ಉದ್ಯಮಿ ಹಾಗೂ ಸಾಮಾಜಿಕ ಕಾರ್ಯಕರ್ತರು ಆಗಿರುವ ಶ್ರೀಯುತ ಚಿತ್ತರಂಜನ್ ಬೋಳಾರ್ರವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಂಗಳೂರು ಇದನ್ನು ಸ್ಥಾಪಿಸಿ, ಆಡಳಿತ ಮಂಡಳಿಯ ಸ್ಥಾಪಕಧ್ಯಕ್ಷರಾಗಿ ಪಸ್ತುತ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಘದ ಸಕ್ರೀಯ ಚಟುವಟಿಕೆಯೊಂದಿಗೆ ಅಧ್ಯಕ್ಷರ ಕ್ರಿಯಾಶೀಲತೆಯು ಉಲ್ಲೇಖನೀಯವಾದದ್ದು , ಅವರ ಕ್ರೀಯಶೀಲತೆಯಿಂದಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕಳೆದ ಹತ್ತು ವರ್ಷಗಳಲ್ಲಿ 30 ಶಾಖೆಗಳನ್ನು ಹೊಂದಿದ್ದು ನೂರಕ್ಕೂ ಅಧಿಕ ಮಂದಿಗೆ ಉದ್ಯೋಗ ಕಲ್ಪಿಸಿ ರೂ .2000 ಕೋಟಿಗೂ ಮಿಕ್ಕಿ ವ್ಯವಹಾರವನ್ನು ಮಾಡಿರುವುದು ಸಹಕಾರ ರಂಗದಲ್ಲಿ ಅಪರೂಪದ ಸಂಗತಿ . ಮಹಿಳಾ ಸಬಲೀಕರಣದ ದೃಷ್ಟಿಯಿಂದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಶ್ರೀಯುತರು ಮಾಡುತ್ತಿರುವ ಸೇವೆ ಅನನ್ಯ. ಸಂಘದಲ್ಲಿ ಶೇ.೯೫% ಸಿಬ್ಬಂದಿಗಳು ಮಹಿಳೆಯರೆ ಇದ್ದು ಮಹಿಳೆಯರ ಮುಖಾಂತರ ಸಂಘದ ವ್ಯವಹಾರ ನಡೆಸುತ್ತಿರುವುದು ಅನುಕರಣೀಯ. ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ಮಂಗಳೂರು ಹಾಗೂ ದ.ಕ. ಕೇಂದ್ರ ಸಹಕಾರ ಸಗಟು ಮಾರಾಟ ಸಂಘ ನಿ. ಜನತಾ ಬಜಾರ್ ಇದರ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಆರೋಗ್ಯ ಪೂರ್ಣ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ರವರು ಸಹಕಾರಿ ಸಂಘದ ಮೂಲಕವಾಗಿ 55ಕ್ಕೂ ಮಿಕ್ಕಿ ಉಚಿತ ಆರೋಗ್ಯ ಶಿಬಿರಗಳನ್ನು ನಡೆಸಿ 400ಕ್ಕೂ ಮಿಕ್ಕಿ ಕಣ್ಣಿನ ಶಸ್ತçಚಿಕಿತ್ಸೆ, 12000 ಕ್ಕೂ ಮಿಕ್ಕಿ ಉಚಿತ ಕನ್ನಡಕ ವಿತರಣೆ, ಉಚಿತ ಔಷದಿ ವಿತರಣೆ ಹಾಗೂ ಚಿಕಿತ್ಸೆ ಶಿಬಿರಗಳನ್ನು ಇದರ ಜೊತೆಗೆ ಒತ್ತಡ ನಿರ್ವಹಣೆ, ಆರೋಗ್ಯ ಸಂರಕ್ಷಣೆ ಹಾಗೂ ಕಾನ್ಸ್ರ್ ಮುಂತಾದ ಮಾಹಿತಿ ಕಾರ್ಯಗಾರವನ್ನು ಏರ್ಪಡಿಸಿದ್ದಾರೆ.
