ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಸಿಬ್ಬಂದಿಗಳು ಭಜನಾ ಕಾರ್ಯಕ್ರಮವನ್ನು ಭಕ್ತಿಪೂರ್ವಕವಾಗಿ ನಡೆಸಿಕೊಟ್ಟರು. ಪುರೋಹಿತರಾದ ಶ್ರೀಯುತ ರಾಜೇಶ್ ಶಾಂತಿ ಇವರು ಗುರುಪೂಜೆ ನಡೆಸಿ, ನಂತರ ಪ್ರಸಾದ ವಿತರಣೆಯನ್ನು ನಡೆಸಿದರು.
ಈ ಶುಭ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್, ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ , ನಿರ್ದೇಶಕರುಗಳಾದ ಶ್ರೀ ಜಿ. ಪರಮೇಶ್ವರ್ ಪೂಜಾರಿ, ಶ್ರೀ ಸೀತಾರಾಮ್ ಎನ್., ಶ್ರೀ ರಮಾನಾಥ್ ಸನಿಲ್, ಶ್ರೀ ಗೋಪಾಲ್ ಎಮ್, ಶ್ರೀಮತಿ ಉಮಾವತಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಸಲಹೆಗಾರರಾದ ಶ್ರೀ ಅಶೋಕ್ ಕುಮಾರ್, ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರಾದ ಶ್ರೀ ವಾಮನ್ ಕೆ ಹಾಗೂ ಸಂಘದ ಸದಸ್ಯರುಗಳು ಹಾಗೂ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
