ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಇದರ 2022-23 ನೇ ಸಾಲಿನ 12 ನೇ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ದಿನಾಂಕ 03.09.2023 ರ ಭಾನುವಾರ ಪೂರ್ವಾಹ್ನ ೧೦.೩೦ಕ್ಕೆ ಪಡೀಲಿನ ಬೈರಾಡಿಕೆರೆ ಹತ್ತಿರದ ಸಂಘದ ಪ್ರಧಾನ ಕಛೇರಿ “ಆತ್ಮಶಕ್ತಿ ಸೌಧ”ದ ಸಭಾಂಗಣದಲ್ಲಿ ಜರುಗಿತು.

ಸಂಘದ 2022-23ನೇ ಸಾಲಿನ ವಾರ್ಷಿಕ ವರದಿ ಲೆಕ್ಕಪತ್ರವನ್ನು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಸೌಮ್ಯ ವಿಜಯ್‌ರವರು ಸಭೆಯಲ್ಲಿ ಮಂಡಿಸಿದರು. ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ ಸಂಘವು ಪ್ರಸ್ತುತ ಅವಿಭಜಿತ ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ಒಟ್ಟು 30 ಶಾಖೆಗಳನ್ನು ಹೊಂದಿದ್ದು, 2023-24ನೇ ಸಾಲಿನಲ್ಲಿ ಸಂಘದ ಕಾರ್ಯವ್ಯಾಪ್ತಿಯಲ್ಲಿ ಇನ್ನೂ ಹೆಚ್ಚಿನ ಹೊಸ ಶಾಖೆಗಳನ್ನು ತೆರೆದು, ವಿವಿಧ ಯೋಜನೆಗಳ ಮೂಲಕ ಸದಸ್ಯರಿಂದ ರೂ. 250 ಕೋಟಿಗೂ ಮಿಕ್ಕಿ ಠೇವಣಿಗಳನ್ನು ಸಂಗ್ರಹಿಸಿ, ರೂ.200 ಕೋಟಿಗೂ ಮಿಕ್ಕಿ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ (ನಿ.) ಮಂಗಳೂರು ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 169 ನೇ ಜಯಂತಿಯ ಆಚರಣೆಯನ್ನು ಸಂಘದ ಪ್ರಧಾನ ಕಛೇರಿಯಲ್ಲಿ ದಿನಾಂಕ 31.08.2023 ರಂದು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಮಹಿಳಾ ಸಿಬ್ಬಂದಿಗಳು ಭಜನೆ ಹಾಗೂ ಕುಣಿತ ಭಜನೆಯನ್ನು ಭಕ್ತಿಪೂರ್ವಕವಾಗಿ ನಡೆಸಿಕೊಟ್ಟರು. ಪುರೋಹಿತರಾದ ಶ್ರೀಯುತ ಮನೋಜ್ ಶಾಂತಿ ಇವರು ಗುರುಪೂಜೆ ನಡೆಸಿ ನಂತರ ಪ್ರಸಾದ ವಿತರಣೆಯನ್ನು ನಡೆಸಿದರು.

ಈ ಶುಭ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್, ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ , ನಿರ್ದೇಶಕರುಗಳಾದ ಶ್ರೀ ಜಿ. ಪರಮೇಶ್ವರ್ ಪೂಜಾರಿ, ಶ್ರೀ ಆನಂದ ಎಸ್. ಕೊಂಡಾಣ,ಶ್ರೀ ರಮಾನಾಥ್ ಸನಿಲ್,ಶ್ರೀ ಬಿ.ಪಿ ದಿವಾಕರ್,ಶ್ರೀ ಗೋಪಾಲ್ ಎಮ್,ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರಾದ ಶ್ರೀ ವಾಮನ್ ಕೆ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಸಂಘದ ಸದಸ್ಯರುಗಳು ಹಾಗೂ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಇದರ 53ನೇ ಉಚಿತ ನೇತ್ರ ತಪಾಸಣಾ, ದಂತ ಚಿಕಿತ್ಸಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರವು ಹಾಗೂ ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಇವರ ಜಂಟಿ ಸಹಯೋಗದೊಂದಿಗೆ ಮಾತಾ ಅಮೃತಾನಂದಮಯಿ ಮಠ ಬೋಳೂರು ಮಂಗಳೂರು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ, ಶ್ರೀನಿವಾಸ್ ಇನ್ಸ್ಟ್ಯೂಟ್ ಆ¥s಼ï ಡೆಂಟಲ್ ಸಾಯನ್ಸ್ ಮುಕ್ಕ ಇಲ್ಲಿಯ ನುರಿತ ವೈದ್ಯ ತಂಡದವರೊAದಿಗೆ ದ.ಕ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ (ರಿ.) ಮಂಗಳೂರು ಇದರ ಸದಸ್ಯರಿಗೆ ಉಚಿತ ನೇತ್ರ ತಪಾಸಣಾ, ದಂತ ಚಿಕಿತ್ಸಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರವು ದಿನಾಂಕ ೨೭.೦೮.೨೦೨೩ರಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಸಮುದಾಯ ಭವನದ ಸಭಾಂಗಣದಲ್ಲಿ ಜರುಗಿತು.

ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ (ನಿ.) ಇದರ ಅಧ್ಯಕ್ಷರಾದ ಶ್ರೀ ಪಿ ಕೆ ಕೃಷ್ಣ ರವರು ದೀಪ ಪ್ರಜ್ವಲಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ “ಸಹಕಾರಿ ಸಂಸ್ಥೆಗಳು ಕೇವಲ ಲಾಭದ ದೃಷ್ಟಿಯನ್ನು ಹೊಂದದೆ ಜೊತೆಗೆ ಜನರ ಅರೋಗ್ಯ ದೃಷ್ಟಿಯಿಂದ ಉಚಿತವಾಗಿ ಸಾರ್ವಜನಿಕರಿಗೆ ಇಂತಹ ವ್ಯೆದಕೀಯ ತಪಾಸಣೆ ಮತ್ತು ಚಿಕಿತ್ಸೆಯನ್ನು ಉತ್ತಮ ಗುಣಮಟ್ಟದಲ್ಲಿ ನೀಡುತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೆಲಸ ಶ್ಲಾಘನೀಯ. ಸಂಘದ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸಿ ,ಸಮಾಜಿಕ ಕಳಕಳಿಯನ್ನು ಹೊಂದಿರುವ ಅತ್ಮಶಕ್ತಿ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ 2022-23ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ “ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ ೨೦೨೨-೨೩” ಪ್ರಶಸ್ತಿಯನ್ನು ದಿನಾಂಕ ೧೯/೦೮/೨೦೨೩ ರಂದು ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ೨೦೨೨-೨೩ನೇ ಸಾಲಿನ ವಾರ್ಷಿಕ ಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಇವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು 2012 ರಲ್ಲಿ ಪ್ರಾರಂಭವಾಗಿ ದಶಮಾನೋತ್ಸವಕ್ಕೆ ನಗರದ ಪಡೀಲ್ ನಲ್ಲಿ ಸ್ವಂತ ಪ್ರಧಾನ ಕಛೇರಿಯನ್ನು ಹೊಂದಿರುತ್ತದೆ. 2023 ನೇ ಸಾಲಿನಲ್ಲಿ 2000 ಕೋಟಿಗೂ ಮಿಕ್ಕಿ ವ್ಯವಹಾರದೊಂದಿಗೆ, ದುಡಿಯುವ ಬಂಡವಾಳ 22118.10 ಲಕ್ಷ ಹೊಂದಿದ್ದು, ರೂ. 2.32 ಕೋಟಿಗೂ ಮಿಕ್ಕಿ ಲಾಭ ಗಳಿಸಿರುತ್ತದೆ. ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಶ್ರೀ ಬಿ. ನಿರಂಜನ್, ಶ್ರೀ ಭಾಸ್ಕರ್ ಎಸ್. ಕೋಟ್ಯಾನ್, ಶ್ರೀ ಟಿ.ಜಿ. ರಾಜಾರಾಮ ಭಟ್, ಶ್ರೀ ಎಂ. […]

ಆಟಿ ತಿಂಗಳಲ್ಲಿ ತುಳು ಜನರು ಆಚರಣೆ ಮಾಡುವ ಆಟಿಡೊಂಜಿ ದಿನವನ್ನು “ಆಟಿದ ಅರಗಣೆ ” ಎಂಬ ಹೆಸರಿನಿಂದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ(ನಿ.) ಮಂಗಳೂರು ಇದರ ಪ್ರಧಾನ ಕಛೇರಿಯಲ್ಲಿ ದಿನಾಂಕ 06.08.2023 ರಂದು ಆಚರಿಸಲಾಯಿತು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತಾಡಿದ ಇವರು ಆಟಿ ತಿಂಗಳಲ್ಲಿ ಆಚರಣೆ ಮಾಡುವ ಆಟಿಡೊಂಜಿ ದಿನವನ್ನು ನಮ್ಮ ಸಂಸ್ಥೆಯಲ್ಲಿ “ಆಟಿದ ಅರಗಣೆ ” ಎಂಬ ಹೆಸರಿನಿಂದ ನಮ್ಮ ಸಂಸ್ಥೆಯ ಎಲ್ಲಾ ಸಿಬ್ಬಂದಿಗಳ ಪೂರ್ಣ ಸಹಕಾರದಿಂದ ಅತ್ಯಂತ ಅರ್ಥಪೂರ್ಣವಾಗಿ ಆಚರಣೆ ಮಾಡುತ್ತಾ ಇದ್ದೇವೆ. ಇದರಲ್ಲಿ ನಮ್ಮ ಸಿಬ್ಬಂದಿಗಳು ಅವರ ಮನೆಯಲ್ಲಿ ತಯಾರು ಮಾಡಿದ ರುಚಿ ರುಚಿಯಾದ ತುಳುನಾಡಿನ ಆಟಿ ತಿಂಗಳಿನ ವಿವಿಧ ತಿಂಡಿ […]