ಈ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಶ್ರೀ ವಾಮನ್ ಕೆ., ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ಸಂಘದ ನಿರ್ದೇಶಕರಾದ ಶ್ರೀ ಮುದ್ದು ಮೂಡುಬೆಳ್ಳೆ, ಶ್ರೀ ದಿವಾಕರ್ ಬಿ.ಪಿ., ಶ್ರೀ ಗೋಪಾಲ್ ಎಮ್., ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಅರ್ಚಕರಾದ ಶ್ರೀ ಗುರುಪ್ರಸಾದ್ ಶಾಂತಿ, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಸಹಾಯಕ ಪ್ರಬಂಧಕರಾದ ಶ್ರೀ ವಿಶ್ವನಾಥ್ ಮತ್ತಿತ್ತರರು ಉಪಸ್ಥಿತರಿದ್ದರು.
Month: December 2023
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಕಾಪು ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಕಾಪು ರೋಟರಿ ಕ್ಲಬ್‌ನ ಸಹಭಾಗಿತ್ವದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಮತ್ತು ಶ್ರೀನಿವಾಸ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈಯನ್ಸ್ ಮುಕ್ಕ ಇಲ್ಲಿಯ ವೈದ್ಯರ ಸಹಕಾರದೊಂದಿಗೆ ಹೊಸ ಮಾರಿಗುಡಿ ಬಳಿಯಲ್ಲಿರುವ ಸಂಘದ ವಠಾರದಲ್ಲಿ ನ. 28 ರಂದು ಉಚಿತ ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ ನಡೆಯಿತು.
ಈ ಕಾರ್ಯಕ್ರಮದ ಶಿಬಿರಾರ್ಥಿಗಳಿಗೆ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಕಾಪುವಿನಲ್ಲಿ ಏರ್ಪಡಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ, ಸಂಘದ ಪ್ರತೀ ಶಾಖೆಗಳ ವಾರ್ಷಿಕೋತ್ಸವ ಸಂದರ್ಭದಲ್ಲಿ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸುತ್ತಿದ್ದು, ಈಗಾಗಲೇ ಸಂಘವು ಈಗಾಗಲೇ 58 ಶಿಬಿರಗಳನ್ನು ಆಯೋಜಿಸಿದೆ. ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳಲು ಸಹಕರಿಸಿದ ರೋಟರಿ ಕ್ಲಬ್ ಕಾಪು ಇವರಿಗೆ […]
ದಿನಾಂಕ ನವೆಂಬರ್ 1 ರಂದು ನಗರದ ಕೇಂದ್ರ ಮೈದಾನದಲ್ಲಿನಡೆದ ದ.ಕ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಹಕಾರ ಕ್ಷೇತ್ರಕ್ಕೆ ದಲ್ಲಿ ಸಲ್ಲಿಸಿರುವ ಅಪಾರ ಸಾಧನೆಗಾಗಿ ಆತ್ಮಶಕ್ತಿ ವಿವಿದ್ಧೋದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರಿಗೆ 2023 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಯನ್ನು ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಯುತ ದಿನೇಶ್ ಗುಂಡುರಾವ್‌ರವರು, ವಿಧಾನ ಪರಿಷತ್ ಸದಸ್ಯರಾದ ಶ್ರೀ ಹರೀಶ್ ಕುಮಾರ್, ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಡಿ.ವೇದವ್ಯಾಸ ಕಾಮತ್, ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಶ್ರೀ ಸುಧೀರ್ ಶೆಟ್ಟಿ ಕಣ್ಣೂರು ,ಮಂಗಳೂರು ಮಹಾನಗರ ಪಾಲಿಕೆ ವಿರೋದ ಪಕ್ಷದ ನಾಯಕರಾದ ಶ್ರೀ ಪ್ರವೀಣ್ ಚಂದ್ರ ಆಳ್ವರವರ ಉಪಸ್ಥಿತಿಯಲ್ಲಿ ನೀಡಿ ಗೌರವಿಸಲಾಯಿತು.
