ದ.ಕ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ (ರಿ). ಮಂಗಳೂರು ಮತ್ತು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇವರ ಜಂಟಿ ಸಹಯೋಗದೊಂದಿಗೆ ಕಣಚೂರು ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ನಾಟೆಕಲ್, ಮಂಗಳೂರು ಇವರ ವೈದ್ಯರ ತಂಡದವರಿಂದ ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ತಪಾಸಣಾ ಶಿಬಿರವು ರಾಜ್ಯ ಸರಕಾರಿ ನೌಕರರ ಸಂಘದ ಸಮುದಾಯ ಭವನ ಕಟ್ಟಡದ ಎರಡನೇ ಮಹಡಿಯಲ್ಲಿ ಜರುಗಿತು.


ಈ ಕಾರ್ಯಕ್ರಮವನ್ನು ರಾಜ್ಯ ಸರಕಾರಿ ನೌಕರರ ಸಂಘ ದ. ಕ ಜಿಲ್ಲೆಯ ಅಧ್ಯಕ್ಷರಾದ ಶ್ರೀ ಹೆಚ್.ಗಣೇಶ್ ರಾವ್ ಇವರು ಉದ್ಘಾಟಿಸಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರ ಮುಂದಾಳತ್ವದಲ್ಲಿ ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಸಮಾಜದ ಜನರಿಗೆ ಆರೋಗ್ಯದ ದೃಷ್ಟಿಯಿಂದ ಜನರ ಕಾಳಜಿ ಮಾಡುತ್ತಿರುವುದು ಸಂಘದ ಉನ್ನತಿಗೆ ಮುಖ್ಯವಾದ ಕಾರಣ ಎಂದರು.
ಈ ಕಾರ್ಯಕ್ರಮದಲ್ಲಿ ದ ಕ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ (ರಿ). ಮಂಗಳೂರು ಇದರ ಅಧ್ಯಕ್ಷರು, ಹಾಗೂ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು. ಇದರ ನಿರ್ದೇಶಕರಾದ ಶ್ರೀ ಸೀತಾರಾಮ್ ಎನ್ ಮಾತನಾಡಿ ನಿವೃತ್ತರಿಗೆ ಆರೋಗ್ಯ ತಪಾಸಣಾ ಶಿಬಿರಗಳು ತುಂಬಾ ಅಗತ್ಯವಾಗಿರುತ್ತದೆ. ಇಂತಹ ವ್ಯವಸ್ಥಿತವಾದ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲು ನಮ್ಮೊಂದಿಗೆ ಸಹಕರಿಸಿದ ಆತ್ಮಶಕ್ತಿ ಸಹಕಾರಿ ಸಂಘದ ಸೇವೆಯು ಶ್ಲಾಘನೀಯ ವಾದುದು. ಆದ್ದರಿಂದ ಎಲ್ಲರೂ ಈ ಶಿಬಿರದ ಪ್ರಯೋಜನೆಯನ್ನು ಪಡೆದು ಶಿಬಿರವನ್ನು ಯಶಸ್ವಿಗೊಳಿಸಬೇಕಾಗಿ ಕೇಳಿಕೊಳ್ಳುತ್ತೇನೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳರ‍್ರವರು ಮಾತಾನಾಡಿ, ಸಂಘವು ಎಲ್ಲಾ ಶಾಖೆಗಳಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸುತ್ತಾ ಬಂದಿದೆ. ಈ ಬಾರಿಯ ವೈದ್ಯಕೀಯ ಶಿಬಿರಕ್ಕೆ ಸಹಕಾರ ನೀಡಿದ ದ.ಕ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ (ರಿ). ಮಂಗಳೂರು ಇವರಿಗೆ ಇದೇ ರೀತಿ ಸಹಕಾರವಿರಲಿ ಎಂದರು. ಹಾಗೆಯೇ ಇಂದಿನ ಈ ಶಿಬಿರವು ಎಲ್ಲರಿಗೂ ಉಪಯುಕ್ತವಾಗಲಿ ಎಂದು ಹೇಳಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕಳೆದ ೧೧ ರ‍್ಷಗಳಿಂದ ಸುಮಾರು 72ಕ್ಕೂ ಮಿಕ್ಕಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿ, ಶಿಬಿರರ‍್ಥಿಗಳಿಗೆ ಉಚಿತ ಔಷಧಿ ವಿತರಣೆ , ಉಚಿತ ಕನ್ನಡಕ ವಿತರಣೆ, ಅಗತ್ಯವುಳ್ಳವರಿಗೆ ಉಚಿತ ಕಣ್ಣಿನ ಪೊರೆಯ ಚಿಕಿತ್ಸೆಯನ್ನು ಸಹಭಾಗಿ ಆಸ್ಪತ್ರೆಗಳಲ್ಲಿ ನಡೆಸುತ್ತಾ ಬಂದಿರುತ್ತದೆ ಎಂದರು.
ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ. ನಿರ್ದೇಶಕರಾದ ಶ್ರೀ ಜಿ. ಪರಮೇಶ್ವರ ಪೂಜಾರಿ, ಶ್ರೀ ರಮನಾಥ್ ಸನಿಲ್, ಶ್ರೀ ಗೋಪಾಲ್ ಎಂ. ದ.ಕ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ (ರಿ). ಇದರ ಮಾಜಿ ಅಧ್ಯಕ್ಷರಾದ ಬಿ.ಎಂ ರಾಜ್ ಗೋಪಾಲ್, ಹಾಗೂ ಗೌರವಾಧ್ಯಕ್ಷರಾದ ಶ್ರೀ ಉಮೇಶ್ ಕುಮಾರ್, ಕಣಚೂರು ಮೆಡಿಕಲ್ ಕಾಲೇಜು, ಆಸ್ಪತ್ರೆಯ ಕಣ್ಣಿನ ತಜ್ಞರಾದ ಶ್ರೀಮತಿ ಆಶಾ , ಸರ‍್ವಜನಿಕ ಸಂರ‍್ಕ ಅಧಿಕಾರಿ ಶ್ರೀ ರಶೀದ್, ಮುಂತಾದವರು ಉಪಸ್ಧಿತರಿದ್ದರು.
ಕಾರ್ಯಕ್ರಮದಲ್ಲಿ ಸುಮಾರು 200ಕ್ಕೂ ಮಿಕ್ಕಿ ಶಿಬಿರರ‍್ಥಿಗಳು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಹಿರಿಯ ಶಾಖಾಧಿಕಾರಿ ಶ್ರೀಮತಿ ರವಿಕಲಾ ಇವರು ಸ್ವಾಗತಿಸಿ, ಶಾಖಾಧಿಕಾರಿ ಶ್ರೀಮತಿ ಚಿತ್ರಾವತಿ ವಂದಿಸಿದರು. ಕುಮಾರಿ ಸ್ವಾತಿ ರವರು ಕಾರ್ಯಕ್ರಮ ನಿರೂಪಿಸಿದರು. ಉಚಿತ ವೈದ್ಯಕೀಯ ತಪಾಸಣಾ ಶಿಬಿರದ ಸಂಯೋಜನೆಯನ್ನು ಶಾಖಾಧಿಕಾರಿ ಶ್ರೀಮತಿ ಅಕ್ಷತಾ ಕೆ. ನಡೆಸಿದರು.