ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ “ಸಹಕಾರ ರತ್ನ’’ ಶ್ರೀಯುತ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಮಡಂತ್ಯಾರು ಶಾಖೆಯಲ್ಲಿ ಜರಗಿತು. ಈ ಕಾರ್ಯಕ್ರಮವನ್ನು ಸಂಘದ ಸದಸ್ಯರಾದ ಶ್ರೀ ಸದಾನಂದ ಪೂಜಾರಿ, ಶ್ರೀ ವಿಶ್ವನಾಥ ಪೂಜಾರಿ, ಶ್ರೀ ಶ್ರೀಧರ್ ಭಟ್, ಶ್ರೀ ತಿಮ್ಮಪ್ಪ ಗೌಡ ರವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಉದ್ಟಾಟಿಸಿದರು.


ಸಂಘದ ಸದಸ್ಯರಾದ ಶ್ರೀ ಸದಾನಂದ ಪೂಜಾರಿ ಯವರು ಮಾತನಾಡಿ ಸಂಘವು ಗ್ರಾಹಕರ ಸಭೆಗೆ ಶುಭವನ್ನು ಹಾರೈಸಿ ಸಂಘವು ಇನ್ನಷ್ಟು ವಿಶಿಷ್ಟ ರೀತಿಯ ಯೋಜನೆಗಳನ್ನು ರೂಪಿಸಿ ಹಲವಾರು ಶಾಖೆಗಳನ್ನು ತೆರೆದು ಜನರಿಗೆ ಉತ್ತಮ ಸೇವೆಯನ್ನು ನೀಡುವಂತಾಗಲಿ ಎಂದು ಆಶಿಸಿದರು.
ಸಂಘದ ಸದಸ್ಯರಾದ ಶ್ರೀ ಶ್ರೀಧರ್ ಭಟ್ ರವರು ಮಾತನಾಡಿ ಪಾಲು ಬಂಡವಾಳ ಜಾಸ್ತಿ ಮಾಡಬೇಕು ಎಂದು ತಮ್ಮ ಅಭಿಪ್ರಾಯ ತಿಳಿಸಿದರು. ಸಿಬ್ಬಂದಿಗಳ ಕಾರ್ಯವೈಖರಿ ಹಾಗೂ ಸೇವೆಯ ಕುರಿತು ಉತ್ತಮ ಅಭಿಪ್ರಾಯವನ್ನು ವ್ಯಕ್ತ ಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷರಾದ “ಸಹಕಾರ ರತ್ನ’’ಶ್ರೀಯುತ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಎಲ್ಲಾ ಗ್ರಾಹಕರಿಗೆ ಅಭಿನಂದನೆ ಸಲ್ಲಿಸಿದರು. ಶಾಖೆಯು ಪ್ರಥಮ ವರ್ಷದಲ್ಲೇ ಲಾಭಗಳಿಸಿದೆ ಎಂದು ತಿಳಿಸಲು ಸಂತೋಷವಾಗುತ್ತಿದೆ. ಶಾಖೆಯಿಂದ ಹೆಚ್ಚಿನ ಠೇವಣಿಯನ್ನು ಸಂಗ್ರಹಿಸಿದ್ದು ಆ ಠೇವಣಿಯಿಂದ ಹೆಚ್ಚಿನ ಸಾಲವನ್ನು ನೀಡಲು ಸಾಧ್ಯವಾಗಿದೆ. ಸಂಘದ ಪ್ರತಿ ಶಾಖೆಗಳಲ್ಲೂ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಕ್ಯಾನ್ಸರ್ ತಪಾಸಣಾ ವೈದ್ಯಕೀಯ ಶಿಬಿರವನ್ನು ಆಯೋಜಿಸುತ್ತಿದ್ದು, ಜನವರಿ ೧೩ ರಂದು ಮಡಂತ್ಯಾರು ಪರಿಸರದಲ್ಲೂ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು. ಸಂಘದ ಪ್ರತಿ ಸದಸ್ಯನಿಗೆ ೫ಷೇರು ಪಡೆಯುವ ಅವಕಾಶವಿದ್ದು ಗ್ರಾಹಕರು ಹೆಚ್ಚುವರಿ ಷೇರುಗಳನ್ನು ಪಡೆಯುವಂತೆ ವಿನಂತಿಸಿದರು. ಈಗಾಗಲೇ ಠೇವಣಿ ಮೇಲಿನ ಬಡ್ಡಿ ದರವನ್ನು ೯.೫೦% ಗೆ ಏರಿಕೆ ಮಾಡಲಾಗಿದೆ ಎಂದು ತಿಳಿಸಿದರು. ಸಂಘದ ಶಾಖೆಗಳು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ವಿಸ್ತತರಿಸುತ್ತಿದ್ದು ಮುಂದಿನ ದಿನಗಳಲ್ಲಿ ಹೆಚ್ಚು ಶಾಖೆಗಳು ಗ್ರಾಮೀಣ ಪ್ರದೇಶಗಳಲ್ಲಿ ಪ್ರಾರಂಭವಾಗಲಿದೆ. ಸಂಘವು ಈ ಕಿರು ಅವಧಿಯಲ್ಲಿ ಬೆಳೆಯಬೇಕಾದರೆ ಸಂಘದ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರ ಪರಿಶ್ರಮ ಹಾಗೂ ಗ್ರಾಹಕರ ಸಹಕಾರದಿಂದ ಸಾದ್ಯವಾಗಿದೆ. ಸಂಘದಲ್ಲಿ ಲಭ್ಯವಿರುವ ವಿಮಾ ಸೇವೆ, ಭವಿಷ್ಯ ಸುರಕ್ಷಾ ಯೋಜನೆಯ ಜೊತೆಗೆ ಎಲ್ಲಾ ಸೇವೆಗಳನ್ನು ಸದುಪಯೋಗ ಮಾಡಿಕೊಳ್ಳುವಂತೆ ಗ್ರಾಹಕರಲ್ಲಿ ವಿನಂತಿಸಿದರು. ಗ್ರಾಹಕರ ಸಲಹೆ ಸಹಕಾರವನ್ನು ಸದಾ ಬಯಸುತ್ತಾ ಸಂಘವು ಇನ್ನಷ್ಟು ಎತ್ತರಕ್ಕೆ ಏರಲು ಇನ್ನು ಮುಂದೆಯೂ ಗಾಹಕರು ಕೈ ಜೋಡಿಸುವಂತೆ ಹೇಳಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ, ನಿರ್ದೇಶಕರಾದ ಶ್ರೀ ಸೀತಾರಾಮ್ ಎನ್ , ಶ್ರೀ ಗೋಪಾಲ್ ಎಮ್, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಹಾಗೂ ಮತ್ತಿತ್ತರರು ಉಪಸ್ಥಿತರಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಸಂಘದ ಗ್ರಾಹಕರು ಭಾಗವಹಿಸಿದರು.
ಶಾಖೆಯ ಶಾಖಾಧಿಕಾರಿ ಕುಮಾರಿ ಸುರಕ್ಷಾ ಇವರು ಸ್ವಾಗತಿಸಿ,ಸಿಬ್ಬಂದಿಯಾದ ಕುಮಾರಿ ಪ್ರಜ್ಞಾ ರವರು ವಂದಿಸಿ ಮಾನವ ಸಂಪನ್ಮೂಲ ಅಧಿಕಾರಿ ದೀಪಿಕ ಸನಿಲ್ ರವರು ಕಾರ್ಯಕ್ರಮ ನಿರೂಪಿಸಿದರು.