ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಮಡಂತ್ಯಾರು ಶಾಖೆಯ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ (ರಿ) ಮಡವು ಮತ್ತು ಜೆಸಿಐ ಮಡಂತ್ಯಾರು ಇವರುಗಳ ಜಂಟಿ ಸಹಯೋಗದೊಂದಿಗೆ ಎ.ಜೆ ಮೆಡಿಕಲ್ ಸೈನ್ಸ್, ಮಂಗಳೂರು ಇವರ ನುರಿತ ತಜ್ಞ ವೈದ್ಯ ತಂಡದವರಿ0ದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರವು ಕಲಾ ಸಭಾಂಗಣ, ಶ್ರೀ ದುರ್ಗಾ ಕಾಂಪ್ಲೆಕ್ಸ್ ಮುಖ್ಯರಸ್ತೆ ಮಡಂತ್ಯಾರು ಇಲ್ಲಿ ಜರುಗಿತು.

ಈ ಕರ‍್ಯಕ್ರಮವನ್ನು ಮಡಂತ್ಯಾರು ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ಶ್ರೀಮತಿ ರೂಪಾ ನವೀನ್ ರವರು ಉದ್ಘಾಟಿಸಿ, ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಸಮಾಜದ ಎಲ್ಲಾ ಜನರಿಗೆ ಆರೋಗ್ಯದ ದೃಷ್ಟಿಯಿಂದ ಜನರ ಕಾಳಜಿ ಮಾಡುತ್ತಿರುವುದು ಸಂಘದ ಉನ್ನತಿಗೆ ಮುಖ್ಯವಾದ ಕಾರಣ ಎಂದರು.
ಈ ಕರ‍್ಯಕ್ರಮದ ಮುಖ್ಯ ಅಥಿತಿಯಾಗಿ ಆಗಮಿಸಿದ ಜೆ.ಸಿ.ಐ ಇದರ ಅಧ್ಯಕ್ಷರಾದ ಶ್ರೀಮತಿ ಅಮಿತಾ ಆಶೋಕ್ ರವರು ಮಾತನಾಡಿ, ಯಾವುದೇ ಸಹಕಾರಿ ಸಂಘವು ಆರೋಗ್ಯ ಶಿಬಿರವನ್ನು ಆಯೋಜಿಸುವುದಿಲ್ಲ, ಆದರೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಈ ನಿಟ್ಟಿನಲ್ಲಿ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಜನರ ಆರೋಗ್ಯದ ಕಾಳಜಿ ವಹಿಸುತ್ತಿರುವುದು ತುಂಬಾ ಶ್ಲಾಘನೀಯ ಎಂದರು.
ಈ ಕರ‍್ಯಕ್ರಮದ ಇನ್ನರ‍್ವ ಮುಖ್ಯ ಅಥಿತಿಯಾದ ಮಾಲಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ಶ್ರೀ ಪುನೀತ್ ರವರು ಮಾತನಾಡಿ ಸಮಾಜ ಏನು ಕೊಡುತ್ತದೆ ಎಂಬ ಈ ಕಾಲದಲ್ಲಿ ನಾವು ಸಮಾಜಕ್ಕೆ ಏನು ನೀಡಬೇಕು ಎಂಬುದನ್ನು ಆಲೋಚಿಸಿ ಸಾಮಾಜಿಕ ಕರ‍್ಯ ನಡೆಸುತ್ತಿರುವ ಈ ಸಂಸ್ಥೆಯು ಇನ್ನಷ್ಟೂ ಅಭಿವ್ರೃದ್ದಿಯಾಗಲಿ ಎಂದು ಶುಭ ಹಾರೈಸಿದರು.
