ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಇದರ 53ನೇ ಉಚಿತ ನೇತ್ರ ತಪಾಸಣಾ, ದಂತ ಚಿಕಿತ್ಸಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರವು ಹಾಗೂ ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಇವರ ಜಂಟಿ ಸಹಯೋಗದೊಂದಿಗೆ ಮಾತಾ ಅಮೃತಾನಂದಮಯಿ ಮಠ ಬೋಳೂರು ಮಂಗಳೂರು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ, ಶ್ರೀನಿವಾಸ್ ಇನ್ಸ್ಟ್ಯೂಟ್ ಆ¥s಼ï ಡೆಂಟಲ್ ಸಾಯನ್ಸ್ ಮುಕ್ಕ ಇಲ್ಲಿಯ ನುರಿತ ವೈದ್ಯ ತಂಡದವರೊAದಿಗೆ ದ.ಕ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ (ರಿ.) ಮಂಗಳೂರು ಇದರ ಸದಸ್ಯರಿಗೆ ಉಚಿತ ನೇತ್ರ ತಪಾಸಣಾ, ದಂತ ಚಿಕಿತ್ಸಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರವು ದಿನಾಂಕ ೨೭.೦೮.೨೦೨೩ರಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಸಮುದಾಯ ಭವನದ ಸಭಾಂಗಣದಲ್ಲಿ ಜರುಗಿತು.


ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ (ನಿ.) ಇದರ ಅಧ್ಯಕ್ಷರಾದ ಶ್ರೀ ಪಿ ಕೆ ಕೃಷ್ಣ ರವರು ದೀಪ ಪ್ರಜ್ವಲಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ “ಸಹಕಾರಿ ಸಂಸ್ಥೆಗಳು ಕೇವಲ ಲಾಭದ ದೃಷ್ಟಿಯನ್ನು ಹೊಂದದೆ ಜೊತೆಗೆ ಜನರ ಅರೋಗ್ಯ ದೃಷ್ಟಿಯಿಂದ ಉಚಿತವಾಗಿ ಸಾರ್ವಜನಿಕರಿಗೆ ಇಂತಹ ವ್ಯೆದಕೀಯ ತಪಾಸಣೆ ಮತ್ತು ಚಿಕಿತ್ಸೆಯನ್ನು ಉತ್ತಮ ಗುಣಮಟ್ಟದಲ್ಲಿ ನೀಡುತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೆಲಸ ಶ್ಲಾಘನೀಯ. ಸಂಘದ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸಿ ,ಸಮಾಜಿಕ ಕಳಕಳಿಯನ್ನು ಹೊಂದಿರುವ ಅತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಸ್ಥೆ ಇನ್ನಷ್ಟು ಅಭಿವೃದ್ಧಿ ಹೊಂದಲಿ” ಎಂದರು.

ಆತ್ಮಶಕ್ತಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತಾನಾಡಿ ಆರೋಗ್ಯವೇ ಭಾಗ್ಯ ಈ ನಿಟ್ಟಿನಲ್ಲಿ ಸಂಘವು ಹನ್ನೊಂದನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದು ಸಂಘವು ನಿರಂತರವಾಗಿ ಉಚಿತ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬಂದಿದೆ. ೫೩ ನೇ ಉಚಿತ ಆರೋಗ್ಯ ಶಿಬಿರವು ಇದಾಗಿದ್ದು ನಮ್ಮ ಸಹಕಾರ ಸಂಘದ ಮೂಲಕ ಏರ್ಪಡಿಸಿದ ಆರೋಗ್ಯ ಶಿಬಿರಗಳ ಪ್ರಯೋಜನವನ್ನು ಈಗಾಗಲೇ ಸುಮಾರು ೧೫೦೦೦ ಕ್ಕೂ ಮಿಕ್ಕಿ ಜನರು ಪಡೆದಿರುತ್ತಾರೆ. ಕಣ್ಣಿನ ಪೊರೆಯ ಶಸ್ತçಚಿಕಿತ್ಸೆಯನ್ನು ೪೦೦ ಕ್ಕೂ ಮಿಕ್ಕಿ ಜನರಿಗೆ ಮಾಡಲಾಗಿದೆ. ಈಗಾಗಲೇ ಸಂಘವು ಸುಮಾರು ೧೦೦೦೦ ಜನರಿಗೆ ಉಚಿತ ಕನ್ನಡಕವನ್ನು ವಿತರಿಸುತ್ತಾ ಬಂದಿರುತ್ತದೆŒ, “ನಮ್ಮ ಸಂಸ್ಥೆಯ ಶಾಖೆಯಿರುವ ಪ್ರತಿ ಗ್ರಾಮದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಸಾರ್ವಜನಿಕರಿಗೆ ನಡೆಸುತಿರುವ ೫೩ ನೇ ಉಚಿತ ವ್ಯೆದಕೀಯ ಶಿಬಿರವಾಗಿದ್ದು, ಮುಂದೆಯೂ ಪ್ರತಿ ವರ್ಷವೂ ನಿರಂತರವಾಗಿ ಗ್ರಾಹಕರ ಹಾಗೂ ಸಾರ್ವಜನಿಕರ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಇಂತಹ ಶಿಬಿರವನ್ನು ನಡೆಸಲಿದ್ದೇವೆ. ಸಂಸ್ಥೆಯ ಅಭಿವೃದ್ಧಿಗೆ ಎಲ್ಲರ ಸಹಕಾರ, ಪ್ರೋತ್ಸಾಹ ನಿರಂತರವಾಗಿ ಇರಲಿ ಎಂದು ಹೇಳಿದರು.
ಕರ್ಸ್ತೂಬಾ ಮೆಡಿಕಲ್ ಕಾಲೇಜು ಇಲ್ಲಿಯ ಅಸ್ಸಿಸ್‌ಟೆಂಟ್ ಪ್ರೊ¥s಼ೆ್ಫಸರ್ ಆಗಿರುವ ಡಾ ಅಶೋಕ್ ಶೆಣೈ ಮಾತನಾಡಿ ಹಿರಿಯ ನಾಗರಿಕರು ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ ಮಾಡದೆ ಕಾಳಜಿಯನ್ನು ವಹಿಸಬೇಕು. ಆತ್ಮಶಕ್ತಿ ಯೊಂದಿಗೆ ಸತತ ೧೦ ವರ್ಷಗಳಿಂದ ವ್ಯೆದಕೀಯ ಶಿಬಿರವನ್ನು ಹಮ್ಮಿಕೊಂಡು ಬರುತ್ತಿರುವುದು ಸಂತಸದ ವಿಷಯ ಎಂದರು.
ಶ್ರೀನಿವಾಸ್ ಇನ್ಸ್ಟ್ಯೂಟ್ ಆ¥s಼ï ಡೆಂಟಲ್ ಸಾಯನ್ಸ್ ಮುಕ್ಕ ಇಲ್ಲಿಯ ವೈದ್ಯರಾದ ಡಾ. ಕೆ.ವಿದ್ಯಾ ಭಟ್ ಹಲ್ಲಿನ ರಕ್ಷಣೆಯ ಕುರಿತು ವಿವರಿಸಿದರು.

