ಸಂಘದ ಸದಸ್ಯರಾದ ಶ್ರೀ ಕೈಲಾರ್ ರಾಜಗೋಪಾಲ್ ಭಟ್‌ರವರು ಮಾತನಾಡಿ ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಲಾದ ಗ್ರಾಹಕರ ಸಭೆಗೆ ಸಂತಸವನ್ನು ವ್ಯಕ್ತ ಪಡಿಸಿದರು. ಸಿಬ್ಬಂದಿಗಳ ಕಾರ್ಯವೈಖರಿ ಹಾಗೂ ಸೇವೆಯ ಕುರಿತು ಉತ್ತಮ ಅಭಿಪ್ರಾಯವನ್ನು ವ್ಯಕ್ತ ಪಡಿಸಿದರು. ಸಂಘ ದ ಅಧ್ಯಕ್ಷರಾದ “ಸಹಕಾರ ರತ್ನ’’ ಶ್ರೀಯುತ ಚಿತ್ತರಂಜನ್ ಬೋಳಾರ್ ರವರು ಪಾದರಸದಂತೆಯೇ ಇದ್ದು ಸಂಘ ಸಿಬ್ಬಂದಿಗಳು ಕೂಡ ಇದೇ ರೀತಿ ಪಾದರಸದಂತೆ ಕಾರ್ಯನಿರ್ವಹಿಸಲಿ ಎಂದು ಆಶಿಸಿದರು. ಸಂಘದಿAದ ಹಲವಾರು ಜನಪಯೋಗಿ ಕೆಲಸಗಳು ಆಗುತಿದ್ದು ಸಂಘವು ಕಷ್ಟ ಕಾಲದಲ್ಲಿ ಜನರ ಸಮಸ್ಯೆಗೆ ಉತ್ತಮ ರೀತಿಯಲ್ಲಿ ಸ್ಪಂದನೆಯನ್ನು ನೀಡಿತ್ತಿದೆ.. ಸಂಘವು ಇನ್ನಷ್ಟು ಉತ್ತುಂಗಕ್ಕೆ ಏರಿ ಹಲವಾರು ಶಾಖೆಗಳನ್ನು ತೆರೆದು ಜನರಿಗೆ ಉತ್ತಮ ಸೇವೆಯನ್ನು ನೀಡುವಂತಾಗಲಿ ಎಂದು ಆಶಿಸಿದರು.
ಸಂಘದ ಸದಸ್ಯರಾದ ಶ್ರೀ ವರದರಾಜ್.ಎಮ್ ರವರು ಮಾತನಾಡಿ ಸಿಬ್ಬಂದಿಗಳ ಸೇವೆಯನ್ನು ಶ್ಲಾಘಿಸಿ ಮುಂದೆಯೂ ಒಳ್ಳೆಯ ಸೇವೆಯನ್ನು ನೀಡುವಂತಾಗಲಿ ಎಂದು ಹಾರೈಸಿದರು.
ಸಂಘದ ಸದಸ್ಯರಾದ ಶ್ರೀ ಜನಾರ್ಧನ್ ರವರು ಸಂಘಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷರಾದ “ಸಹಕಾರ ರತ್ನ’’ ಶ್ರೀಯುತ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ ಶಾಖೆಯನ್ನು ಪ್ರಾರಂಭಿಸಲು ಸಹಕಾರ ನೀಡಿದ ಹಾಗೂ ಶಾಖೆಯ ಯಶಸ್ವಿಗೆ ಕಾರಣಕರ್ತರಾದ ಎಲ್ಲರಿಗೂ ವಂದಿಸಿದರು. ನಮ್ಮ ಸಹಕಾರಿ ಸಂಘವು ರೂ.೨೦೦೦ ಕೋಟಿ ವ್ಯವಹಾರ ಹೊಂದಿದ್ದು ಪ್ರಸಕ್ತ ಸಾಲಿನಲ್ಲಿ ರೂ.೩೦೦೦ ಕೋಟಿ ವ್ಯವಹಾರ ಹೊಂದುವ ಗುರಿ ಹೊಂದಿದೆ. ಸಂಘವು ತನ್ನ ಶಾಖೆಯನ್ನು ಸ್ವಂತ ಕಟ್ಟಡದಲ್ಲಿ ಪ್ರಾರಂಭಿಸುವ ಯೋಜನೆಯನ್ನು ಹೊಂದಿದೆ. ಸಂಘದ ಪ್ರತಿ ಶಾಖೆಗಳಲ್ಲೂ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಉಪ್ಪಿನಂಗಡಿ ಪರಿಸರದಲ್ಲೂ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು. ಸಂಘದಲ್ಲಿ ಲಭ್ಯವಿರುವ ವಿಮಾ ಸೇವೆ, ಭವಿಷ್ಯ ಸುರಕ್ಷಾ ಯೋಜನೆಯ ಜೊತೆಗೆ ಎಲ್ಲಾ ಸೇವೆಗಳನ್ನು ಸದುಪಯೋಗ ಮಾಡಿಕೊಳ್ಳುವಂತೆ ಗ್ರಾಹಕರಲ್ಲಿ ವಿನಂತಿಸಿದರು. ಗ್ರಾಹಕರ ಸಲಹೆ ಸಹಕಾರವನ್ನು ಸದಾ ಬಯಸುತ್ತಾ ಸಂಘವು ಇನ್ನಷ್ಟು ಎತ್ತರಕ್ಕೆ ಏರಲು ಇನ್ನು ಮುಂದೆಯೂ ಗಾಹಕರ ಸಹಕಾರವನ್ನು ಕೋರಿದರು.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಶ್ರೀ ರಮಾನಾಥ್ ಸನಿಲ್, ಶ್ರೀ ಬಿ.ಪಿ ದಿವಾಕರ್ sಶ್ರೀ ಗೋಪಾಲ್ ಎಮ್, ಶ್ರೀಮತಿ ಚಂದ್ರಾವತಿ ,ಶ್ರೀಮತಿ ಉಮಾವತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಂಘದ ಗ್ರಾಹಕರು ಭಾಗವಹಿಸಿದ್ದರು.
ಸಂಘದ ಸಿಬ್ಬಂದಿಯಾದ ಶ್ರೀಮತಿ ಕವಿತಾ ರವರು ಸ್ವಾಗತಿಸಿ, ಸಿಬ್ಬಂದಿಯಾದ ಶ್ರೀಮತಿ ಉಷಾಲಕ್ಷಿ÷್ಮರವರು ವಂದಿಸಿದರು. ಶಾಖೆಯ ಶಾಖಾಧಿಕಾರಿಯಾದ ಶ್ರೀಮತಿ ಭವ್ಯ ರವರು ಕಾರ್ಯಕ್ರಮ ನಿರೂಪಿಸಿದರು.