ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡೀಲ್ ಮಂಗಳೂರು ಇದರ ಬೆಂದೂರ್‌ವೆಲ್ ಶಾಖೆಯ ಹದಿಮೂರನೇ ವಾರ್ಷಿಕೋತ್ಸವ ಪ್ರಯುಕ್ತ ಜಪ್ಪಿನಮೊಗರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಹಾಗೂ ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು , ಇವರುಗಳ ಜಂಟಿ ಸಹಯೋಗದೊಂದಿಗೆ ಬೋಳೂರು ಮಾತಾ ಅಮೃತಾನಂದಮಯಿ ಮಠ, ಸಮುದಾಯ ದಂತ ಆರೋಗ್ಯ ವಿಭಾಗ , ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಜ್ಜೋಡಿ ಮಂಗಳೂರು, ಇವರುಗಳ ನುರಿತ ತಜ್ಞ ವೈದ್ಯ ತಂಡದವರಿ0ದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರವು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ, ಜಪ್ಪಿನಮೊಗರು, ಇಲ್ಲಿ ಜರುಗಿತು.


ಈ ಕಾರ್ಯಕ್ರಮವನ್ನು ಉದ್ಯಮಿ ಶ್ರೀ ಲಕ್ಷಿ÷್ಮÃನಾರಾಯಣ ರವರು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಲಯನ್ಸ್ ಕ್ಲಬ್, ಎಂಜೆಎಫ್ ಅಧ್ಯಕ್ಷರಾದ ಶ್ರೀ ಲಯನ್ ಜಯರಾಜ್ ಪ್ರಕಾಶ್ ರವರು ಮಾತನಾಡಿ “ಇಂದಿನ ಜನರ ಜೀವನ ಶೈಲಿಯು ಜನರ ಆರೋಗ್ಯದಲ್ಲಿ ಪರಿಣಾಮ ಬೀರುತ್ತದೆ, ಇಂತಹ ಶಿಬಿರದಿಂದ ಜನರು ತಮ್ಮ ಆರೋಗ್ಯದ ತಪಾಸಣೆ ಮಾಡಿಸುವುದು ಉತ್ತಮ” ಎಂದರು.
ಯೆನೆಪೋಯ ದಂತಾ ವಿಭಾಗದ ಮುಖ್ಯಸ್ಥರಾದ ಡಾ|| ರೇಖಾ ಪಿ. ಶೆಣೈ ರವರು ಮಾತನಾಡಿ “ಕಾಯಿಲೆಗಳನ್ನು ಗುಣಪಡಿಸುವುದಕ್ಕಿಂತ ಮೊದಲು ಕಾಯಿಲೆ ಬಾರದ ಹಾಗೆ ತಡೆಗಟ್ಟುವುದು ಅಗತ್ಯ” ಎಂದರು.
ಮಾತಾ ಅಮೃತಾನಂದಮಯಿ ಮಠದ ವೈದ್ಯರಾದ ಡಾ|| ಸುಚಿತ್ರ ಸೊರಕೆ ಯವರು ಮಾತನಾಡಿ “ಇಂದಿನ ದಿನಗಳಲ್ಲಿ ಅಧಿಕವಾಗುತ್ತಿರುವ ಹೃದ್ರೋಗ ಸಮಸ್ಯೆಗಳಿಗೆ ಹಲವಾರು ಚಿಕೆತ್ಸೆಗಳು ಬಂದಿದ್ದು, ಇದರ ಪ್ರಯೋಜನ ಪಡೆಯಿರಿ” ಎಂದರು.
ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಶ್ರೀಮತಿ ವೀಣಾ ಮಂಗಳಾ ರವರು ಮಾತಾನಾಡಿ “ಆರೋಗ್ಯವೇ ಭಾಗ್ಯ , ಮನುಷ್ಯನಲ್ಲಿ ಆಸ್ತಿ-ಸಂಪತ್ತು ಎಷ್ಟೇ ಇದ್ದರೂ ಜೀವವನ್ನು ಉಳಿಸಲು ಸಾಧ್ಯವಿಲ್ಲ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿAಗ್ ವ್ಯವಹಾರದ ಜೊತೆಗೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಸಮಾಜದ ಎಲ್ಲಾ ಜನರ ಆರೋಗ್ಯದ ಕಾಳಜಿಗಾಗಿ ಇಂತಹ ಶಿಬಿರವನ್ನು ಆಯೋಜಿಸಿರುವುದು ಶ್ಲಾಘನೀಯ” ಎಂದರು.
