ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ (ನಿ.) ಬೆಂಗಳೂರು ಇದರ 20ನೇ ವಾರ್ಷಿಕ ಸಾಮಾನ್ಯ ಸಭೆಯು ಕೆ.ಇ.ಬಿ ಇಂಜಿನಿಯರ್ಸ್, ಸರ್.ಎಂ ವಿಶ್ವೇಶ್ವರಯ್ಯ ಸಭಾಂಗಣ, ಸಿಲ್ವರ್ ಜುಬಿಲಿ ಬಿಲ್ಡಿಂಗ್, ಬೆಂಗಳೂರಿನಲ್ಲಿ ಮಹಾಮಂಡಳದ ಅಧ್ಯಕ್ಷರಾದ ಶ್ರೀ ವಿ. ರಾಜು ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಾಮಾನ್ಯ ಸಭೆಯಲ್ಲಿ ರಾಜ್ಯದಲ್ಲಿ ಹೆಚ್ಚು ಮುದ್ರಾಂಕ ಶುಲ್ಕ ಪಡೆದು ಹಾಗೂ ಇ-ಸ್ಟಾಂಪಿ0ಗ್ ಪ್ರತಿಗಳನ್ನು ಮುದ್ರಿಸಿ ಮಾರಾಟ ಮಾಡಿರುವ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರಧಾನ ಸಮಾರಂಭವು ಜರುಗಿತು.


ಈ ಸಂದರ್ಭದಲ್ಲಿ 2023-24 ನೇ ಸಾಲಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ “ಅತಿ ಹೆಚ್ಚು ಮೊತ್ತದ ಇ-ಸ್ಟಾಂಪಿAಗ್ ಮುದ್ರಿಸಿರುವ ಸಂಘ” ಪ್ರಶಸ್ತಿಯನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಮಹಾಮಂಡಳದ ನಿರ್ದೇಶಕರಾದ ಸಹಕಾರ ರತ್ನ ಶ್ರೀಯುತ ಚಿತ್ತರಂಜನ್ ಬೋಳಾರ್ ರವರಿಗೆ ಮಹಾಮಂಡಳದ ಅಧ್ಯಕ್ಷರಾದ ಶ್ರೀ ವಿ. ರಾಜು ರವರು ನೀಡಿ ಗೌರವಿಸಿದರು. ಈ ಸನ್ಮಾನ ಸಮಾರಂಭದಲ್ಲಿ ಮಹಾಮಂಡಳ ನಿಕಟಪೂರ್ವ ಅಧ್ಯಕ್ಷರಾದ ಶ್ರೀಮತಿ ಕೆ. ಲಲಿತ ಜಿ.ಟಿ. ದೇವೇಗೌಡ, ಉಪಾಧ್ಯಕ್ಷರಾದ ಶ್ರೀ ಕೆ. ಕೆ ಮಹೇಂದ್ರ ಪ್ರಸಾದ್ ಗೌಡ, ನಿರ್ದೇಶಕರಾದ ಶ್ರೀ ಪಿ.ಕೆ ಜಯಕೃಷ್ಣೇಗೌಡ, ಶ್ರೀ ಡಿ. ಆರ್. ನಾಗೇಶಪ್ಪ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಪ್ರಜ್ವಲ್ ಕೆ. ಎನ್, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾದ ಶ್ರೀ ಗೋಪಾಲ್ ಎಮ್. ಮತ್ತಿತರರು ಉಪಸ್ಥಿತರಿದ್ದರು.
ಸಂಘವು ಕಳೆದ 10 ವರ್ಷಗಳಿಂದ ಸತತವಾಗಿ ಇ ಸ್ಟಾಂಪಿAಗ್ ಸೇವೆಗೆ ಪ್ರಶಸ್ತಿಯನ್ನು ಪಡೆಯುತ್ತಿರುವುದು ಸಂಘದ ಪ್ರಗತಿಯ ಸಂಕೇತವಾಗಿದೆ.