ಈ ಕಾರ್ಯಕ್ರಮವನ್ನು ಬ್ರಹ್ಮ ಕುಮಾರಿ ಜಯಶ್ರೀ ಇವರು ಉದ್ಘಾಟಿಸಿ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ತುಂಬಾ ಒಳ್ಳೆಯ ಕೆಲಸಗಳನ್ನು ಮಾಡುತ್ತಾ ಬರುತ್ತಿದೆ. ಪ್ರತಿಯೊಬ್ಬರಿಗೂ ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸಮಸ್ಯೆಗಳು ಇರುವ ಸಂದರ್ಭದಲ್ಲಿ ಇಂತಹ ಶಿಬಿರಗಳನ್ನು ಆಯೋಜಿಸುವ ಮೂಲಕ ಸ್ವಸ್ಥ ಆರೋಗ್ಯ ಪೂರ್ಣ ಸಮಾಜಕ್ಕೆ ಮಹತ್ತರವಾದ ಕೊಡುಗೆಯನ್ನು ನೀಡುತ್ತಿದೆ. ಶಾರೀರಿಕ ಆರೋಗ್ಯದ ಜೊತೆಗೆ ಮನಸ್ಥಿತಿಯು ಚೆನ್ನಾಗಿರಬೇಕು. ಈ ನಿಟ್ಟಿನಲ್ಲಿ ಧ್ಯಾನವು ತುಂಬಾ ಪ್ರಯೋಜನಕಾರಿಯಾಗಿದೆ. ಉತ್ತಮ ಆರೋಗ್ಯಕ್ಕಾಗಿ ಔಷಧಿಗಳ ಜೊತೆಗೆ ಪ್ರತಿ ದಿನ ಧ್ಯಾನ ಮಾಡುವುದರ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದರು.
ನಿಧಿಲ್ಯಾಂಡ್ ಇನ್‌ಪ್ರಾಷ್ಟçಕ್ಚರ್ ಡೆವಲಪರ್ಸ್ ಇಂಡಿಯಾ ಪ್ರೆöÊವೆಟ್ ಲಿಮಿಟೆಡ್‌ನ ಆಡಳಿತ ನಿರ್ದೇಶಕಾರದ ಶ್ರೀಯುತ ಪ್ರಶಾಂತ್ ಕುಮಾರ್ ಸನಿಲ್‌ರವರು ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರ ಮುಂದಾಳತ್ವದಲ್ಲಿ ಆಯೋಜಿಸುತ್ತಿರುವ ಇಂತಹ ಸಮಾಜಮುಖಿ ಕಾರ್ಯಕ್ರಮಗಳು ಶ್ಲಾಘನೀಯ ಎಂದು ಈ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಯುವವಾಹಿನಿ (ರಿ.) ಮಂಗಳೂರು ಘಟಕದ ಅಧ್ಯಕ್ಷರಾದ ಶ್ರೀ ನಾಗೇಶ್ ಅಮೀನ್ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವದಂತೆ ಕಾರ್ಯಚರಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಆಯೋಜಿಸುತ್ತಿರುವ ಇಂತಹ ಆರೋಗ್ಯ ಶಿಬಿರದಲ್ಲಿ ಸಹಕಾರ ನೀಡಿರುವುದು ತುಂಬಾ ಸಂತೋಷವಾಗುತ್ತಿದೆ ಎಂದರು.
ಪ್ರಗತಿ ಮಹಿಳಾ ಮಂಡಲ (ರಿ.) ಉರ್ವಸ್ಟೋರ್ ಇದರ ಅಧ್ಯಕ್ಷರಾದ ಶ್ರೀಮತಿ ಪುಷ್ಪವತಿ ಕೆ. ಎ ರವರು ಮಾತನಾಡಿ ಬಡವರ್ಗದ ಜನರಿಗೆ ಉಪಯೋಗವಾಗುವ ಇಂತಹ ಆರೋಗ್ಯ ಶಿಬಿರಗಳನ್ನು ನಮ್ಮ ಸಂಘದಲ್ಲಿ ನಡೆಸಲು ಅವಕಾಶ ಕಲ್ಪಿಸಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಹಾಗೂ ಇತರ ಸಂಘ-ಸAಸ್ಥೆಗಳಿಗೆ ಧನ್ಯವಾದಗಳನ್ನು ಸಲ್ಲಿಸಿದರು.
ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಶುಭ ರಾಜೇಂದ್ರರವರು ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಲ್ಪಾವಧಿಯಲ್ಲಿ ಹಲವಾರು ಶಾಖೆಗಳನ್ನು ತೆರೆದು ಗ್ರಾಹಕರಿಗೆ ಉತ್ತಮ ಸೇವೆಗಳನ್ನು ನೀಡುತ್ತಿದೆ. ಇದರ ಜೊತೆಯಲ್ಲಿ ಉಚಿತ ಆರೋಗ್ಯ ಶಿಬಿರ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಸ್ಮರ್ದಾತಕ ಪರೀಕ್ಷೆ ಎದುರಿಸಲು ಮಾರ್ಗದರ್ಶನ, ಬಡವರಿಗೆ ಉಚಿತ ಮನೆ ನಿರ್ಮಾಣ, ಬಸ್ಸು ತಂಗುದಾಣ ನಿರ್ಮಾಣ, ಮುಂತಾದ ಸಮಾಜ ಮುಖಿ ಕಾರ್ಯಕ್ರಮಗಳನ್ನು ಮಾಡುತ್ತಿರುವುದು ಶ್ಲಾಘನೀಯ ಎಂದರು.
ಕೆ.ಎA.ಸಿ. ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿಯಾದ ಶ್ರೀ ಹರ್ಬಟ್ ಪಿರೈರಾ ರವರು ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಹಯೋಗದೊಂದಿಗೆ ಕೆ.ಎಂ.ಸಿ. ಆಸ್ಪತ್ರೆಯು ಸುಮಾರು ೪೦ಕ್ಕೂ ಮಿಕ್ಕಿ ಉಚಿತ ಶಿಬಿರಗಳನ್ನು ಆಯೋಜನೆ ಮಾಡಿದ್ದು, ಈ ಶಿಬಿರದಲ್ಲಿ ಉಚಿತ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತçಚಿಕಿತ್ಸೆಯನ್ನು ಮಾಡಲಾಗುವುದು, ಬಿ.ಪಿ. ಮತ್ತು ಮದುಮೇಹ ತಪಾಸಣೆ, ಎಲುಬು, ಕೀಲು, ಕಿವಿ, ಮೂಗು, ಗಂಟಲು ತಪಾಸಣೆ, ಜನರಲ್ ವೈದ್ಯಕೀಯ ಸಮಾಲೋಚನೆ, ಉಚಿತ ಔಷಧಿ ವಿತರಣೆಯನ್ನು ನೀಡಲಾಗುವುದು ಎಂದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತೀ ವರ್ಷ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬಂದಿದ್ದು, ಇದು ಸಂಘದ ೬೮ನೇ ಉಚಿತ ವೈದ್ಯಕೀಯ ಶಿಬಿರವಾಗಿದೆ. ಈ ಕಾರ್ಯಕ್ರಮವು ಬಡವರ್ಗದ ಜನರಿಗೆ ಮಾತ್ರವಲ್ಲದೇ ಶ್ರೀಮಂತ ವರ್ಗದ ಜನರಿಗೂ ಕೂಡ ತುಂಬಾ ಪ್ರಯೋಜನಕಾರಿಯಾಗಿದೆ. ಇದರಿಂದ ಸಾರ್ವಜನಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಸಂಘವು ಶಿಬಿರವನ್ನು ಆಯೋಜಿಸಲು ಸಹಕಾರ ನೀಡಿದ ಯುವವಾಹಿನಿ (ರಿ.) ಮಂಗಳೂರು ಘಟಕ, ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ , ಪ್ರಗತಿ ಮಹಿಳಾ ಮಂಡಲ (ರಿ.) ಹಾಗೂ ಬ್ರಹ್ಮ ಕುಮಾರೀಸ್ ಮಂಗಳೂರು, ಇದರ ಸರ್ವ ಪಧಾಧಿಕಾರಿಗಳಿಗೆ ಕ್ರತಜ್ನತೆಯನ್ನು ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನೂ ಇಂತಹ ಶಿಬಿರಗಳನ್ನು ಆಯೋಜಿಸಲು ಸಹಕಾರವನ್ನು ಕೋರಿದರು. ಅದೇ ರೀತಿ ಇಂತಹ ಆರೋಗ್ಯ ಶಿಬಿರವನ್ನು ಏರ್ಪಡಿಸಲು ಸಹಕರಿಸುತ್ತಿರುವ ಕೆ.ಎಂ.ಸಿ. ಆಸ್ಪತ್ರೆಯ ಆಡಳಿತ ವರ್ಗ , ವೈದ್ಯರು ಹಾಗೂ ಸಿಬ್ಬಂದಿವರ್ಗದವರಿಗೂ ಕ್ರತಜ್ನತೆಯನ್ನು ಸಲ್ಲಿಸಿದರು. ಸಂಘವು ದಿನಾಂಕ ೨೩.೦೬.೨೦೨೪ ರಂದು ಉಚಿತ ಆರೋಗ್ಯ ಶಿಬಿರವನ್ನು ಪಡುಬಿದ್ರೆಯಲ್ಲಿ ಆಯೋಜಿಸಿದ್ದು, ಅತೀ ಶೀಘ್ರದಲ್ಲಿ ಸಂಘದ ೩೩ನೇ ನೂತನ ಕೃಷ್ಣಾಪುರ ಶಾಖೆಯು ತನ್ನ ಸ್ವಂತ ಕಟ್ಟಡದಲ್ಲಿ ಕಾರ್ಯಾರಂಭಗೊಳ್ಳಲಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ. ನಿರ್ದೇಶಕರಾದ ಶ್ರೀ ಜಿ. ಪರಮೇಶ್ವರ ಪೂಜಾರಿ, ಶ್ರೀ ರಮನಾಥ್ ಸನಿಲ್, ಶ್ರೀ ಚಂದ್ರಹಾಸ ಮರೋಳಿ, ಶ್ರೀ ಮುದ್ದು ಮೂಡುಬೆಳ್ಳೆ, ಶ್ರೀ ಗೋಪಾಲ್ ಎಮ್., ಶ್ರೀಮತಿ ಉಮಾವತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಸಲಹೆಗಾರರಾದ ಶ್ರೀ ಅಶೋಕ್ ಕುಮಾರ್, ಕೆ.ಎಂ.ಸಿ. ಆಸ್ಪತ್ರೆಯ ಕಣ್ಣಿನ ವೈದ್ಯರಾದ ಡಾ. ಉರ್ಜಾ ಶರ್ಮ, ಯುವವಾಹಿನಿ (ರಿ.) ಮಂಗಳೂರು ಘಟಕದ ಆರೋಗ್ಯ ನಿರ್ದೇಶಕರಾದ ಶ್ರೀಯುತ ಅರುಣ್ ಕೋಟ್ಯಾನ್, ಯುವವಾಹಿನಿ (ರಿ.) ಮಂಗಳೂರು ಘಟಕ, ಮಹಿಳಾ ಘಟಕ , ಪ್ರಗತಿ ಮಹಿಳಾ ಮಂಡಲ ಹಾಗೂ ಬ್ರಹ್ಮ ಕುಮಾರೀಸ್ ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಮಾರು ೨೫೦ಕ್ಕೂ ಶಿಬಿರಾರ್ಥಿಗಳಿಗೆ ಆರೋಗ್ಯ ತಪಾಸಣೆ, ಉಚಿತ ಔಷಧಿ ವಿತರಣೆ ಹಾಗೂ ನೇತ್ರ ತಪಾಸಣೆಯನ್ನು ನಡೆಸಲಾಯಿತು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಹಿರಿಯ ಶಾಖಾಧಿಕಾರಿ ಶ್ರೀ ಸಚಿನ್ ಸ್ವಾಗತಿಸಿ, ಶಾಖಾಧಿಕಾರಿ ಶ್ರೀಮತಿ ಸುಜಾತ ಧನ್ಯವಾದವಿತ್ತರು. ಕಾರ್ಯಕ್ರಮದ ನಿರೂಪಣೆಯನ್ನು ಹಿರಿಯ ಶಾಖಾಧಿಕಾರಿಯಾದ ಶ್ರೀಮತಿ ಸ್ವಾತಿ ಮಾಡಿದರು. ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರದ ಸಂಯೋಜನೆಯನ್ನು ಪ್ರಭಾರ ಶಾಖಾಧಿಕಾರಿಗಳಾದ ಶ್ರೀಮತಿ ಸುಮನಾ ಹಾಗೂ ಶ್ರೀಮತಿ ಆಶಾ ರವರು ನಡೆಸಿದರು.