ಪ್ರಸಾದ್ ನೇತಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ವೈದ್ಯರಾದ ಡಾ|| ವಿಶ್ವಾಸ್ ರವರು ಮಾತನಾಡಿ “ದುಡಿಯುವ ಜನರು ಆರೋಗ್ಯದಿಂದ ಇರಬೇಕು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸಿರುವುದು ಪುಣ್ಯದ ಕೆಲಸ. ಇದರಿಂದ ಜನ ಸೇವೆಯೇ ಜನಾರ್ದನ ಸೇವೆ ಅನ್ನುವುದಕ್ಕೆ ಅರ್ಥ ಬರುತ್ತದೆ.” ಎಂದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ವರ್ಧಂತಿ ಉತ್ಸವದ ಪ್ರಯುಕ್ತ ಆಯೋಜಿಸಿರುವ ಆರೋಗ್ಯ ಶಿಬಿರ ಇದಾಗಿದ್ದು, ನಮ್ಮ ಸಂಘದ ಪ್ರತಿ ಶಾಖೆಗಳ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ ಶಿಬಿರ ಆಯೋಜಿಸುತಿದ್ದು ಇದು ೮೦ನೇ ಆರೋಗ್ಯ ಶಿಬಿರವಾಗಿದೆ. ಹಲವಾರು ಸಂಘ ಸಂಸ್ಥೆ ಸಹಯೋಗದೊಂದಿಗೆ ಭಾನುವಾರ ಬಿಡುವಿನ ಸಮಯದಲ್ಲಿ ಈ ಶಿಬಿರ ಆಯೋಜಿಸುತ್ತಿರುವುದರಿಂದ ತುಂಬಾ ಜನರಿಗೆ ಇದರ ಪ್ರಯೋಜನವನ್ನು ಪಡೆಯಲು ಸಹಕಾರಿಯಾಗಿದೆ. ಈ ಶಿಬಿರಗಳನ್ನು ಆಯೋಜಿಸಲು ಸಹಕರಿಸಿರುವ ಬೋಳೂರು ಮಾತಾ ಅಮೃತಾನಂದಮಯಿ ಮಠï, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ವೈದ್ಯರು ಹಾಗೂ ಅಧಿಕಾರಿ ವರ್ಗದವರಿಗೆ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಹಾಗೂ ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಇದರ ಸರ್ವ ಪದಾಧಿಕಾರಿಗಳಿಗೆ ಸಂಘದ ವತಿಯಿಂದ ಕ್ರತಜ್ನತೆಯನ್ನು ಸಲ್ಲಿಸಿದರು.
ಈ ಕಾರ್ಯಕ್ರಮದ ಅತಿಥಿಯಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ದಿನೇಶ್ ಅಂಚನ್ ಇವರು ಮಾತನಾಡಿ “ಆರೋಗ್ಯವೇ ಭಾಗ್ಯ, ಎಲ್ಲಾ ರೀತಿಯ ಆರೋಗ್ಯದ ಸಮಸ್ಯೆಗೆ ಶಿಬಿರದ ಮೂಲಕ ಚಿಕಿತ್ಸೆಯನ್ನು ಪಡೆದುಕೊಳ್ಳಲು ಸಾಧ್ಯವಿದೆ ಇದರ ಪ್ರಯೋಜನವನ್ನು ಎಲ್ಲರೂ ಪಡೆಯಿರಿ” ಎಂದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷರಾದ ಶ್ರೀ ನಾಗರಾಜ್ ಬಿ. ವಿ. ರವರು ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ, ನಿರ್ದೇಶಕರಾದ ಶ್ರೀ ಗೋಪಾಲ್ ಎಂ, ಶ್ರೀಮತಿ ಉಮಾವತಿ , ಮುಖ್ಯಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ , ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಸುಮತಿ ಚಂದ್ರಶೇಖರ್, ಮಂದಿರರಾದ ಅರ್ಚಕರಾದ ಶ್ರಿ ಮನೋಜ್ ಪೂಜಾರಿ, ಆರೋಗ್ಯ ಸಂಚಾಲಕರಾದ ಶ್ರೀ ಹರೀಶ್ ಸನಿಲ್, ಲಯನ್ ಶ್ರೀ ರವಿಶಂಕರ್ ರೈ , ಡಾ|| ಅಶೋಕ್ ಶೆಣೈ , ಲಯನ್ ಶ್ರೀ ಸೀನಾ ಪೂಜಾರಿ ಹಾಗೂ ಮತ್ತಿತರರು ಉಪಸ್ಧಿತರಿದ್ದರು.
ಕಾರ್ಯಕ್ರಮದಲ್ಲಿ ಸುಮಾರು 150ಕ್ಕೂ ಮಿಕ್ಕಿ ಶಿಬಿರಾರ್ಥಿಗಳಿಗೆ ಆರೋಗ್ಯ ತಪಾಸಣೆ ಹಾಗೂ ದಂತ ಚಿಕಿತ್ಸೆ, ಕಣ್ಣಿನ ತಪಾಸಣೆ ಮಾಡಲಾಯಿತು..
ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಕಾರ್ಯದರ್ಶಿ ಶ್ರೀ ಅಶೋಕ್ ತಂದೊಳಿಗೆ ಸ್ವಾಗತಿಸಿ, ಕೋಶಾಧಿಕಾರಿ ಶ್ರೀ ಚಿತ್ರಾಕ್ಷ ಪೂಜಾರಿ ವಂದಿಸಿದರು. ಶ್ರೀ ಚಂದ್ರಹಾಸ್ ಕಟ್ಟಪುಣಿ ರವರು ಕಾರ್ಯಕ್ರಮವನ್ನು ನಿರೂಪಿಸಿದರು.