ಉದ್ಯಮಿ ಹಾಗೂ ಸಾಮಾಜಿಕ ಕಾರ್ಯಕರ್ತರು ಆಗಿರುವ ಶ್ರೀಯುತ ಚಿತ್ತರಂಜನ್ ಬೋಳಾರ್‌ರವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಂಗಳೂರು ಇದನ್ನು ಸ್ಥಾಪಿಸಿ, ಆಡಳಿತ ಮಂಡಳಿಯ ಸ್ಥಾಪಕಧ್ಯಕ್ಷರಾಗಿ ಪಸ್ತುತ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಘದ ಸಕ್ರೀಯ ಚಟುವಟಿಕೆಯೊಂದಿಗೆ ಅಧ್ಯಕ್ಷರ ಕ್ರಿಯಾಶೀಲತೆಯು ಉಲ್ಲೇಖನೀಯವಾದದ್ದು , ಅವರ ಕ್ರೀಯಶೀಲತೆಯಿಂದಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕಳೆದ ಹತ್ತು ವರ್ಷಗಳಲ್ಲಿ 30 ಶಾಖೆಗಳನ್ನು ಹೊಂದಿದ್ದು ನೂರಕ್ಕೂ ಅಧಿಕ ಮಂದಿಗೆ ಉದ್ಯೋಗ ಕಲ್ಪಿಸಿ ರೂ .2000 ಕೋಟಿಗೂ ಮಿಕ್ಕಿ ವ್ಯವಹಾರವನ್ನು ಮಾಡಿರುವುದು ಸಹಕಾರ ರಂಗದಲ್ಲಿ ಅಪರೂಪದ ಸಂಗತಿ . […]
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡೀಲ್ ಮಂಗಳೂರು ಇದರ ಪಂಜಿಮೊಗರು ಶಾಖೆ ಹಾಗೂ ಶ್ರೀ ಶಾರದೋತ್ಸವ ಸೇವಾ ಟ್ರಸ್ಟ್ (ರಿ), ಹಿಂದೂ ಯುವಸೇನೆ ವಿದ್ಯಾನಗರ ಶಾಖೆ, ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಇವರ ಸಹಯೋಗದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ, ದಂತ ಚಿಕಿತ್ಸಾ ಶಿಬಿರ ಮತ್ತು ಕಣ್ಣಿನ ತಪಾಸಣೆ ಹಾಗೂ ರಕ್ತದಾನ ಶಿಬಿರವು ದಿನಾಂಕ 19.11.2023ರಂದು ಶ್ರೀ ಕೃಷ್ಣ ಭಜನಾ ಮಂದಿರದ ಅಂಗಣ ವಿದ್ಯಾನಗರ ಪಂಜಿಮೊಗರು ಇಲ್ಲಿನಡೆಯಿತು.
ಈ ಕಾರ್ಯಕ್ರಮದ ಶಿಬಿರಾರ್ಥಿಗಳಿಗೆ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಪಂಜಿಮೊಗರಿನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಲಯನ್ಸ್ ಕ್ಲಬ್ ಮಂಗಳೂರು ಇದರ ಅಧ್ಯಕ್ಷರಾದ ಲಯನ್ ಶೀನಾ ಪೂಜಾರಿಯವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ , ನಿರ್ದೆಶಕರಾದ ಶ್ರೀ ಚಂದ್ರಹಾಸ್ ಮರೋಳಿ ಹಾಗೂ ಶ್ರೀ ಶಾರದೋತ್ಸವ ಸೇವಾ ಟ್ರಸ್ಟ್ ವಿದ್ಯಾನಗರದ ಅಧ್ಯಕ್ಷರಾದ ಉಮೇಶ್ ಪೂಜಾರಿ ,ಹಾಗೂ […]
ಆತ್ಮಶಕ್ತಿ ವಿವಿದ್ಧೋದೇಶ ಸಹಕಾರಿ ಸಂಘ (ನಿ.) ಮಂಗಳೂರು ಹಾಗೂ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ (ರಿ.) ಮಂಗಳಾದೇವಿ ವಲಯ ಸಮಿತಿ, ಮಂಗಳೂರು ಮತ್ತು ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಜುಲೇಖ ಯೆನೆಪೋಯ ಇನ್ಸಿಟ್ಯೂಟ್ ಒಫ್ ಓಂಕಲಜಿ, ಸಮುದಾಯ ದಂತ ವಿಭಾಗ ಯೆನೆಪೋಯ ಕಾಲೇಜು ಮತ್ತು ಆಸ್ಪತ್ರೆ, ಯೆನೆಪೋಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಇವರ ನುರಿತ ತಜ್ಞ ವೈದ್ಯ ತಂಡದವರಿAದ ಉಚಿತ ಮಹಿಳಾ ಆರೋಗ್ಯ ಯೋಗಕ್ಷೇಮ, ನೇತ್ರ ದಂತ ಮತ್ತು ವೈದ್ಯಕೀಯ ಚಿಕಿತ್ಸಾ ಶಿಬಿರವು ದಿನಾಂಕ 10.12.2023 ರಂದು ಕಾಂತಿ ಚರ್ಚ್ ಹಾಲ್, ಮಂಗಳಾದೇವಿ ಇಲ್ಲಿ ನಡೆಯಿತು.
