕ್ಕೆ ತಕ್ಕ ಪರಿಹಾರ ಕಂಡುಕೊಳ್ಳಬೇಕೆಂದು ತಿಳಿಸಿದರು.ಈ ಉದ್ದೇಶದಿಂದ ನಾವು ಇಂತಹ ಉಚಿತ ದಂತ ಶಿಬಿರಗಳನ್ನು ನಡೆಸುತ್ತಾ ಬಂದಿದ್ದೇವೆ ಎಂದರು. ಈ […]
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‍ರವರು ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ಗ್ರಾಮೀಣ ಪ್ರದೇಶಗಳು ಈಗ ಬೃಹತ್ ವೇಗದಲ್ಲಿ ಮತ್ತು ಪ್ರತಿಯೊಂದು ಹಂತದಲ್ಲೂ ಅಭಿವೃದ್ಧಿ ಹೊಂದುತ್ತಿವೆ. ಸಹಕಾರಿ ಸಂಘಗಳು ಇದರಲ್ಲಿ ಮಹತ್ತರ ಪಾತ್ರ ವಹಿಸುತ್ತಿವೆ. ಗ್ರಾಮೀಣ ಅಭಿವೃದ್ಧಿಯನ್ನು ಬೆಂಬಲಿಸಲು, ಗ್ರಾಮೀಣ ಪ್ರದೇಶದಲ್ಲಿ ಸಹಕಾರ ಸಂಘವು ಪರಸ್ಪರ ಸಹಾಯದ ಕಲ್ಪನೆಯನ್ನು ಅನುಸರಿಸುತ್ತದೆ. ಆತ್ಮಶಕ್ತಿ ಸಹಕಾರಿ ಸಂಘದ ಸೇವೆ ಬ್ಯಾಂಕಿಂಗ್ ವ್ಯವಹಾರಕ್ಕೆ ಮಾತ್ರ ಸೀಮಿತವಾಗಿರದೆ ಸಾಮಾಜಿಕವಾಗಿ ಮುಂದುವರಿದಿದೆ. ಸಂಘವು ಶೀಘ್ರದಲಿ ತನ್ನ 30ನೇ ಶಾಖೆಯನ್ನು ಮಾಣಿಯಲ್ಲಿ ಶುಭಾರಂಭಗೊಳಿಸಲಿದೆ ಎಂದು ಹೇಳಿದರು.
ನೂತನ ಶಾಖೆಯನ್ನು ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘ ನಿ. ಇದರ ಅಧ್ಯಕ್ಷರಾದ ಶ್ರೀ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ಉದ್ಘಾಟಿಸಿ ಮಾತನಾಡಿ ಆತ್ಮಶಕ್ತಿ ಸಹಕಾರಿ ಸಂಘವು ತನ್ನ ಬ್ಯಾಂಕಿಂಗ್ ವ್ಯವಹಾರದೊಂದಿಗೆ ಇನ್ನಿತರ ಸಾಮಾಜಿಕ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿರುತ್ತದೆ. ಇದಕ್ಕೆ ಇಂದಿನ ಉಚಿತ ಆರೋಗ್ಯ ತಪಾಸಣಾ ಶಿಬಿರವು ಉದಾಹರಣೆಯಾಗಿರುತ್ತದೆ. ಆತ್ಮಶಕ್ತಿ ಸಹಕಾರಿ ಸಂಘವು ಇನ್ನಷ್ಟು ಎತ್ತರಕ್ಕೆ ಏರಲಿ ಎಂದು ನೂತನ ಶಾಖೆಗೆ ಶುಭವನ್ನು ಹಾರೈಸಿದರು. ನೂತನ ಶಾಖೆಯನ್ನು ದ್ವೀಪ ಪ್ರಜ್ವಲನೆ ಮಾಡಿದ ಅಲಂಕಾರು ಗುಡ್ಡೆ ಭಂಡಾರ ಮನೆಯ […]
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸಂಘದ ಪ್ರಧಾನ ಕಛೇರಿ ಪಡೀಲ್‍ನಲ್ಲಿ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಸಮಾಜ ಸೇವಕರು ಹಾಗೂ ಸಂಘದ ಸದಸ್ಯರಾದ ಶ್ರೀಮತಿ ತಾರ ಹೇಮಚಂದ್ರ, ಕಸ್ತೂರ್ಬ ಮೆಡಿಕಲ್ ಕಾಲೇಜು ಮಂಗಳೂರು ಇದರ ಪ್ರೊಫೆಸರ್ ಆಫ್ ಪ್ಯಾಥಲಾಜಿ ಮತ್ತು ಮಾತಾಅಮೃತಾನಂದಮಯಿ ಮಠದಉಚಿತ ವೈದ್ಯಕೀಯ ಶಿಬಿರದ ವೈದ್ಯಾಧಿಕಾರಿಡಾ. ಸುಚಿತ್ರಾ ಕೆ. ರಾವ್ ಹಾಗೂ ಕರ್ನಾಟಕ ಸರಕಾರದ ಪ್ರತಿಷ್ಟಿತಕಿತ್ತೂರುರಾಣಿಚೆನ್ನಮ್ಮರಾಜ್ಯ ಪ್ರಶಸ್ತಿ ಪುರಸ್ಕøತರಾದ ಬಂಟ್ವಾಳದ ನ್ಯಾಯವಾದಿ ಶ್ರೀಮತಿ ಶೈಲಜಾರಾಜೇಶ್‍ಇವರನ್ನು ಸಂಘದ ವತಿಯಿಂದ ಸನ್ಮಾನಿಸುವ ಮೂಲಕ ಗೌರವಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪುರಸ್ಕøತರಾದ ಬಂಟ್ವಾಳದ ನ್ಯಾಯವಾದಿ ಶ್ರೀಮತಿ ಶೈಲಜಾರಾಜೇಶ್ “ಮಹಿಳಾ ದಿನವನ್ನು ಒಂದೇ ದಿನಕ್ಕೆ ಸೀಮಿತಗೊಳಿಸಲು ಖಂಡಿತಾ ಸಾಧ್ಯವಿಲ್ಲ, ಯಾಕೆಂದರೆ ಮನೆ, ಕುಟುಂಬ, ಕಚೇರಿ, ಮಕ್ಕಳು, ಕೆಲಸ ಹೀಗೆ ಎಲ್ಲವನ್ನೂ ಸಮರ್ಥವಾಗಿ ನಿಭಾಯಿಸುವ ಹೆಣ್ಣಿನ ಶಕ್ತಿಗೆ ಅದರದ್ದೇ ಆದ ಮಹತ್ವವಿದೆ. ಇದೇ ಕಾರಣಕ್ಕೆ ಹೆಣ್ಣಿಗೆ ಒಂದು ದಿನ ಮೀಸಲಿಟ್ಟು ಆಕೆಯ ಶ್ರಮ, ನಿಸ್ವಾರ್ಥ ಕೆಲಸವನ್ನು ಗೌರವಿಸಲಾಗುತ್ತದೆ. ಇದು ಪ್ರತಿಯೊಬ್ಬರ ಬದುಕಿನಲ್ಲೂ ಪ್ರಮುಖ ಪಾತ್ರ ವಹಿಸುವ ಹೆಣ್ಣಿಗೆ ಧ್ಯನವಾದ ಹೇಳುವ […]