ಈ ಕರ‍್ಯಕ್ರಮದ ಇನ್ನರ‍್ವ ಅಥಿತಿಯಾದ ಸ್ಥಳೀಯ ಜುಮ್ಮಾ ಮಸೀದಿಯ ಅಧ್ಯಕ್ಷರಾದ ಶ್ರೀ ಶೇಕ್ ಅಬ್ದುಲ್ ಸಾಹೆಬ್ ಇವರು ಮಾತನಾಡಿ, ಮನುಷ್ಯರಿಗೆ ಆರೋಗ್ಯವೇ ಭಾಗ್ಯ, ಎಲ್ಲಾ ರೀತಿಯ ಸಾಧನೆಗೆ ಆರೋಗ್ಯವು ಮುಖ್ಯವಾದದ್ದು. ರೋಗದ ಸೂಚನೆ ಬಂದಾಗಲೇ ಸೂಕ್ತ ಚಿಕಿತ್ಸೆ ಪಡೆಯುವುದು ಮುಖ್ಯವೆಂದು ತಿಳಿಸಿದರು.
ಕರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರು ಮಾತಾನಾಡಿ, ಇತ್ತೀಚಿನ ದಿನಗಳಲ್ಲಿ ಬದಲಾದ ಆಹಾರ ಪದ್ದತಿಯಿಂದಾಗಿ ಯುವಕ ಯುವತಿಯರು ಮಾರಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಆದುದರಿಂದ ಆರೋಗ್ಯ ತಪಾಸಣೆಯನ್ನು ಮಾಡುವುದು ಉತ್ತಮ. ಹಣವನ್ನು ಯಾವಾಗ ಬೇಕಾದರೂ ಸಂಪಾದಿಸಬಹುದು ಆದರೆ ಆರೋಗ್ಯವನ್ನು ಸಂಪಾದಿಸಿಲು ಸಾಧ್ಯವಿಲ್ಲ , ಜನರು ತಮ್ಮ ಆರೋಗ್ಯ ಕಡೆಗೆ ಗಮನವನ್ನು ಹರಿಸಬೇಕೆಂದು ತಿಳಿಸಿದರು.
ಈ ಕರ‍್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನರ‍್ದೇಶಕರಾದ ಶ್ರೀ ಗೋಪಾಲ್ ಎಂ, ಮುಖ್ಯಕರ‍್ಯನರ‍್ವಾಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಎ.ಜೆ ಇನ್ಸ್÷್ಟಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ನ ಸಾಮಾನ್ಯ ವೈದ್ಯಕೀಯ ವಿಭಾಗದ ಡಾ. ರಾಹುಲ್, ಸಂಜೀವಿನಿ ಸೇವಾ ಟ್ರಸ್ಟ್ (ರಿ.) ಮಡವು ಇದರ ಅಧ್ಯಕ್ಷರಾದ ಶ್ರೀ ಸಚಿನ್ ಕೊಡ್ಲಕ್ಕೆ, ಮಡಂತ್ಯಾರು ಪಂಚಾಯತ್ ಸದಸ್ಯರಾದ ಶ್ರೀ ವಿಶ್ವನಾಥ್ ಪೂಜಾರಿ ಮತ್ತಿತರರು ಉಪಸ್ಧಿತರಿದ್ದರು.
ಕರ‍್ಯಕ್ರಮದಲ್ಲಿ ಸುಮಾರು 250ಕ್ಕೂ ಮಿಕ್ಕಿ ಶಿಬಿರರ‍್ಥಿಗಳಿಗೆ ಆರೋಗ್ಯ ತಪಾಸಣೆ ಹಾಗೂ ದಂತ ಚಿಕಿತ್ಸೆ, ಕಣ್ಣಿನ ತಪಾಸಣೆ ಮತ್ತು ಇ.ಸಿ.ಜಿ ತಪಾಸಣೆ ಮಾಡಲಾಯಿತು..
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಹಿರಿಯ ಶಾಖಾಧಿಕಾರಿ ಶ್ರೀಮತಿ ರವಿಕಲಾ ಇವರು ಸ್ವಾಗತಿಸಿ, ಕುಮಾರಿ ಪ್ರಜ್ನಾ ವಂದಿಸಿದರು. ಕುಮಾರಿ ಕಾವ್ಯ ರವರು ಕರ‍್ಯಕ್ರಮ ನಿರೂಪಿಸಿದರು.