ಶಿಬಿರದ ಉದ್ಘಾಟನೆಯನ್ನು ಕಾಂತಿ ಚರ್ಚ್ ಹಾಲ್ ಮಂಗಳೂರು ಇದರ ಧರ್ಮಗುರುಗಳಾದ ¥s಼Áದರ್ ಎಬ್ನೆಜರ್ ಜತ್ತನ್ನರವರು ಉದ್ಘಾಟಿಸಿ ಮಾತನಾಡಿ ಇಂದಿನ ಆಧುನಿಕ ಯುಗದಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ಆರೋಗ್ಯವೇ ಭಾಗ್ಯ ವಾಗಿರುತ್ತದೆ. ಇಂತಹ ಆರೋಗ್ಯ ಶಿಬಿರಗಳನ್ನು ಆಯೋಜನೆ ಮಾಡಿರುವಂತಹ ಆತ್ಮಶಕ್ತಿ ವಿವಿದ್ಧೋದೇಶ ಸಹಕಾರಿ ಸಂಘ ಹಾಗೂ ಜಂಟಿ ಸಂಯೋಜಕರಿಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ, ದೇವರು ಎಲ್ಲರಿಗೂ ಆರೋಗ್ಯವನ್ನು ಕರುಣಿಸಲಿ ಎಂದು ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು ಶಿಬಿರದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ಶ್ರೀಮತಿ ಭಾನುಮತಿ ಅವರು ಮಾತನಾಡಿ […]
ತುಮಕೂರು ಜಿಲ್ಲೆಯ ಗುರುಕುಲ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತ ಮಂಡಳಿಯ ಸದಸ್ಯರು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಸಹಕಾರ ಸಂಘಗಳಿಗೆ ಅಧ್ಯಯನ ಪ್ರವಾಸ ನಿಮಿತ್ತ ಭೇಟಿ ನೀಡಿದರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಧಾನ ಕಛೇರಿಗೆ ಭೇಟಿ ನೀಡಿದ ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರು, ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ (ನಿ.), ಬೆಂಗಳೂರು ಇದರ ನಿರ್ದೇಶಕರು ಹಾಗೂ ಶ್ರೀ ಬಸವೇಶ್ವರ ಪತ್ತಿನ ಸಹಕಾರ ಸಂಘದ ನಿರ್ದೇಶಕರು ಮತ್ತು ಗುರುಕುಲ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿರುವ ಶ್ರೀ ಮಲ್ಲಿಕಾರ್ಜುನಯ್ಯ ಇವರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾಗಿರುವ ಶ್ರೀ ನೇಮಿರಾಜ್ ಪಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಸಹಾಯಕ ಪ್ರಬಂಧಕರಾದ ಶ್ರೀ ವಿಶ್ವನಾಥ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಈ ಅಧ್ಯಯನ ತಂಡದಲ್ಲಿ ಗುರುಕುಲ ವಿವಿಧೋದ್ದೇಶ ಸಹಕಾರ ಸಂಘದ ಉಪಾಧ್ಯಕ್ಷರಾದ ಶ್ರೀ ಬಿ ರಾಜಶೇಖರ್, ನಿರ್ದೇಶಕರುಗಳಾದ ಶ್ರೀ ರುದ್ರಶೆಟ್ಟಿ, ಶ್ರೀ ಜಗದೀಶ್ ಎಚ್ ಜಿ, ಶ್ರೀ ಜಗದೀಶ್, ಶ್ರೀ ಆರ್ ಎಸ್ ಸಿದ್ದೇಶ್ವರ್, ಶ್ರೀ ಗಂಗಾಧರ್, ಶ್ರೀ ನಂಜುAಡಯ್ಯ, ಶ್ರೀ ಬಸವ ರಾಜ್ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.
