ದ.ಕ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ (ರಿ). ಮಂಗಳೂರು ಮತ್ತು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇವರ ಜಂಟಿ ಸಹಯೋಗದೊಂದಿಗೆ ಕಣಚೂರು ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ನಾಟೆಕಲ್, ಮಂಗಳೂರು ಇವರ ವೈದ್ಯರ ತಂಡದವರಿಂದ ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ತಪಾಸಣಾ ಶಿಬಿರವು ರಾಜ್ಯ ಸರಕಾರಿ ನೌಕರರ ಸಂಘದ ಸಮುದಾಯ ಭವನ ಕಟ್ಟಡದ ಎರಡನೇ ಮಹಡಿಯಲ್ಲಿ ಜರುಗಿತು.

ಈ ಕರ‍್ಯಕ್ರಮವನ್ನು ರ‍್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ದ. ಕ ಜಿಲ್ಲೆಯ ಅಧ್ಯಕ್ಷರಾದ ಶ್ರೀ ಹೆಚ್.ಗಣೇಶ್ ರಾವ್ ಇವರು ಉದ್ಘಾಟಿಸಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರ ಮುಂದಾಳತ್ವದಲ್ಲಿ ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಸಮಾಜದ ಎಲ್ಲಾ ರ‍್ಗದ ಜನರಿಗೆ ಆರೋಗ್ಯದ ದೃಷ್ಟಿಯಿಂದ ಜನರ ಕಾಳಜಿ ಮಾಡುತ್ತಿರುವುದು ಸಂಘದ ಉನ್ನತಿಗೆ ಮುಖ್ಯವಾದ ಕಾರಣ ಎಂದರು. ಈ ಕರ‍್ಯಕ್ರಮದಲ್ಲಿ ದ ಕ ಜಿಲ್ಲಾ ನಿವೃತ್ತ ಸರಕಾರಿ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ (ನಿ.) ಮಂಗಳೂರು ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 170ನೇ ಜಯಂತಿಯ ಆಚರಣೆಯನ್ನು ಸಂಘದ ಪ್ರಧಾನ ಕಛೇರಿಯಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಧಾರ್ಮಿಕ ಚಿಂತಕ ಹಾಗೂ ಸಂಘದ ಹಿರಿಯ ಸದಸ್ಯರಾದ ಶ್ರೀ ಮಾಧವ ಸುವರ್ಣ ರವರು ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಸಿಬ್ಬಂದಿಗಳು ಭಜನಾ ಕಾರ್ಯಕ್ರಮವನ್ನು ಭಕ್ತಿಪೂರ್ವಕವಾಗಿ ನಡೆಸಿಕೊಟ್ಟರು. ಪುರೋಹಿತರಾದ ಶ್ರೀಯುತ ರಾಜೇಶ್ ಶಾಂತಿ ಇವರು ಗುರುಪೂಜೆ ನಡೆಸಿ, ನಂತರ ಪ್ರಸಾದ ವಿತರಣೆಯನ್ನು ನಡೆಸಿದರು. ಈ ಶುಭ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್, ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ , ನಿರ್ದೇಶಕರುಗಳಾದ ಶ್ರೀ ಜಿ. ಪರಮೇಶ್ವರ್ ಪೂಜಾರಿ, ಶ್ರೀ […]