ನೂತನ ಹವಾ ನಿಯಂತ್ರಿತ ಸಭಾಂಗಣವನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ವೇದವ್ಯಾಸ ಕಾಮತ್‌ರವರು ಉದ್ಘಾಟಿಸಿ ಮಾತನಾಡಿ ಸಂಘದ ಸಭಾಂಗಣವು ಮುಂದಿನ ದಿನಗಳಲ್ಲಿ ಎಲ್ಲಾ ವರ್ಗದ ಬಡ ಜನರಿಗೆ ಅವಕಾಶ ಕಲ್ಪಿಸಿಕೊಡುವಂತಾಗಲಿ. ಹೆಚ್ಚಿನ ರಾಷ್ಟಿçÃಕೃತ ಬ್ಯಾಂಕುಗಳು ಪ್ರಾರಂಭವಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ. ಈ ನಿಟ್ಟಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿAಗ್ ಕ್ಷೇತ್ರದಲ್ಲಿ ತುಳುನಾಡಿನಲ್ಲಿ ನೀಡಿದ ಕೊಡುಗೆ ಅಪಾರವಾದದ್ದು, ಮುಂದಿನ ದಿನಗಳಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಎಲ್ಲಾ ಶಾಖೆಗಳು ಸ್ವಂತ ಕಟ್ಟಡ ಹೊಂದಲಿ. ಇದಕ್ಕೆ ಶ್ರಮಿಸುತ್ತಿರುವ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ನಿರ್ದೇಶಕರಿಗೆ ಧನ್ಯವಾದಗಳನ್ನು ಸಲ್ಲಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾದ ನಝೀಮಾ ಇನ್ಸುಟ್ಯೂಟ್ ಆ¥s಼ï ಬೆಂಗಳೂರು ಇದರ ಅಧ್ಯಕ್ಷರಾದ ಶ್ರೀ ಯು.ಟಿ.ಝುಲ್ಫಿಕರ್ ಅಹಮದ್ ಇವರು ಸಂಘದ ಪಿಗ್ಮಿ ಸಂಗ್ರಾಹಕರಿಗೆ ಉಚಿತ ಆರೋಗ್ಯ ವಿಮಾ ಕಾರ್ಡ್ ವಿತರಿಸಿ ಮಾತನಾಡಿದ ಇವರು ಸಂಘವು ಇನ್ನೂ ಹೆಚ್ಚಿನ ಶಾಖೆಗಳನ್ನು ಹೊಂದುವAತಾಗಲಿ ಹಾಗೂ ಜನಮನ್ನಣೆ ಪಡೆಯಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರು, ಸಂಘದ ಬೆಳವಣಿಗೆಗೆ ಸಹಕಾರ ನೀಡಿದ ಸರ್ವರನ್ನು ಅಭಿನಂದಿಸಿ ಸಂಘದ ಆಡಳಿತ ಮಂಡಳಿಯ ಕಾರ್ಯಯೋಜನೆಯಿಂದ, ಸಿಬ್ಬಂದಿ ವರ್ಗದವರ ಪರಿಶ್ರಮದಿಂದ, ಎಲ್ಲಾ ಸದಸ್ಯರ ಸಹಕಾರದಿಂದ ಠೇವಣಿ ಸಂಗ್ರಹಣೆಯಲ್ಲಿ, ಸಾಲ ನೀಡುವಿಕೆಯಲ್ಲಿ ಹಾಗೂ ವಸೂಲಾತಿಯಲ್ಲಿ ಹೆಚ್ಚಿನ ಪ್ರಗತಿಯನ್ನು ಸಾಧಿಸಿದೆ. ಸಂಘದ ಪಿಗ್ಮಿ ಸಂಗ್ರಹಕಾರರು ಸಂಘದ ಅಡಿಪಾಯವಾಗಿದ್ದು, ಈ ನಿಟ್ಟಿನಲ್ಲಿ ಸಂಘದ ಪಿಗ್ಮಿ ಸಂಗ್ರಾಹಕರಿಗೆ ಉಚಿತ ಆರೋಗ್ಯ ವಿಮೆಯನ್ನು ಸಂಘದ ವತಿಯಿಂದ ನೀಡಲಾಗುತ್ತಿದ್ದು ಅವರ ಆರೋಗ್ಯದ ಕಾಳಜಿಯಿಂದ ಈ ಅವಕಾಶವನ್ನು ಅವರಿಗೆ ಕಲ್ಪಿಸಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಸಂಘದ ಸಿಬ್ಬಂದಿಗಳಿAದ “ತುಳುನಾಡ ವೈಭವ” ಎಂಬ ಸಾಂಸ್ಕöÈತಿಕ ಕಾರ್ಯಕ್ರಮ ಹಾಗೂ ಸಂಘದ ಸಿಬ್ಬಂದಿಗಳ ಗುರಿ ಮೀರಿದ ಸಾಧನೆಗೆ “ಸಾಧನಾ ಪುರಸ್ಕಾರ” ವಿತರಣೆಯನ್ನು ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರಾದ ಶ್ರೀ ಜಿ ಪರಮೇಶ್ವರ ಪೂಜಾರಿ, ಶ್ರೀ ಆನಂದ ಎಸ್. ಕೊಂಡಾಣ, ಶ್ರೀ ಸೀತಾರಾಮ್ ಎನ್., ಶ್ರೀ ರಮಾನಾಥ ಸನಿಲ್, ಶ್ರೀ ಚಂದ್ರಹಾಸ ಮರೋಳಿ, ಶ್ರಿ ಬಿ.ಪಿ.ದಿವಾಕರ್, ಶ್ರೀ ಗೋಪಾಲ್ ಎಮ್ ಮತ್ತು ಶ್ರೀಮತಿ ಉಮಾವತಿ ಹಾಗೂ ಸಂಘದ ಸಲಹೆಗಾರರಾದ ಶ್ರೀ ಅಶೋಕ್ ಕುಮಾರ್, ಸಂಘದ ಪಿಗ್ಮಿ ಏಜೆಂಟರು, ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ ಸ್ವಾಗತಿಸಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಸೌಮ್ಯ ವಿಜಯ್ ವಂದಿಸಿದರು. ಸಂಘದ ಶಾಖಾಧಿಕಾರಿ ಶ್ರೀಮತಿ ಧನಲಕ್ಷಿ÷್ಮ ಕಾರ್ಯಕ್ರಮ ನಿರೂಪಿಸಿದರು.