ದ.ಕ.ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ (ರಿ.) ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಸೀತಾರಾಮ್ ಎನ್ ಶಿಬಿರಕ್ಕೆ ಶುಭವನ್ನು ಹಾರೈಸಿ ಸಂಘದ ಸದಸ್ಯರೆಲ್ಲರೂ ಇದರ ಸದುಪಯೋಗವನ್ನು ಪಡೆಯಬೇಕಾಗಿಯೆಂದು ವಿನಂತಿಸಿದರು.

ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಶ್ರೀ ಎಸ್ ಶೀನ ಪೂಜಾರಿ ಮಾತನಾಡಿ ಆತ್ಮಶಕ್ತಿ ಬ್ಯಾಂಕಿAಗ್ ಜೊತೆಗೆ ಇಂತಹ ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಳ್ಳುವುದು ಹಾಗೂ ತಮ್ಮ ಸಂಸ್ಥೆ ಕೂಡ ಇದರೊಂದಿಗೆ ಕೈ ಜೋಡಿಸಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರುಗಳಾದ ಶ್ರೀ ಜಿ.ಪರಮೇಶ್ವರ ಪೂಜಾರಿ,ಶ್ರೀ ಆನಂದ್ ಎಸ್ ಕೊಂಡಾಣ, ಶ್ರೀ ಗೋಪಾಲ್ ಎಮ್, ಮುಖ್ಯಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಸೌಮ್ಯ ವಿಜಯ್, ಮಾತಾ ಅಮೃತಾನಂದಮಯಿ ಮಠ ಬೋಳೂರು, ಮಂಗಳೂರು ಇಲ್ಲಿನ ವೈದ್ಯರಾದ ಡಾ| ಸುಚಿತ್ರಾ ಸೊರಕೆ ಹಾಗೂ ಡಾ. ದೇವದಾಸ್, ಲಿಯೋ ಕ್ಲಬ್ ನ ಅಧ್ಯಕ್ಷರಾದ ಶ್ರೀ ಕ್ರಿಸ್ಟಲಿಸ್, ಲಯನ್ಸ್ ಕ್ಲಬ್ ನ ಕಾರ್ಯದರ್ಶಿಯಾದ ಶ್ರೀ ರಾಜೇಶ್ ವಿಕ್ಟರ್ ಹರ‍್ರಿ, ಖಜಾಂಜಿಯಾದ ಶಿವರಾಮ್ ರೈ, ದ.ಕ.ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ (ರಿ.) ಮಂಗಳೂರು ಇದರ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಶಿಬಿರದಲ್ಲಿ ಸುಮಾರು ೨೦೦ ಕ್ಕೂ ಮಿಕ್ಕಿ ಶಿಬಿರಾರ್ಥಿಗಳು ಪಾಲ್ಗೊಂಡು ಶಿಬಿರದ ಪ್ರಾಯೋಜನವನ್ನು ಪಡೆದುಕೊಂಡರು. ದ.ಕ.ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ (ರಿ.) ಮಂಗಳೂರು ಇದರ ಪದಾಧಿಕಾರಿಯಾದ ಶ್ರೀ ರಾಮಚಂದ್ರ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.