ದ.ಕ ಕೇಂದ್ರ ಸಹಕಾರ ಸಗಟು ಮಾರಾಟ ಸಂಘ (ನಿ)., ಜನತಾ ಬಜಾರ್ ಮಂಗಳೂರು ಇದರ ಆಡಳಿತ ಮಂಡಳಿಯ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರು, ದ.ಕ ಕೇಂದ್ರ ಸಹಕಾರ ಸಗಟು ಮಾರಾಟ ಸಂಘ (ನಿ.), ಜನತಾ ಬಜಾರ್ ಇದರ ನಿರ್ದೇಶಕರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರನ್ನು ದ.ಕ ಕೇಂದ್ರ ಸಹಕಾರ ಸಗಟು ಮಾರಾಟ ಸಂಘ (ನಿ.), ಜನತಾ ಬಜಾರ್ ಇದರ ಅಧ್ಯಕ್ಷರಾದ ಶ್ರೀ ಯಂ ಪುರುಷೋತ್ತಮ ಭಟ್ ರವರು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಶ್ರೀ ದಿನೇಶ್ ಹೆಗ್ಡೆ , ನಿರ್ದೇಶಕರುಗಳಾದ ಶ್ರೀ ಕುಂಬ್ಳೆಕಾರ್ ಮೋಹನ್ ಕುಮಾರ್, ಶ್ರೀಮತಿ ಮದಲಾಕ್ಷಿ ಎಸ್.ರೈ, ಶ್ರೀಮತಿ ಪ್ರಭಾ ಮಾಲಿನಿ, ಶ್ರೀ ಪಕೀರಪ್ಪ, ಶ್ರೀ ಶಶಿಧರ ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ನಳಿನಿ.ಟಿ ಹಾಗೂ ಮೊದಲಾದವರು ಉಪಸ್ಥಿತರಿದ್ದರು
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಕಾಪು ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಕಾಪು ರೋಟರಿ ಕ್ಲಬ್‌ನ ಸಹಭಾಗಿತ್ವದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಮತ್ತು ಶ್ರೀನಿವಾಸ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈಯನ್ಸ್ ಮುಕ್ಕ ಇಲ್ಲಿಯ ವೈದ್ಯರ ಸಹಕಾರದೊಂದಿಗೆ ಹೊಸ ಮಾರಿಗುಡಿ ಬಳಿಯಲ್ಲಿರುವ ಸಂಘದ ವಠಾರದಲ್ಲಿ ನ. 28ರಂದು ಉಚಿತ ನೇತ್ರ ತಪಾಸಣಾ ಮತ್ತು ದಂತಾ ಚಿಕಿತ್ಸಾ ಶಿಬಿರ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಬೆಳಪು ವ್ಯ.ಸೇ.ಸ. ಸಂಘದ ಅಧ್ಯಕ್ಷ ಮತ್ತು ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಐಕಳಭಾವ ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಅಲ್ಪಾವಧಿಯಲ್ಲಿಯೇ 30 ಶಾಖೆಗಳನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರಗತಿಯ ಪಥದಲ್ಲಿ ಸಾಗುತ್ತಿದ್ದು ರಾಜ್ಯಕ್ಕೆ ಮಾದರಿಯಾದ ಸಂಸ್ಥೆಯಾಗಿ ಮೂಡಿಬರುತ್ತಿದೆ. ಬ್ಯಾಂಕಿOಗ್ ಕ್ಷೇತ್ರದ ಜೊತೆಗೆ ಸಮಾಜಮುಖಿ ಕಾರ್ಯಕ್ರಮಗಳನ್ನು ಕೂಡ ಹಮ್ಮಿಕೊಂಡು ಬರುತ್ತಿದ್ದು ಕಾಪುವಿನ ಜನತೆಯ ಪೂರ್ಣ ಆಶೀರ್ವಾದ ಮತ್ತು ಸಹಕಾರ ಸಂಘದ ಮೇಲಿರಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ ಕಾಪು ಹೊಸ ಮಾರಿಗುಡಿ ದೇವಸ್ಥಾನದ […]
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಲಾಲ್‌ಭಾಗ್ ಶಾಖೆಯ 9ನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ’’ಶ್ರೀಯುತ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಲಾಲ್‌ಭಾಗ್ ಶಾಖೆಯಲ್ಲಿ ಜರಗಿತು. ಈ ಕಾರ್ಯಕ್ರಮವನ್ನು ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಶ್ರೀ ಶಶಿಧರ್ ಹೆಗ್ಡೆ ಯವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಉದ್ಟಾಟಿಸಿದರು.
