ಈ ಕಾರ್ಯಕ್ರಮವನ್ನು ಕೆ. ಎಸ್. ಆರ್. ಟಿ. ಸಿ. ಡಿಪ್ಪೋ ಇದರ ಹಿರಿಯ ಮ್ಯಾನೇಜರ್ ಆಗಿರುವ ಶ್ರೀ ಇಸ್ಮಾಯಿಲ್ ರವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ , ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿAಗ್ ವ್ಯವಹಾರದ ಜೊತೆಗೆ ಸಮಾಜದ ಎಲ್ಲಾ ವರ್ಗದ ಜನರಿಗೆ ಆರೋಗ್ಯದ ದೃಷ್ಟಿಯಿಂದ ಕಾಳಜಿ ವಹಿಸಿ ಇಂತಹ ಶಿಬಿರಗಳನ್ನು ಆಯೋಜನೆ ಮಾಡುತ್ತಿರುವುದು ಶ್ಲಾಘನೀಯ, ಇಂತಹ ಸಮಾಜಪರ ಕಾರ್ಯಕ್ರಮಕ್ಕೆ ಕೆ. ಎಸ್. ಆರ್. ಟಿ. ಸಿ. ನಿಲ್ದಾಣವನ್ನು ಉಚಿತವಾಗಿ ನೀಡಿ ನಮ್ಮ ಸಹಕಾರವನ್ನು ನೀಡಿರುತ್ತೇವೆ ಎಂದು ತಿಳಿಸಿದರು.
ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ರೋಟರಿ ಕ್ಲಬ್ ಪುತ್ತೂರು ಇದರ ಅಧ್ಯಕ್ಷರಾದ ಶ್ರೀ ಪಶುಪತಿ ಶರ್ಮಾರವರು ಮಾತನಾಡಿ ಇಂತಹ ಉಚಿತ ವೈದ್ಯಕೀಯ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು.
ಈ ಕಾರ್ಯಕ್ರಮದ ಇನ್ನೋರ್ವ ಮುಖ್ಯ ಅತಿಥಿಯಾದ ಇನ್ನರ್‌ವ್ಹೀಲ್ ಕ್ಲಬ್ ಅಧ್ಯಕ್ಷರಾದ ಶ್ರೀಮತಿ ಅಶ್ವಿನಿ ಕೃಷ್ಣ ಮುಳಿಯ ರವರು ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಜನ ಸಾಮಾನ್ಯರಿಗೆ ತುಂಬಾ ಹತ್ತಿರವಾಗುತ್ತಿದೆ. ಇನ್ನಷ್ಟು ಸಮಾಜಮುಖಿ ಕಾರ್ಯಗಳಲ್ಲಿ ಸಂಘವು ತೊಡಗಿಸುವಂತಾಗಲಿ ಎಂದು ಶುಭ ಹಾರೈಸಿದರು.
ಈ ಕಾರ್ಯಕ್ರಮದಲ್ಲಿ ಉಪಸ್ತಿತರಿದ್ದ ಕೆ. ಎಸ್. ಆರ್. ಟಿ. ಸಿ. ಡಿಪ್ಪೋ ವ್ಯವಸ್ಥಾಪಕರಾದ ಶ್ರೀ ಅಬ್ಬಾಸ್ ರವರು ಮಾತನಾಡಿ, ಸಾರ್ವಜನಿಕ ಬದುಕಿನಲ್ಲಿ ಕೆ. ಎಸ್. ಆರ್. ಟಿ. ಸಿ. ಸಂಸ್ಥೆಯ ಪಾತ್ರ ಅಪಾರ, ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವದ ಪ್ರಕಾರ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಮಾಜಮುಖಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದರು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾದ ವಿಜಯ ಗ್ರಾಮಾಭಿವೃದ್ದಿ ಸಮಿತಿ ಸುಳ್ಯ ಇದರ ಅಧ್ಯಕ್ಷರಾದ ಶ್ರೀ ಯಶ್ವಿತ್ ಕಾಳಮನೆ ಯಾವರು ಮಾತಾನಾಡಿ , ಜನರು ಆರೋಗ್ಯದ ಬಗ್ಗೆ ನಿರ್ಲಕ್ಷ÷್ಯ ಮಾಡದೆ ಚಿಕಿತ್ಸೆ ಪಡೆದುಕೊಂಡು ಆರೋಗ್ಯವಂತರಾಗಲು ಇಂತಹ ಶಿಬಿರಗಳು ಸಹಕಾರಿಯಾಗಿದೆ ಎಂದರು. ಸಂಘವು ಪುತ್ತೂರು ಬಸ್ ನಿಲ್ದಾಣದಲ್ಲಿ ಶಿಬಿರ ಏರ್ಪಾಡಿಸಿದ್ದಕ್ಕೆ ಮೆಚ್ಚುಗೆ ಸೂಚಿಸಿದರು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾದ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ್ರ ಯೆನೆಪೋಯ ಇದರ ತರಬೇತಿದಾರರಾದ ಡಾ| ಅತೀಫಾ ಮಾತಾಡಿದ ಆರೋಗ್ಯದ ಬಗ್ಗೆ ನಿರ್ಲಕ್ಷ÷್ಯ ಮಾಡದೆ ಉಚಿತ ವೈದ್ಯಕೀಯ ಶಿಬಿರದಲ್ಲಿ ಸಿಗುವ ಸೌಲಭ್ಯಗಳನ್ನು ಬಳಸಿಕೊಳ್ಳಿರಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ಗೋಪಾಲ್ ಎಂ ರವರು ಮಾತಾನಾಡಿ, ಸಂಘವು ಎಲ್ಲಾ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂದರ್ಭದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸುತ್ತಿದ್ದು ಸಂಘವು ಈಗಾಗಲೇ ಒಟ್ಟು ೬೧ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿದ್ದು, ೬೨ನೇ ಶಿಬಿರವು ಇದಾಗಿದೆ . ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಮುಂದಾಳತ್ವದಲ್ಲಿ ೧೨ ವರ್ಷಗಳಿಂದ ಬ್ಯಾಂಕಿAಗ್ ಸೇವೆಯ ಜೊತೆಗೆ ಹಲವಾರು ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ವಸತಿ ರಹಿತ ಬಡ ಕುಟುಂಬಗಳಿಗೆ ವಸತಿ ನಿರ್ಮಾಣ, ಅಸಹಾಯಕರಿಗೆ ಪರಿಹಾರ ಧನ ನೀಡುವಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುತ್ತದೆ ಎಂದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಶಿಬಿರಾರ್ಥಿಗಳಿಗೆ ಉಚಿತ ಔಷಧಿ ವಿತರಣೆ , ಅಗತ್ಯವುಳ್ಳವರಿಗೆ ಉಚಿತ ಕಣ್ಣಿನ ಪೊರೆಯ ಚಿಕಿತ್ಸೆಯನ್ನು ಸಹಭಾಗಿ ಆಸ್ಪತ್ರೆಗಳಲ್ಲಿ ನಡೆಸುತ್ತಾ ಬಂದಿರುತ್ತದೆ. ನಮ್ಮ ಶಿಬಿರಗಳಲ್ಲಿ ಒಟ್ಟು ೧೩,೫೦೦ ಕ್ಕೂ ಮಿಕ್ಕಿ ಕನ್ನಡಕವನ್ನು ಉಚಿತವಾಗಿ ವಿತರಿಸಲಾಗಿದೆ. ಸಾರ್ವಜನಿಕರು ನಮ್ಮೊಂದಿಗೆ ಕೈ ಜೋಡಿಸಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಭಾರತೀಯ ಅಂಚೆ ಇಲಾಖೆ- ಪುತ್ತೂರು ವಿಭಾಗ ಆಧಾರ್ ಕಾರ್ಡ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರವನ್ನು ಆಯೋಜಿಸಲಾಯಿತು
ಈ ಕಾರ್ಯಕ್ರಮದಲ್ಲಿ ಕೆ. ಎಸ್. ಆರ್. ಟಿ. ಸಿ. ಡಿಪ್ಪೋ ವ್ಯವಸ್ಥಾಪಕರಾದ ಶ್ರೀ ಪೂರ್ಣೇಶ್ , ಆಶ್ವಿನಿ ಕೋ .ಅಪ್ ಸೊಸೈಟಿ ಇದರ ನಿರ್ದೇಶಕರಾದ ಶ್ರೀ ವಸಂತ ಬಿ., ರೋಟರಿ ಕ್ಲಬ್ ಸ್ವರ್ಣ ಇದರ ಅದ್ಯಕ್ಷರಾದ ಶ್ರೀ ಸುಂದರ ರೈ, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ್ರ ಯೆನೆಪೋಯ ಇಲ್ಲಿನ ವೈದ್ಯರಾದ ಶ್ರೀ ಶಿರಾಶ್ , ಪಿ. ಆರ್. ಓ ಶ್ರೀ ಭರತ್ ಕುಮಾರ್, ಸೋಶಿಯಲ್ ವರ್ಕರ್ ಶ್ರೀಮತಿ ಸ್ವೀಕೃತ, ಹಾಗೂ ಮತ್ತಿತರರು ಉಪಸ್ಧಿತರಿದ್ದರು.
ಕಾರ್ಯಕ್ರಮದಲ್ಲಿ ಸುಮಾರು ೩೦೦ಕ್ಕೂ ಮಿಕ್ಕಿ ಶಿಬಿರಾರ್ಥಿಗಳಿಗೆ ಆರೋಗ್ಯ ತಪಾಸಣೆ ಹಾಗೂ ದಂತ ಚಿಕಿತ್ಸೆ, ಉಚಿತ ಔಷಧಿ ವಿತರಣೆ, ಕಣ್ಣಿನ ತಪಾಸಣೆ ಮತ್ತು ದಂತ ತಪಾಸಣೆ ಮಾಡಲಾಯಿತು..
ಸಂಘದ ಹಿರಿಯ ಶಾಖಾದಿಕಾರಿ ಶ್ರೀಮತಿ ಸೌಮ್ಯಲತಾವರು ಸ್ವಾಗತಿಸಿ, ಸಿಬ್ಬಂದಿ ಕುಮಾರಿ ಪವಿತ್ರ ವಂದಿಸಿದರು. ಸಂಘದ ಪುತ್ತೂರು ಶಾಖೆಯ ಶಾಖಾಧಿಕಾರಿ ಶ್ರೀಮತಿ ಧನಲಕ್ಷಿ ರವರು ಕಾರ್ಯಕ್ರಮ ನಿರೂಪಿಸಿದರು,