
ಈ ಕರ‍್ಯಕ್ರಮವನ್ನು ರ‍್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ದ. ಕ ಜಿಲ್ಲೆಯ ಅಧ್ಯಕ್ಷರಾದ ಶ್ರೀ ಹೆಚ್.ಗಣೇಶ್ ರಾವ್ ಇವರು ಉದ್ಘಾಟಿಸಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರ ಮುಂದಾಳತ್ವದಲ್ಲಿ ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಸಮಾಜದ ಎಲ್ಲಾ ರ‍್ಗದ ಜನರಿಗೆ ಆರೋಗ್ಯದ ದೃಷ್ಟಿಯಿಂದ ಜನರ ಕಾಳಜಿ ಮಾಡುತ್ತಿರುವುದು ಸಂಘದ ಉನ್ನತಿಗೆ ಮುಖ್ಯವಾದ ಕಾರಣ ಎಂದರು.
ಈ ಕರ‍್ಯಕ್ರಮದಲ್ಲಿ ದ ಕ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ (ರಿ). ಮಂಗಳೂರು ಇದರ ಅಧ್ಯಕ್ಷರು, ಹಾಗೂ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು. ಇದರ ನರ‍್ದೇಶಕರಾದ ಶ್ರೀ ಸೀತಾರಾಮ್ ಎನ್ ಮಾತನಾಡಿ ನಿವೃತ್ತರಿಗೆ ಆರೋಗ್ಯ ತಪಾಸಣಾ ಶಿಬಿರಗಳು ತುಂಬಾ ಅಗತ್ಯವಾಗಿರುತ್ತದೆ. ಇಂತಹ ವ್ಯವಸ್ಥಿತವಾದ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲು ನಮ್ಮೊಂದಿಗೆ ಸಹಕರಿಸಿದ ಆತ್ಮಶಕ್ತಿ ಸಹಕಾರಿ ಸಂಘದ ಸೇವೆಯು ಶ್ಲಾಘನೀಯ ವಾದುದು. ಆದ್ದರಿಂದ ಎಲ್ಲರೂ ಈ ಶಿಬಿರದ ಪ್ರಯೋಜನೆಯನ್ನು ಪಡೆದು ಶಿಬಿರವನ್ನು ಯಶಸ್ವಿಗೊಳಿಸಬೇಕಾಗಿ ಕೇಳಿಕೊಳ್ಳುತ್ತೇನೆ ಎಂದರು.
ಕರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳರ‍್ರವರು ಮಾತಾನಾಡಿ, ಸಂಘವು ಎಲ್ಲಾ ಶಾಖೆಗಳಲ್ಲಿ ವರ‍್ಷಿಕೋತ್ಸವದ ಸಂರ‍್ಭದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸುತ್ತಾ ಬಂದಿದೆ. ಈ ಬಾರಿಯ ವೈದ್ಯಕೀಯ ಶಿಬಿರಕ್ಕೆ ಸಹಕಾರ ನೀಡಿದ ದ.ಕ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ (ರಿ). ಮಂಗಳೂರು ಇವರಿಗೆ ಧನ್ಯವಾದಗಳನ್ನು ರ‍್ಪಿಸುವುದರೊಂದಿಗೆ ಇನ್ನು ಮುಂದಿನ ದಿನಗಳಲ್ಲಿಯೂ ಇದೇ ರೀತಿ ಸಹಕಾರವಿರಲಿ ಎಂದರು. ಹಾಗೆಯೇ ಇಂದಿನ ಈ ಶಿಬಿರವು ಎಲ್ಲರಿಗೂ ಉಪಯುಕ್ತವಾಗಲಿ ಎಂದು ಹೇಳಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕಳೆದ ೧೧ ರ‍್ಷಗಳಿಂದ ಸುಮಾರು ೭೨ಕ್ಕೂ ಮಿಕ್ಕಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿ, ಶಿಬಿರರ‍್ಥಿಗಳಿಗೆ ಉಚಿತ ಔಷಧಿ ವಿತರಣೆ , ಉಚಿತ ಕನ್ನಡಕ ವಿತರಣೆ, ಅಗತ್ಯವುಳ್ಳವರಿಗೆ ಉಚಿತ ಕಣ್ಣಿನ ಪೊರೆಯ ಚಿಕಿತ್ಸೆಯನ್ನು ಸಹಭಾಗಿ ಆಸ್ಪತ್ರೆಗಳಲ್ಲಿ ನಡೆಸುತ್ತಾ ಬಂದಿರುತ್ತದೆ ಎಂದರು.
ಈ ಕರ‍್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ. ನರ‍್ದೇಶಕರಾದ ಶ್ರೀ ಜಿ. ಪರಮೇಶ್ವರ ಪೂಜಾರಿ, ಶ್ರೀ ರಮನಾಥ್ ಸನಿಲ್, ಶ್ರೀ ಗೋಪಾಲ್ ಎಂ. ದ.ಕ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ (ರಿ). ಇದರ ಮಾಜಿ ಅಧ್ಯಕ್ಷರಾದ ಬಿ.ಎಂ ರಾಜ್ ಗೋಪಾಲ್, ಹಾಗೂ ಗೌರವಾಧ್ಯಕ್ಷರಾದ ಶ್ರೀ ಉಮೇಶ್ ಕುಮಾರ್, ಕಣಚೂರು ಮೆಡಿಕಲ್ ಕಾಲೇಜು, ಆಸ್ಪತ್ರೆಯ ಕಣ್ಣಿನ ತಜ್ಞರಾದ ಶ್ರೀಮತಿ ಆಶಾ , ಸರ‍್ವಜನಿಕ ಸಂರ‍್ಕ ಅಧಿಕಾರಿ ಶ್ರೀ ರಶೀದ್, ಮುಂತಾದವರು ಉಪಸ್ಧಿತರಿದ್ದರು.
ಕರ‍್ಯಕ್ರಮದಲ್ಲಿ ಸುಮಾರು ೨೦೦ಕ್ಕೂ ಮಿಕ್ಕಿ ಶಿಬಿರರ‍್ಥಿಗಳು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಹಿರಿಯ ಶಾಖಾಧಿಕಾರಿ ಶ್ರೀಮತಿ ರವಿಕಲಾ ಇವರು ಸ್ವಾಗತಿಸಿ, ಶಾಖಾಧಿಕಾರಿ ಶ್ರೀಮತಿ ಚಿತ್ರಾವತಿ ವಂದಿಸಿದರು. ಕುಮಾರಿ ಸ್ವಾತಿ ರವರು ಕರ‍್ಯಕ್ರಮ ನಿರೂಪಿಸಿದರು. ಉಚಿತ ವೈದ್ಯಕೀಯ ತಪಾಸಣಾ ಶಿಬಿರದ ಸಂಯೋಜನೆಯನ್ನು ಶಾಖಾಧಿಕಾರಿ ಶ್ರೀಮತಿ ಅಕ್ಷತಾ ಕೆ. ನಡೆಸಿದರು.