ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷರಾದ “ಸಹಕಾರ ರತ್ನ’’ ಶ್ರೀಯುತ ಚಿತ್ತರಂಜನ್ ಬೋಳಾರ್‍ರವರು ಮಾತನಾಡಿ, ಸಂಘದ ಅಭಿವೃದ್ಧಿಯಲ್ಲಿ ಆಡಳಿತ ಮಂಡಳಿಯೊಂದಿಗೆ ಸಿಬ್ಬಂದಿ ವರ್ಗ, ಎಲ್ಲಾ ಸದಸ್ಯರು ಹಾಗೂ ಗ್ರಾಹಕರ ಸಹಕಾರದಿಂದ ಪ್ರತಿ ವರ್ಷದಂತೆ ಈ ವರ್ಷಯು
ಗಮನಾರ್ಹ ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯವಾಗಿದೆ. ಗ್ರಾಹಕರ ಅನೂಕೂಲಕೋಸ್ಕರ ಇ-ಸ್ಟಾಂಪ್ ಸೇವೆಯು ಸಂಜೆ 6 ಗಂಟೆಯವರೆಗೆ ಲಭ್ಯವಿದೆ ಮತ್ತುಸಂಘದ ಲಭ್ಯವಿರುವ ಸೇವೆಗಳನ್ನು ಸದುಪಯೋಗ ಮಾಡಿಕೊಳ್ಳುವಂತೆ ಗ್ರಾಹಕರಲ್ಲಿ ವಿನಂತಿಸಿದರು. ಹಾಗೂ ನೂತನವಾಗಿ ಜಾರಿಗೊಳಿಸಿರುವ ಪಿಗ್ಮಿ ಆಪ್ ನಲ್ಲಿ ಗ್ರಾಹಕರಿಗೆ ಅನುಕೂಲವಾಗುವಂತೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸುಧಾರಣೆಯನ್ನು ತರಲಾಗುವುದು ಎಂದು ತಿಳಿಸಿದರು.
ಸಂಘದ ಸದಸ್ಯರಾದ ಶ್ರೀ ದಯಾನಂದ ಆರ್ ಕೆ ಮತ್ತು ಶ್ರೀ ರಾಜಾರಾಮ್ ಇವರು ಸಂಘವು ನೀಡುತ್ತಿರುವ ಇ-ಸ್ಟಾಂಪಿಂಗ್ ಸೇವೆಯನ್ನು ಸಂಜೆ 6 ಗಂಟೆಯವರೆಗೆ ನೀಡುತ್ತಿರುವುದನ್ನು ಶ್ಲಾಘಿಸಿದರು ಮತ್ತು ಪಿಗ್ಮಿ ಸಂಗ್ರಾಹಕರ ಕಾರ್ಯವೈಖರಿಯನ್ನು ಪ್ರಶಂಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ , ನಿರ್ದೇಶಕರಾದ ಶ್ರೀ ಬಿ. ಪಿ ದಿವಾಕರ, ಶ್ರೀ ಗೋಪಾಲ್ ಎಮ್, ಶ್ರೀಮತಿ ಉಮಾವತಿ ಹಾಗೂ ಮತ್ತಿತ್ತರರು ಉಪಸ್ಥಿತರಿದ್ದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಸ್ವಾಗತಿಸಿ, ಸಂಘದ ಸಿಬ್ಬಂದಿಯಾದ ಶ್ರೀಮತಿ ಸುಮಲತಾ ವಂದಿಸಿದರು. ಶಾಖಾಧಿಕಾರಿ ಶ್ರೀಮತಿ ಅನ್ವಿತಾ ನಿರೂಪಿಸಿದರು.