ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಪಂಜಿಮೊಗರು ಶಾಖೆಯ ವತಿಯಿಂದ ಶ್ರೀ ಕೃಷ್ಣ ಭಜನಾ ಮಂದಿರ ಹಾಗೂ ಶ್ರೀ ಶಾರದೋತ್ಸವ ಸೇವಾ ಟ್ರಸ್ (ರಿ), ಹಿಂದೂ ಯುವಸೇನೆ ವಿದ್ಯಾನಗರ ಶಾಖೆ ಪಂಜಿಮೊಗರು ಯುವವಾಹಿನಿ (ರಿ.) ಕೂಳೂರು ಘಟಕ ಹಾಗೂ ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಇವರ ಜಂಟಿ ಸಹಯೋಗದೊಂದಿಗೆ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಹಾಗೂ ಸಮುದಾಯ ದಂತ ವಿಭಾಗ ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇದರ ನುರಿತ ತಜ್ಞ ವೈದ್ಯ ತಂಡದವರಿAದ ಉಚಿತ ವೈದ್ಯಕೀಯ ನೇತ್ರ ತಪಾಸಣೆ ಮತ್ತು ದಂತ ತಪಾಸಣ ಚಿಕಿತ್ಸೆ ಶಿಬಿರವು ಶಾರದ ನಿಕೇತನ ಶ್ರೀ ಕೃಷ್ಣ ಭಜನಾ ಮಂದಿರದ ಅಂಗಣದಲ್ಲಿ ನಡೆಯಿತು.


ಈ ಕಾರ್ಯಕ್ರಮವನ್ನು ಮಹಾನಗರ ಪಾಲಿಕೆಯ ಪಂಜಿಮೊಗರು ವಾರ್ಡ್ನ ಕಾರ್ಪೋರೇಟರ್ ಆಗಿರುವ ಶ್ರೀ ಅನಿಲ್ ಕುಮಾರ್ ರವರು ಉದ್ಘಾಟಿಸಿ ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಮುಂದಾಳತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳೊAದಿಗೆ ಸೇರಿ ನಡೆಸುವ ಜನ ಪರ ಕಾರ್ಯಕ್ರಮಗಳು ಶ್ಲಾಘನೀಯ. ಇಂತಹ ಸಮಾಜಮುಖಿ ಕಾರ್ಯಗಳನ್ನು ಮುಂದಿನ ದಿನಗಳಲ್ಲಿ ಇನ್ನಷ್ಟು ಮಾಡುವಂತಾಗಲಿ ಎಂದು ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಇದರ ಅಧ್ಯಕ್ಷರಾಗಿರುವ ಶ್ರೀ ಜಯರಾಜ್ ಪ್ರಕಾಶ್ ರವರು ಮಾತನಾಡಿ ಇಂದಿನ ಪ್ರಸ್ತುತ ಜೀವನ ಶೈಲಿಯಿಂದಾಗಿ ಆರೋಗ್ಯ ಸಮಸ್ಯೆ ಆಗಾಗ ಭಾದಿಸುತ್ತಿರುತ್ತದೆ ಹಾಗಾಗಿ ಇಂತಹ ಶಿಬಿರಗಳನ್ನು ಆಯೋಜಿಸಿ, ಜನ ಸಾಮಾನ್ಯರಿಗೆ ವೈದ್ಯಕೀಯ ಸೌಲಭ್ಯವನ್ನು ತಲುಪಿಸುತ್ತಿರುವುದು ಶ್ಲಾಘನೀಯ ಎಂದರು
ಮುಖ್ಯ ಅತಿಥಿಗಳಾಗಿ ಆಗಮಿಸಿದ ಯುವವಾಹಿನಿ (ರಿ) ಕೂಳೂರು ಘಟಕದ ಅಧ್ಯಕ್ಷರಾದ ಶ್ರೀಮತಿ ಇಂದಿರ ಸುರೇಶ್ ರವರು ಮಾತನಾಡಿ, ಪ್ರಾರಂಭದಿAದ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳನ್ನು ಇಂತಹ ಶಿಬಿರಗಳಿಂದ ತಿಳಿದುಕೊಳ್ಳಲು ಸಾಧ್ಯ. ಇಂತಹ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳುವುದು ಅಗತ್ಯ. ನಮ್ಮ ಆರೋಗ್ಯ, ನಮ್ಮ ಕಾಳಜಿ ಎಂದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆತ್ಮಶಕ್ತಿ ವಿವಿದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರು ಮಾತನಾಡಿ, ಪಂಜಿಮೊಗರು ಪರಿಸರದಲ್ಲಿ ಕಳೆದ 8 ವರ್ಷಗಳಿಂದ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಿರಂತರ ಆರೋಗ್ಯ ಶಿಬಿರವನ್ನು ಆಯೋಜಿಸುತ್ತಾ ಬಂದಿರುತ್ತೇವೆ, ಪ್ರತಿ ಶಿಬಿರದಲ್ಲೂ ಸುಮಾರು ೩೦೦ ಮಿಕ್ಕಿ ಶಿಬಿರಾರ್ಥಿಗಳು ಶಿಬಿರದ ಸದುಪಯೋಗ ಪಡೆಯುತ್ತಾ ಬಂದಿರುತ್ತಾರೆ. ಪ್ರಸ್ತುತ ಸಂಘವು ಹಬ್ಬದ ಕೊಡುಗೆಯಾಗಿ ೧೦೦೦ ದಿನಗಳ ಠೇವಣಿಗಳ ಮೇಲೆ ಶೇ. 10.50 ವಿಶೇಷ ಬಡ್ಡಿದರವನ್ನು ನೀಡುತ್ತಿದ್ದು, ಹಿರಿಯ ನಾಗರಿಕರಿಗೆ ಮನೆಯ ಅಂಗಳಕ್ಕೆ ಸೇವೆಯನ್ನು ನೀಡುತ್ತಿದ್ದೇವೆ. ಚಿನ್ನಾಭರಣ ಸಾಲಗಳಿಗೆ ಯಾವುದೇ ಸೇವಾ ಶುಲ್ಕ ವಿಲ್ಲದೆ ಅಧಿಕ ಮೌಲ್ಯದ ಸಾಲವನ್ನು ವಿತರಿಸಲಾಗುತ್ತಿದೆ. ಬಡ ವಿಧ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಪರೀಕ್ಷ ಶುಲ್ಕವನ್ನು ಬರಿಸಲು ಸಾದ್ಯವಾಗದ ಸದಸ್ಯರ ಮಕ್ಕಳ ಪರೀಕ್ಷೆ ಶುಲ್ಕವನ್ನು ಸಂಘದ ವತಿಯಿಂದ ಬರಿಸುತ್ತಾ ಬಂದಿರುತ್ತೇವೆ. ಸಂಘದ ಎಲ್ಲಾ ಸೌಲಭ್ಯಗಳನ್ನು ಸದಸ್ಯರು ಹಾಗೂ ಸಾರ್ವಜನಿಕರು ಪಡೆದುಕೊಳ್ಳಬೇಕಾಗಿ ವಿನಂತಿಸಿದರು.
ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾದ್ಯಕ್ಷರಾದ ಶ್ರೀ ನೇಮಿರಾಜ್ ಪಿ. ನಿರ್ದೇಶಕರಾದ ಶ್ರೀ ಜಿ ಪರಮೇಶ್ವರ ಪೂಜಾರಿ, ಶ್ರೀ ರಮನಾಥ್ ಸನಿಲ್, ಶ್ರೀ ಬಿ ಪಿ ದಿವಾಕರ್, ಶ್ರೀ ಗೋಪಾಲ್ ಎಮ್, ಶ್ರೀಮತಿ ಉಮಾವತಿ, ಶ್ರೀ ಕೃಷ್ಣ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀ ಸುನೀಲ್ ಭಂಡಾರಿ, ಶ್ರೀ ಶಾರದೋತ್ಸವ ಸೇವ ಟ್ರಸ್ (ರಿ.) ಇದರ ಅಧ್ಯಕ್ಷರಾದ ಶ್ರೀ ಉಮೇಶ್ ಪೂಜಾರಿ, ಹಿಂದು ಯುವ ಸೇನೆ ವಿದ್ಯಾ ಶಾಖೆ ವಿದ್ಯಾನಗರ ಇದರ ಅಧ್ಯಕ್ಷರಾದ ಶ್ರೀ ಸಂದೀಪ್, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇಲ್ಲಿನ ವೈದ್ಯರಾದ ಡಾ ಸ್ನೇಹಾ, ಸಮುದಾಯ ದಂತ ವಿಭಾಗ ಯೆನಪೋಯ ದಂತ ಕಾಲೇಜ್ ಮತ್ತು ಆಸ್ಪತ್ರೆ ದೇರಳಕಟ್ಟೆ ಇಲ್ಲಿನ ವೈದ್ಯರಾದ ಡಾ. ಅಪೂರ್ವ ಕೋಟ್ಯಾನ್, ಜಿಲ್ಲಾ ಆಸ್ಪತ್ರೆಯ ಆರೋಗ್ಯ ಸಮಿತಿಯ ಸದಸ್ಯರಾದ ಶ್ರೀಮತಿ ಪ್ರಮೀಳ ಈಶ್ವರ್, ಲಯನ್ಸ್ ಮತ್ತು ಲಿಯೋ ಕ್ಲಬ್ ಇದರ ಕಾರ್ಯದರ್ಶಿಯಾಗಿರುವ ಶ್ರೀ ರವಿ ಶಂಕರ್ ರೈ, ಸಂಘದ ಸದಸ್ಯರಾಗಿರುವ ಉದ್ಯಮಿ ಶ್ರೀ ದೋಟ ಹರೀಶ್ ಶೆಟ್ಟಿ, ಸಂಘದ ಸಲಹಾ ಸಮಿತಿಯ ಸದಸ್ಯರಾದ ಶ್ರೀ ಗಣೇಶ್ ಸನಿಲ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸುಮಾರು 200 ಮಿಕ್ಕಿ ಶಿಬಿರಾರ್ಥಿಗಳಿಗೆ ತಪಾಸಣೆ ಹಾಗೂ ದಂತ ಚಿಕಿತ್ಸೆ ಉಚಿತ ಔಷದಿ ವಿತರಣೆ, ಕಣ್ಣಿನ ತಪಾಸಣೆ ಹಾಗೂ ಉಚಿತ ಕನ್ನಡಕ ವಿತರಣೆ ನಡೆಯಿತು.
ಹಿರಿಯ ಶಾಖಾಧಿಕಾರಿ ಶ್ರೀಮತಿ ರವಿಕಲ ಸ್ವಾಗತಿಸಿ, ಶಾಖಾಧಿಕಾರಿ ಶ್ರೀಮತಿ ರಮ್ಯ ವಂದಿಸಿದರು. ಹಿರಿಯ ಶಾಖಾಧಿಕಾರಿ ಶ್ರೀಮತಿ ಸೌಮ್ಯಲತಾ ಕಾರ್ಯಕ್ರಮವನ್ನು ನಿರೂಪಿಸಿದರು, ಶಿಬಿರದ ಸಂಯೋಜನೆಯನ್ನು ಶಾಖಾಧಿಕಾರಿ ಶ್ರೀಮತಿ ಸಂಗೀತಾ ನಿರ್ವಹಿಸಿದರು.