ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡೀಲ್ ಮಂಗಳೂರು ಇದರ ಅಳದಂಗಡಿ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಜೆಸಿಐ ಬೆಳ್ತಂಗಡಿ ಮಂಜುಶ್ರೀ, ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ, ನಾರಾಯಣ ಗುರು ಸ್ವಾಮಿ ಸೇವಾ ಸಂಘ ಅಳದಂಗಡಿ ವಲಯ, ರೋಟರಿ ಕ್ಲಬ್ ಬೆಳ್ತಂಗಡಿ ಇವರ ಜಂಟಿ ಸಹಯೋಗದೊಂದಿಗೆ ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ, ಮಂಗಳೂರು, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮತ್ತು ಕೆ.ಎಂ.ಸಿ ಆಸ್ಪತ್ರೆ ಅತ್ತಾವರ, ಮಂಗಳೂರು ಇವರ ವೈದರ ತಂಡದವರಿAದ ಉಚಿತ ನೇತ್ರ ತಪಾಸಣೆ, ದಂತ ಚಿಕಿತ್ಸೆ, ಕ್ಯಾನ್ಸರ್ ತಪಾಸಣೆ ಮತ್ತು ಸಾಮಾನ್ಯ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ಭಾರತೀಯ ಅಂಚೆ ಇಲಾಖೆ- ಬೆಳ್ತಂಗಡಿ ವಿಭಾಗದ ವತಿಯಿಂದ ಆಧಾರ್ ಕಾರ್ಡ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರವು ಶ್ರೀಗುರು ಸಭಾಭವನ , ಅಳದಂಗಡಿ ಇಲ್ಲಿ ನಡೆಸಲಾಯಿತು.


ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಜೆಸಿಐ ಬೆಳ್ತಂಗಡಿ ಮಂಜುಶ್ರೀ, ಇದರ ಅಧ್ಯಕ್ಷರಾದ ಶ್ರೀಯುತ ರಂಜಿತ್ ಯಚ್.ಡಿ ಇವರು ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಶಿಬಿರವನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಮಾಡುತ್ತಿರುವುದು ಒಂದು ಒಳ್ಳೆಯ ಕೆಲಸ, ಯಾಕೆಂದರೆ ಆರೋಗ್ಯದಿಂದ ಇದ್ದರೆ ಮಾತ್ರ ಬೇರೆ ಚಟುವಟಿಕೆಗಳಲ್ಲಿ ಭಾಗವಹಿಸಲು ಸಾಧ್ಯ. ಈ ಆರೋಗ್ಯ ಶಿಬಿರದ ಮುಖ್ಯ ಉದ್ದೇಶವೆನೆಂದರೆ ಮಂಗಳೂರಿಗೆ ಹೋಗಿ ಆರೋಗ್ಯ ತಪಾಸಣೆ ಮಾಡುವುದು ಕೆಲವರಿಗೆ ಅಸಾಧ್ಯ ಅಂತವರಿಗೆ ಈ ಶಿಬಿರವು ತುಂಬಾ ಸಹಕಾರಿಯಾಗುತ್ತದೆ. ಇಂತಹ ಉತ್ತಮ ಸಮಾಜಮುಖಿ ಕಾರ್ಯವನ್ನು ಮಾಡಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಅಭಿನಂದನೆಗಳು ಹಾಗೂ ಈ ಶಿಬಿರದ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕಾಗಿ ವಿನಂತಿಸಿದರು.
ಕೆ.ಎA.ಸಿ ಅತ್ತಾವರ ಮಂಗಳೂರು ಇಲ್ಲಿಯ ವೈದ್ಯರಾದ ಡಾ|| ಅಭಿಷೇಕ್ ಕೃಷ್ಣನ್, ರೇಡಿಯೇಷನ್ ಓಂಕೊಲೋಜಿಷ್ಟ್ ಇವರು ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿAಗ್ ವ್ಯವಹಾರದ ಜೊತೆಗೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಸಮಾಜದ ಎಲ್ಲಾ ವರ್ಗದ ಜನರಿಗೆ ಕ್ಯಾನ್ಸರ್‌ನ ಅರಿವು ಮೂಡಿಸುವುದು ಹಾಗೂ ಆರೋಗ್ಯದ ದೃಷ್ಟಿಯಿಂದ ಜನರ ಕಾಳಜಿ ಮಾಡುತ್ತಿರುವುದು ಸಂಘದ ಉನ್ನತಿಗೆ ಮುಖ್ಯವಾದ ಕಾರಣ ಎಂದರು.

