ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ ‘ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತೀ ವರ್ಷ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬಂದಿದ್ದು, ಪ್ರಸ್ತುತ ಸ್ವಂತ ಮಾಲೀಕತ್ವದ ನೂತನ 33ನೇ ಕೃಷ್ಣಾಪುರ ಶಾಖೆಯ ಉದ್ಘಾಟನಾ ಸಮಾರಂಭದ ಪ್ರಯುಕ್ತ ಆರೋಗ್ಯ ಶಿಬಿರವನ್ನು ಏರ್ಪಡಿಸಿದ್ದು, ಇದು ಸಂಘದ 71ನೇ ಉಚಿತ ವೈದ್ಯಕೀಯ ಶಿಬಿರವಾಗಿದೆ. ಈ ಕಾರ್ಯಕ್ರಮವು ಕೃಷ್ಣಾಪುರದ ಜನರಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರಿಂದ ಸಾರ್ವಜನಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಅದೇ ರೀತಿ ಇಂತಹ ಆರೋಗ್ಯ ಶಿಬಿರವನ್ನು ಏರ್ಪಡಿಸಲು ಸಹಕರಿಸುತ್ತಿರುವ ಯೆನೆಪೋಯ ಆಸ್ಪತ್ರೆ ಹಾಗೂ ಶ್ರೀನಿವಾಸ್ ಆಸ್ಪತ್ರೆಯ ಆಡಳಿತ ವರ್ಗ , ವೈದ್ಯರು ಹಾಗೂ ಸಿಬ್ಬಂದಿವರ್ಗದವರಿಗೂ ಕ್ರತಜ್ನತೆಯನ್ನು ಸಲ್ಲಿಸಿದರು. ನೂತನ ಶಾಖೆಯ ಉದ್ಘಾಟನಾ ಸಮಾರಂಭದ ಪ್ರಯಕ್ತ ನಿರಖು ಠೇವಣಿಯ ಮೇಲೆ ವಿಶೇಷ ಬಡ್ಡಿ ದರವನ್ನು ನೀಡಲಾಗುವುದು ಹಾಗೂ ಗ್ರಾಹಕರಿಗೆ ಉಚಿತ ಉಡುಗೊರೆಯ ಜೊತೆಗೆ ಪ್ರತಿ ಗ್ರಾಂ ಗೆ ಗರಿಷ್ಟ ಚಿನ್ನಾಭರಣ ಸಾಲವನ್ನು ನೀಡಲಾಗುವುದು ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ಜಿ. ಪರಮೇಶ್ವರ ಪೂಜಾರಿ, ಶ್ರೀ ಆನಂದ ಎಸ್. ಕೊಂಡಾಣ, ಶ್ರೀ ಸೀತಾರಾಮ್ ಎನ್, ಶ್ರೀ ರಮನಾಥ್ ಸನಿಲ್, ಶ್ರೀ ಚಂದ್ರಹಾಸ ಮರೋಳಿ, ಶ್ರೀ ಮುದ್ದು ಮೂಡುಬೆಳ್ಳೆ, ಶ್ರೀ ಗೋಪಾಲ್ ಎಮ್., ಶ್ರೀಮತಿ ಉಮಾವತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಸಲಹೆಗಾರರಾದ ಶ್ರೀ ಅಶೋಕ್ ಕುಮಾರ್, ಸ್ಥಳೀಯ ಮ.ನ.ಪಾ. ಸದಸ್ಯರುಗಳಾದ ಶ್ರೀಮತಿ ಲಕ್ಷಿ÷್ಮ ಶೇಖರ್ ದೇವಾಡಿಗ ಹಾಗೂ ಶ್ರೀಮತಿ ಶಂಶಾದ್ ಅಬೂಬಕ್ಕರ್ , ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ (ರಿ.) ಕಾಟಿಪಳ್ಳದ ಅಧ್ಯಕ್ಷರಾದ ಶ್ರೀ ದೇವೇಂದ್ರ ಕೋಟ್ಯಾನ್ , ಸ್ಥಳೀಯ ಮ.ನ.ಪಾ. ಮಾಜಿ ಸದಸ್ಯರಾಗಿರುವ ಶ್ರೀ ತಿಲಕ್ ರಾಜ್ ಕೃಷ್ಣಾಪುರ, ಕಲಾವಿದರಾದ ಹುಸೈನ್ ಕಾಟಿಪಳ್ಳ, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರದ ವೈದ್ಯಾಧಿಕಾರಿ ಡಾ. ಸ್ನೇಹಾ , ಸಮಾಜ ಕಾರ್ಯಕರ್ತೆ ದಿವ್ಯ ಜ್ಯೋತಿ, ಶ್ರೀನಿವಾಸ್ ಇನ್ಸ್ಸ್ಟಿಟ್ಯೂಟ್ ಆಪ್ ಡೆಂಟಲ್ ಸಾಯನ್ಸ್ನ ಪ್ರಾಶುಂಪಾಲರಾದ ಶ್ರೀಮತಿ ಕೆ. ರೇಷ್ಮಾ ಪೈ, ವೈದ್ಯರಾದ ಡಾ. ವಿದ್ಯಾ ಭಟ್, ಮತ್ತಿತ್ತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಮಾರು 200ಕ್ಕೂ ಶಿಬಿರಾರ್ಥಿಗಳಿಗೆ ಆರೋಗ್ಯ ತಪಾಸಣೆ, ಉಚಿತ ಓಷಧಿ, ವಿತರಣೆ, ದಂತ ಚಿಕಿತ್ಸಾ ಹಾಗೂ ನೇತ್ರ ತಪಾಸಣೆಯನ್ನು ನಡೆಸಲಾಯಿತು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಸ್ವಾಗತಿಸಿ, ಉಪಾಧ್ಯಕ್ಷ ನೇಮಿರಾಜ್ ಪಿ. ವಂದಿಸಿದರು. ನರೇಂದ್ರ ಕೆರೆಕಾಡು ಕಾರ್ಯಕ್ರಮ ನಿರೂಪಿಸಿದರು.