ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ರವರು ಪರಿಸರ ಸಂರಕ್ಷಣೆಯ ಮಹತ್ವವನ್ನು ವಿವರಿಸಿದರು.
ಸಂಘದ ವತಿಯಿಂದ ಪಡೀಲ್ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಹಾಗೂ ಸುತ್ತಮುತ್ತ ಪರಿಸರದಲ್ಲಿ ಸುಮಾರು 300 ಗಿಡಗಳನ್ನು ನೆಡಲಾಗಿದೆ.
ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಇದರ ಅಧ್ಯಕ್ಷರಾದ ಶ್ರೀ ಶೀನ ಪೂಜಾರಿ, ಲಿಯೋ ಕ್ಲಬ್ ಇದರ ಅಧ್ಯಕ್ಷರಾದ ಶ್ರೀ ಕ್ರಿಸ್ ಟೆಲ್ಲಿಸ್, ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್ನ ಪದಾಧಿಕಾರಿಗಳು, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿ., ಮಂಗಳೂರು ಇದರ ನಿರ್ದೇಶಕರಾದ ಶ್ರೀ ಶಶಿಕುಮಾರ್ ರೈ ಬಲ್ಯೋಟ್ಟು, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ನಿರ್ದೇಶಕರುಗಳಾದ ಶ್ರೀ ಜಿ. ಪರಮೇಶ್ವರ್ ಪೂಜಾರಿ, ಶ್ರೀ ಆನಂದ ಎಸ್.ಕೊಂಡಾಣ, ಶ್ರೀ ಸೀತಾರಾಮ್ ಎನ್., ಶ್ರೀ ರಮಾನಾಥ್ ಸನಿಲ್, ಶ್ರೀ ದಿವಾಕರ್ ಬಿ.ಪಿ., ಶ್ರೀ ಗೋಪಾಲ್ ಎಮ್., ಶ್ರೀಮತಿ ಉಮಾವತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.