
ಈ ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಹಕಾರ ಸಚಿವರಾದ ಶ್ರೀ ಕೆ. ಎನ್. ರಾಜಣ್ಣ , ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಇದರ ಅಧ್ಯಕ್ಷರಾದ ಶ್ರೀ ಜಿ.ಟಿ. ದೇವೇಗೌಡರು ಹಾಗೂ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಮ್.ಎನ್. ರಾಜೇಂದ್ರ ಕುಮಾರ್ ರವರ ಗೌರವ ಉಪಸ್ಥಿತಿಯಲ್ಲಿ, ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕರಾದ ಶ್ರೀ ಲಕ್ಷ್ಮಣ ಸಂಗಪ್ಪ ಸವದಿ ಯವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗೆ ೨೦೨೪ ನೇ ಸಾಲಿನ “ಉತ್ತಮ ವಿವಿಧೋದ್ದೇಶ ಸಹಕಾರಿ ಸಂಘ” ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರಿಗೆ ನೀಡಿ ಗೌರವಿಸಿದರು.
ಈ ಸಮಾರಂಭದ ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನಸಭೆಯ ಮಾನ್ಯ ಸಭಾಧ್ಯಕ್ಷರು ಶ್ರೀ ಯು.ಟಿ ಖಾದರ್ ಪರೀದ್ , ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್, ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬೃಜೇಶ್ ಚೌಟ, ,ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಭರತ್ ಶೆಟ್ಟಿ ವೈ. ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ಪಾಲ್ ಎ. ಸುವರ್ಣ, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಶ್ರೀ ಮನೋಜ್ ಕುಮಾರ್, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಕೆ.ಪಿ. ಸುಚರಿತ ಶೆಟ್ಟಿ, ಮುಡಾ ಅಧ್ಯಕ್ಷರಾದ ಶ್ರೀ ಸದಾಶಿವ ಉಳ್ಳಾಲ್, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶ್ರೀ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶ್ರೀ ಬಿ.ಜಯಕರ ಶೆಟ್ಟಿ ಇಂದ್ರಾಳಿ, ಎಸ್ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರದ ಶ್ರೀ ವಿನಯ್ ಕುಮಾರ್ ಸೂರಿಂಜೆ, ಸಹಕಾರ ಸಂಘಗಳ ಅಪರ ಉಪನಿಬಂಧಕರಾದ ಶ್ರೀ ಕೆ.ಎಸ್. ನವೀನ್, ಶ್ರೀ ಎಚ್. ಬಾಲಶೇಖರ್, ಸಹಕಾರ ಮಾರಾಟ ಮಹಾ ಮಂಡಲದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಗುರುಸ್ವಾಮಿ, ಮೈಸೂರು ಪ್ರಾಂತ ಸಹಕಾರ ಸಂಘಗಳ ಜಂಟಿ ನಿಬಂಧಕರಾದ ಶ್ರೀ ಪ್ರಸಾದ್ ರೆಡ್ಡಿ ಪಿ., ದ.ಕ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀ ರಮೇಶ್ ಎಚ್.ಎನ್., ಉಡುಪಿ ಸಹಕಾರ ಸಂಘಗಳ ಉಪನಿಬಂಧಕಿಯಾದ ಲಾವಣ್ಯಾ ಕೆ . ಆರ್. ಎಸ್ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಭಾಸ್ಕರ್ ಎಸ್. ಕೋಟ್ಯಾನ್, ಶಶಿಕುಮಾರ್ ರೈ ಬಾಲ್ಯೂಟ್ಟು, ಶ್ರೀ ರಾಜು ಪೂಜಾರಿ, ಶ್ರೀ ಮಹೇಶ್ ಹೆಗ್ಡೆ, ಶ್ರೀ ಅಶೋಕ್ ಕುಮಾರ್ ಶೆಟ್ಟಿ, ಶ್ರೀ ಎಸ್. ಬಿ. ಜಯರಾಮ ರೈ, ಶ್ರೀ ಮೋನಪ್ಪ ಶೆಟ್ಟಿ ಎಕ್ಕಾರು, ಶ್ರೀ ಕೆ. ಹರಿಶ್ಚಂದ್ರ, ಶ್ರೀ ಕೆ.ಜೈರಾಜ್ ಬಿ.ರೈ, ಶ್ರೀ ರಾಜೇಶ್ ರಾವ್, ಶ್ರೀ ಎಸ್.ಎನ್.ಮನ್ಮಥ, ಸಿಇಒ ಕೆ. ಗೋಪಾಲಕೃಷ್ಣ ಭಟ್ ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ. ನಿರ್ದೇಶಕರಾದ ಶ್ರೀ ಜಿ. ಪರಮೇಶ್ವರ ಪೂಜಾರಿ, ಶ್ರೀ ಆನಂದ ಎಸ್. ಕೊಂಡಾಣ, ಶ್ರೀ ರಮಾನಾಥ್ ಸನಿಲ್, ಶ್ರೀ ಗೋಪಾಲ್ ಎಮ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಹಾಗೂ ಸಲಹೆಗಾರ ಶ್ರೀ ಅಶೋಕ್ ಕುಮಾರ್ ರವರು ಉಪಸ್ಥಿತರಿದ್ದರು.