ಸಾರ್ವಜನಿಕರ ಉಪಯೋಗಕ್ಕಾಗಿ ಬಸ್ಸು ತಂಗುದಾಣ ನಿರ್ಮಾಣ, ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಅವರಿಗೆ ಉಚಿತವಾಗಿ IAS/KAS ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾಗವಹಿಸಲು ಉಚಿತ ತರಭೇತಿಯನ್ನು ಆಯೋಜಿಸುತ್ತಾ ಬಂದಿರುವುದು, ಬಡ ಕುಟುಂಬಕ್ಕೆ ಮನೆ ಪುನರ್ ನಿರ್ಮಾಣ ಇಂತಹ ಹಲವು ಕಾರ್ಯಕ್ರಮಗಳನ್ನು ಮಾಡಿಕೊಂಡು ಬಂದಿರುತ್ತಾರೆ.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ (ನಿ.) ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ವಸತಿ ಮಹಾಮಂಡಳ (ನಿ.) ಬೆಂಗಳೂರು ಮತ್ತು ಸಹಕಾರ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಸಹಕಾರ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ “ಸಹಕಾರ ರತ್ನ ಪ್ರಶಸ್ತಿ”ಯನ್ನು ನೀಡಿ ಗೌರವಿಸಲಾಗಿದೆ. ಸಹಕಾರ ಕ್ಷೇತ್ರದಲ್ಲಿನ ಸಾಧನೆಯನ್ನು ಗುರುತಿಸಿ ಐಕಾನ್ಸ್ ಆಫ್ ಇಂಡಿಯನ್ ಬಿಸಿನೆಸ್ ಸಂಸ್ಥೆಯಿAದ “ಕರ್ನಾಟಕ ಗ್ಲೋರಿ ಅವಾರ್ಡ್-೨೦೨೩”ರ ಐಐಬಿ ಬೆಸ್ಟ್ ಲೀಡರ್ಶಿಪ್ ಅವಾರ್ಡ್ ನೀಡಿ ಗೌರವಿಸಲಾಗಿದೆ. “ಭಾರತ ರತ್ನ ಡಾ. ಎ. ಪಿ. ಜೆ. ಅಬ್ದುಲ್ ಕಲಾಂ ರಾಷ್ಟಿçÃಯ ಪ್ರಶಸ್ತಿ”, “ಪರಿವರ್ತನಶ್ರೀ ರಾಜ್ಯ ಪ್ರಶಸ್ತಿ”, ಸಮಾಜರತ್ನ ಪ್ರಶಸ್ತಿ, , ಉತ್ತಮ ಸಹಕಾರಿ ಪ್ರಶಸ್ತಿ, ರಾಷ್ಟಿçÃಯ ಬಸವಶ್ರೀ ಪ್ರಶಸ್ತಿ , “ಗುರು ಶ್ರೀ ಪ್ರಶಸ್ತಿ”,ಶ್ರೀ ಕೃಷ್ಣಾನುಗೃಹ ರಾಜ್ಯ ಪ್ರಶಸ್ತಿ, ಸಜ್ಜನ ಚಂದನ ಸದ್ಭಾವನಾ ಪ್ರಶಸ್ತಿ, “ಪೊಸ ಕುರಲ್” ವಾಹಿನಿ ಸಾಧನಾ ಪ್ರಶಸ್ತಿ ಪುರಸ್ಕಾರ ಜೊತೆಯಲ್ಲಿ ೧೦೦ಕ್ಕೂ ಮಿಕ್ಕಿ ಸಂಘ ಸಂಸ್ಥೆಗಳು ಶ್ರೀಯುತರನ್ನು ಗುರುತಿಸಿ ಸನ್ಮಾನಿಸಿ ಪ್ರಶಸ್ತಿ ನೀಡಿ ಗೌರವಿಸಿದೆ.