ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಧಾನ ಕಚೇರಿಯಲ್ಲಿ ಹಿರಿಯ ನ್ಯಾಯವಾದಿ ಪಿ.ಪಿ ಹೆಗ್ಡೆಯವರಿಗೆ ಸನ್ಮಾನ ಕಾರ್ಯಕ್ರಮವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರ ಅಧ್ಯಕ್ಷತೆಯಲ್ಲಿ ಜರುಗಿತು.


ರಾಜ್ಯದ ಎಲ್ಲಾ ಸಹಕಾರಿ ಸಂಘಗಳ ಪರವಾಗಿ ಉಚ್ಚ ನ್ಯಾಯಾಲಯದಲ್ಲಿ ಸಹಕಾರ ಸಂಘಗಳಿಗೆ ಹೊರಡಿಸಿದ ರಾಜ್ಯ ಸರಕಾರದ ಸುತ್ತೋಲೆ “ಕೃಷಿಯೇತರ ಪತ್ತಿನ ಸಹಕಾರಿ ಸಂಘಗಳು, ವಿವಿಧೋದ್ದೇಶ ಸಹಕಾರ ಸಂಘಗಳು ಸಂಗ್ರಹಿಸುತ್ತಿರುವ ಠೇವಣಿಗೆ ಮತ್ತು ವಿತರಿಸುವ ಸಾಲಗಳಿಗೆ ಬಡ್ಡಿದರ ನಿಗಧಿ ಪಡಿಸಿರುವ ಕುರಿತು ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ ೧೯೫೯ರ ಪ್ರಕರಣ ೩೦ಬಿ ಅಡಿಯಲ್ಲಿ ನಿರ್ದೇಶನ ನೀಡುವ ಕುರಿತು” ಉಚ್ಚ ನ್ಯಾಯಾಲಯದಲ್ಲಿ ಉಚಿತವಾಗಿ ವಾದವನ್ನು ಮಂಡಿಸಿ ನ್ಯಾಯಾಲಯದಲ್ಲಿ ತಡೆಯಾಜ್ಞೆಯನ್ನು ಒದಗಿಸಿಕೊಟ್ಟ ಹಿರಿಯ ನ್ಯಾಯವಾದಿಗಳಾದ ಶ್ರೀ ಪದ್ಮ ಪ್ರಸಾದ್ ಹೆಗ್ಡೆಯವರಿಗೆ ಜಿಲ್ಲೆಯ ಪ್ರತಿಷ್ಠಿತ ಸಹಕಾರಿ ಸಂಘಗಳು ಮತ್ತು ಪಿಗ್ಮಿ ಎಜೆಂಟರ ಯೂನಿಯನ್ ಪರವಾಗಿ ಗೌರವಿಸಲಾಯಿತು.
ಗೌರವನ್ನು ಸ್ವೀಕರಿಸಿ ಮಾತಾನಾಡಿದ ಅವರು ಸಾಮಾಜಿಕ ನ್ಯಾಯ ಬೇಕಾದರೆ ನಾವು ಸಾಮಾಜಿಕವಾಗಿ ಹೋರಾಡುವುದು ಮುಖ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ನಾವು ಭ್ರಷ್ಟಚಾರ ರಹಿತ ನ್ಯಾಯಲಯದಲ್ಲಿ ವiನವಿ ಸಲ್ಲಿಸಿ ನಮಗೆ ಸಾಮಾಜಿಕ ನ್ಯಾಯದೊರಕಲು ಸಾಧ್ಯ, ನೈಪುಣ್ಯತೆ ಮತ್ತು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿದಲ್ಲಿ ಮಾತ್ರ ಸಹಕಾರ ರಂಗದಲ್ಲಿ ಉನ್ನತ ಮಟ್ಟಕ್ಕೇರಲು ಸಾಧ್ಯ, ಈ ನಿಟ್ಟಿನಲ್ಲಿ ಎಲ್ಲಾ ಸಹಕಾರಿಗಳು ಒಗ್ಗಟ್ಟಾಗಿ ಸರಕಾರ ಆದೇಶದ ವಿರುದ್ಧ ಹೋರಾಡಿ ಜಯಗಳಿಸಬೇಕೆಂದು ತಿಳಿಸಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಶೇ.೯೫ರಷ್ಟು ಮಹಿಳಾ ಸಿಬ್ಬಂದಿಗಳೇ ಇದ್ದು, ಪ್ರಾಮಾಣಿಕತೆಗೆ ಸಾಕ್ಷಿಯಾಗಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಕರಾವಳಿ ಕ್ರೇಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ವೆಂಕಟೇಶ್ ಎ, ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಸುಭಾಶ್ ಜೈನ್, ಮಹಾವೀರ ಕ್ರೇಡಿಟ್ ಕೋ-ಆಪರೇಟಿವ್ ಸೊಸೈಟಿಯ ಸಿಬ್ಬಂದಿ ವರ್ಗ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಸಲಹೆಗಾರರಾದ ಶ್ರೀ ಅಶೋಕ್ ಕುಮಾರ್, ಉದ್ಯಮಿ ಶ್ರೀ ದಿನೇಶ್ ಕಲ್ಲಡ್ಕ, ದ.ಕ ಜಿಲ್ಲಾ ಪಿಗ್ಮಿ ಎಜೆಂಟರ ಯೂನಿಯನ್ ನ ಅಧ್ಯಕ್ಷರಾದ ಶ್ರೀ ಪುರುಷೋತ್ತಮ ಪ್ರಭು ಮತ್ತು ಪದಾಧಿಕಾರಿಗಳು ಮತ್ತಿತ್ತರರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ನಿರೂಪಿಸಿ, ಸಹಾಯಕ ಪ್ರಬಂಧಕರಾದ ಶ್ರೀ ವಿಶ್ವನಾಥ್ ವಂದಿಸಿದರು.