ಈ ಕಾರ್ಯಕ್ರಮದ ಮುಖ್ಯ ಅತಿಥಿಯಾದ ಅಳದಂಗಡಿ ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರ ಸಂಘದ ಮಾಜಿ ಉಪಾಧ್ಯಕ್ಷರಾದ ಶ್ರೀಯುತ ಸದಾನಂದ ಉಂಗಿಲಬೈಲು ಮಾತನಾಡಿ ಬ್ಯಾಂಕಿAಗ್ ಕೆಲಸ ಜೊತೆಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಇಂತಹ ಉತ್ತಮ ಸಾಮಾಜಿಕ ಕಾರ್ಯಚಟುವಟಿಕೆಗಳನ್ನು ಮಾಡುವುದು ನಿಜಕ್ಕೂ ಶ್ಲಾಘನೀಯ, ಕ್ಯಾನ್ಸರ್ ತಪಾಸಣೆ ಶಿಬಿರವನ್ನು ಆಯೋಜಿಸಿ ಇದರ ಬಗ್ಗೆ ಜನರಲ್ಲಿ ಮಾಹಿತಿ ಮತ್ತು ಅರಿವು ಮೂಡಿಸಲು ಸಹಕಾರಿಯಾಗುತ್ತದೆ ಎಂದರು.
ಈ ಕಾರ್ಯಕ್ರಮದ ಇನ್ನೋರ್ವ ಮುಖ್ಯ ಅತಿಥಿಯಾದ ನಾರಾಯಣ ಗುರು ಸ್ವಾಮಿ ಸೇವಾ ಸಂಘ ಅಳದಂಗಡಿ ವಲಯದ ಅಧ್ಯಕ್ಷರಾದ ಶ್ರೀಯುತ ಸಂಜೀವ ಪೂಜಾರಿ ಕೊಡಂಗೆ ಈ ಶಿಬಿರದ ಸದುಪಯೋಗವನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆದುಕೊಳ್ಳಬೇಕಾಗಿ ವಿನಂತಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರು ಮಾತಾನಾಡಿ, ಸಂಘವು ಎಲ್ಲಾ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂದರ್ಭದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸುತ್ತಿದ್ದು ಸಂಘವು ಈಗಾಗಲೇ ಒಟ್ಟು ೬೨ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿದ್ದು, ೬೩ನೇ ಶಿಬಿರವು ಇದಾಗಿದೆ ಎಂದರು. ಹೆಚ್ಚಿನ ಜನರು ತಮ್ಮ ಕೆಲಸದ ಒತ್ತಡದಿಂದಾಗಿ ಆರೋಗ್ಯದ ಕಡೆಗೆ ಗಮನ ಹರಿಸುವುದು ಕಡಿಮೆ ಯಾಗುತ್ತಿದೆ. ಈ ಬಗ್ಗೆ ನಿರ್ಲಕ್ಷ ವಹಿಸದೆ ಜನರು ತಮ್ಮ ಆರೋಗ್ಯ ಕಡೆಗೆ ಗಮನವನ್ನು ಹರಿಸಬೇಕೆಂದು ತಿಳಿಸಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಗತ್ಯವುಳ್ಳವರಿಗೆ ಉಚಿತ ಕಣ್ಣಿನ ಪೊರೆಯ ಚಿಕಿತ್ಸೆಯನ್ನು ಸಹಭಾಗಿ ಆಸ್ಪತ್ರೆಗಳಲ್ಲಿ ನಡೆಸುತ್ತಾ ಬಂದಿರುತ್ತದೆ. ನಮ್ಮ ಈವರೆಗಿನ ಶಿಬಿರಗಳಲ್ಲಿ ಒಟ್ಟು ೧೪,೦೦೦ ಕ್ಕೂ ಮಿಕ್ಕಿ ಕನ್ನಡಕವನ್ನು ಉಚಿತವಾಗಿ ವಿತರಿಸಲಾಗಿದೆ. ಈ ಕಾರ್ಯಕ್ರಮವನ್ನು ನಡೆಸಲು ನಮ್ಮೊಂದಿಗೆ ಸಹಕರಿಸಿದ ಸಂಘ ಸಂಸ್ಥೆ ಗಳಿಗೆ ಅಭಿನಂದನೆ ಸಲ್ಲಿಸಿದರು. ಶಿಬಿರವನ್ನು ಆಯೋಜಿಸಲು ಸ್ಥಳಾವಕಾಶ ಒದಗಿಸಿಕೊಟ್ಟ ಶ್ರೀ ಗುರು ಸಭಾಭವನದ ಮಾಲಿಕರಾದ ರೊಟೇರಿಯನ್ ಸೋಮನಾಥ ಬಂಗೇರ ವರ್ಪಾಳೆ ಇವರಿಗೆ ಅಭಿನಂದನೆ ಸಲ್ಲಿಸಿದರು
ಈ ಸಂದರ್ಭದಲ್ಲಿ ಭಾರತೀಯ ಅಂಚೆ ಇಲಾಖೆ- ಬೆಳ್ತಂಗಡಿ ವಿಭಾಗದ ವತಿಯಿಂದ ಆಧಾರ್ ಕಾರ್ಡ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಸುಮಾರು ೩೫೦ ಕ್ಕೂ ಮಿಕ್ಕಿ ಶಿಬಿರಾರ್ಥಿಗಳಿಗೆ ಆರೋಗ್ಯ ತಪಾಸಣೆ, ಕ್ಯಾನ್ಸರ್ ತಪಾಸಣೆ, ದಂತ ಚಿಕಿತ್ಸೆ, ಕಣ್ಣಿನ ತಪಾಸಣೆ ಹಾಗೂ ಉಚಿತ ಕನ್ನಡಕ ವಿತರಣೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ರಮಾನಾಥ್ ಸನಿಲ್, ಸತ್ಯದೇವತಾ ಸನ್ನಿದಿಯ ಆಡಳಿತ ಮಂಡಳಿಯ ಮುಖ್ಯಸ್ಥರಾದ ಶ್ರೀ ಶಿವಪ್ರಸಾದ್ ಅಜಿಲ, ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ ಇದರ ಸಂಚಾಲಕರಾದ ಶ್ರೀ ಸಂತೋಷ್ ಕಟ್ಟೆ, ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ, ಮಂಗಳೂರು ಇದರ ಡೆಂಟಲ್ ಡಿಪಾರ್ಟ್ಮೆಂಟ್‌ನ ವೈದ್ಯರಾದ ಡಾ. ಆತಿರ, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಇದರ ಕೆ.ಎಮ್.ಸಿ. ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಪ್ರೋ. ಹರ್ಬಟ್, ರೊಟೇರಿಯನ್ ಶ್ರೀ ಸೋಮನಾಥ ಬಂಗೇರ ವರ್ಪಾಳೆ , ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಶ್ರೀ ಸುಧೀರ್ ಆರ್ ಸುವರ್ಣ, ಕುದ್ಯಾಡಿ ಗರೋಡಿ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಶ್ರೀ ವಿಶ್ವನಾಥ್ ಕುದ್ಯಾಡಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಕಾರ್ಯದರ್ಶಿ ಶ್ರೀ ಅನುದೀಪ್ ಹಾಗೂ ಮತ್ತಿತರರು ಉಪಸ್ಧಿತರಿದ್ದರು
ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ ಇದರ ಅಧ್ಯಕ್ಷರಾದ ದೇವದಾಸ್ ಸಾಲ್ಯಾನ್ ಇವರು ಸ್ವಾಗತಿಸಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಹಿರಿಯ ಶಾಖಾಧಿಕಾರಿ ಶ್ರೀಮತಿ ರವಿಕಲಾ ವಂದಿಸಿದರು. ಅಳದಂಗಡಿ ಶಾಖೆಯ ಶಾಖಾಧಿಕಾರಿ ಶ್ರೀಮತಿ ಕಾವ್ಯಶ್ರೀ ರವರು ಕಾರ್ಯಕ್ರಮ ನಿರೂಪಿಸಿದರು.