ಕಾರ್ಯಕ್ರಮ ಉದ್ಟಾಟಿಸಿ ಮಾತನಾಡಿದ ಮಾಜಿ ಮೇಯರ್ ಶ್ರೀ ಶಶಿಧರ್ ಹೆಗ್ಡೆ ರವರು ಮಾತಾನಾಡಿ ಆತ್ಮಶಕ್ತಿ ಸಹಕಾರಿ ಸಂಘವು ಕ್ರೀಯಾಶೀಲ ಅಧ್ಯಕ್ಷರು ಹಾಗೂ ಉತ್ತಮ ಆಡಳಿತ ಮಂಡಳಿ ನಿರ್ದೇಶಕರನ್ನು ಹೊಂದಿ ಬ್ಯಾಂಕಿOಗ್ ಕ್ಷೇತ್ರದಲ್ಲಿ ಇತಿಹಾಸವನ್ನು ಹೊಂದಿದೆ. ಜಗತ್ತಿನಲ್ಲೇ ಅನೇಕ ಸರಕಾರಿ ಹಾಗೂ ಖಾಸಗಿ ಬ್ಯಾಂಕ್‌ಗಳು ದೊಡ್ಡ ಮಟ್ಟದಲ್ಲಿ ಬೆಳೆದಿದ್ದು, ಅವುಗಳಲ್ಲಿ ಆತ್ಮಶಕ್ತಿ ಸಂಘವು ಬೆಳೆದಿರುವುದು ತುಂಬಾ ಸಂತೋಷದ ವಿಷಯ . ಸಹಕಾರ ಕ್ಷೇತ್ರದಲ್ಲಿ ಈ ಸಂಘವು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಆರ್ಥಿಕತೆಯ ಜೊತೆಗೆ ಮಹಿಳೆಯರಿಗೆ ಉತ್ತಮ ಸ್ಥಾನಮಾನದೊಂದಿಗೆ ಸ್ವಾವಲಂಬಿಯಾಗುವ […]
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಧಾನ ಕಛೇರಿಗೆ ಕರ್ನಾಟಕ ಸರ್ಕಾರದ ಮಾಜಿ ಸಚಿವರು, ಚಾಮುಂಡೇಶ್ವರಿ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (ನಿ.) ಬೆಂಗಳೂರು ಇದರ ಅಧ್ಯಕ್ಷರಾದ ಶ್ರೀ ಜಿ.ಟಿ. ದೇವೇಗೌಡರು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಾತಾನಾಡಿದ ಇವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು 30 ಶಾಖೆಗಳನ್ನು ಹೊಂದಿದ್ದು ಸಿಬ್ಬಂದಿಗಳು ಉತ್ತಮ ಸೇವೆ ಸಲ್ಲಿಸುತ್ತಿರುವುದು ಬಹಳ ಸಂತೋಷದ ವಿಷಯವಾಗಿದೆ. ಈ ಸಹಕಾರ ಸಂಸ್ಥೆಯು ಮಾದರಿ ಸಂಸ್ಥೆಯಾಗಿದ್ದು ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರ ಕಾರ್ಯವನ್ನು ಶ್ಲಾಘಿಸಿದರು. 70ನೇ ಅಖಿಲ ಭಾರತ ಸಹಕಾರ ಸಪ್ತಾಹಕ್ಕೆ ಶುಭವನ್ನು ಹಾರೈಸಿದರು. ಶ್ರೀಯುತರನ್ನು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಸಂಘದ ವತಿಯಿಂದ ಗೌರವಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ […]