ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಇದರ ಮಾಡೂರು ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಶಿರಡಿ ಸಾಯಿಬಾಬಾ ಮಂದಿರ (ರಿ.) ಮಾಡೂರು ಹಾಗೂ ಶ್ರೀ ವನದುರ್ಗಾ ಅಯ್ಯಪ್ಪ ಭಜನಾ ಮಂದಿರ (ರಿ.) ಇವರ ಜಂಟಿ ಸಹಯೋಗದೊಂದಿಗೆ ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಇವರ ನುರಿತ ತಜ್ಞ ವೈದ್ಯ ತಂಡದವರಿ0ದ ಉಚಿತ ದಂತ ತಪಾಸಣೆ ಮತ್ತು ಎ.ಜೆ. ಇನ್‌ಸ್ಟಿಟ್ಯೂಟ್ ಮತ್ತು ಮೆಡಿಕಲ್ ಸೈನ್ಸ್, ಮಂಗಳೂರು ಇವರ ನುರಿತ ತಜ್ಞ ವೈದ್ಯರ ತಂಡದವರಿ0ದ ಉಚಿತ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರವು ಮಾತೃಶ್ರೀ ಕಾಂಪ್ಲೆಕ್ಸ್, ಮಾಡೂರು ಶಾಖೆಯ ಆವರಣದಲ್ಲಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಜರುಗಿತು.


ಈ ಕಾರ್ಯಕ್ರಮವನ್ನು ಶ್ರೀ ವನದುರ್ಗಾ ಅಯ್ಯಪ್ಪ ಭಜನಾ ಮಂದಿರ (ರಿ.) ಇಲ್ಲಿಯ ಗುರುಸ್ವಾಮಿಯಾದ ಶ್ರೀ ಭಾಸ್ಕರ್ ರವರು ಉದ್ಘಾಟಿಸಿದರು.
ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಇಲ್ಲಿನ ವೈದ್ಯರಾದ ಡಾ| ಪ್ರಮಾದ ಪ್ರಭಾಕರ್ ಮಾತನಾಡಿ “ಸಮಾಜದ ಎಲ್ಲಾ ಜನರು ಉದ್ಯೋಗದ ಜೊತೆ ತಮ್ಮ ಆರೋಗ್ಯದ ಕಾಳಜಿಯನ್ನು ನೋಡಿಕೊಳ್ಳಬೇಕು. ಈ ಶಿಬಿರದಲ್ಲಿ ದಂತ ತಪಾಸಣೆ, ಹುಳುಕು ಹಲ್ಲುಗಳ ಭರ್ತಿ, ಶುಚಿಗೊಳಿಸುವುದು, ಕೀಳುವುದು ಮತ್ತು ಹಲ್ಲುಗಳ ತಪಾಸಣೆ ಮಾಡಿಸಿ, ಅಗತ್ಯವಿದ್ದಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಯ ಹಸಿರು ಕಾರ್ಡನ್ನು ವಿತರಿಸಲಾಗುವುದು. ಶಿಬಿರಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ. ಇವರು ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ನಿರಂತರವಾಗಿ ಸಾಮಾಜಿಕ ಕಳಕಳಿ ದೃಷ್ಠಿಯಿಂದ ಶಾಖೆಯ ವಾರ್ಷಿಕೋತ್ಸವದ ಸಂದರ್ಭದಲ್ಲಿ ವೈದ್ಯಕೀಯ ಶಿಬಿರವನ್ನು ಮಾಡೂರು ಶಾಖೆಯ ಆವರಣದಲ್ಲಿ ನಡೆಸಿಕೊಂಡು ಬರುತ್ತಿದೆ. ಹಲ್ಲುಗಳ ಸುರಕ್ಷತೆಯ ಬಗ್ಗೆ ಜಾಗ್ರತೆ ವಹಿಸಿ ಚಿಕಿತ್ಸೆ ಪಡೆಯಬೇಕು. ಶಿಬಿರಾರ್ಥಿಗಳು ಈ ಶಿಬಿರದ ಸದುಪಯೋಗವನ್ನು ಪಡೆಯಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕಳೆದ 13 ವರ್ಷಗಳಿಂದ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ವೈದ್ಯಕೀಯ ಶಿಬಿರವನ್ನು ನಿರಂತರ ಏರ್ಪಡಿಸುತ್ತಿದ್ದು, ವಿವಿಧ ಸಂಘ-ಸ0ಸ್ಥೆಗಳ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ಶಿಬಿರಗಳನ್ನು ಏರ್ಪಡಿಸಿಕೊಂಡು ಬರುತ್ತಾ ಇದ್ದೇವೆ. ಈ ವರ್ಷವು ಪರಿಸರದ ಜನರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಈ ಶಿಬಿರವನ್ನು ಆಯೋಜಿಸಲಾಗಿದ್ದು, ಎಲ್ಲಾ ಜನರು ಇದರ ಸದುಪಯೋಗವನ್ನು ಪಡೆದುಕೊಂಡು ಆರೋಗ್ಯಕರ ಸಮಾಜವನ್ನು ರೂಪಿಸುವಲ್ಲಿ ನಮ್ಮೊಂದಿಗೆ ಕೈ ಜೋಡಿಸಬೇಕು, ಸಂಘದ 82ನೇ ಉಚಿತ ವೈದ್ಯಕೀ ಶಿಬಿರವು ಇದಾಗಿದ್ದು, ಮುಂದಿನ ಮೇ ತಿಂಗಳಲ್ಲಿ ತೊಕ್ಕೊಟ್ಟು ಹಾಗೂ ಉಳ್ಳಾಲದ ಪರಿಸರದಲ್ಲಿ ಶಿಬಿರವನ್ನು ಆಯೋಜಿಸಲಾಗುವುದೆಂದು ತಿಳಿಸಿದರು. ಸಂಘದಲ್ಲಿ ಈಗಾಗಲೇ ಸಂಘದ ಸದಸ್ಯರಿಗೆ ಹಬ್ಬದ ಕೊಡುಗೆಯಾಗಿ 1000 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 10.50 ವನ್ನು ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. 7788/- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲ ನೀಡಲಾಗುತ್ತಿದೆ. ಸಂಘದಲ್ಲಿ ಲಭ್ಯವಿರುವ ಇ-ಸ್ಟಾಂಪಿ0ಗ್ ಸೇವೆ, ವಿಮಾ ಸೇವೆ, ಭವಿಷ್ಯ ಸುರಕ್ಷಾ ಯೋಜನೆಯ ಜೊತೆಗೆ ಎಲ್ಲಾ ಸೇವೆಗಳನ್ನು ಸದುಪಯೋಗ ಮಾಡಿಕೊಳ್ಳುವಂತೆ ಗ್ರಾಹಕರಲ್ಲಿ ವಿನಂತಿಸಿದರು.
ಈ ಕಾರ್ಯಕ್ರಮದಲ್ಲಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಸೌಮ್ಯ ವಿಜಯ್, ಶ್ರೀ ಶಿರಡಿ ಸಾಯಿಬಾಬಾ ಮಂದಿರದ ಅಧ್ಯಕ್ಷರಾದ ಶ್ರೀ ನವೀನ್ ಕಂಬ್ಲಕೋಡಿ, ಎ.ಜೆ. ಇನ್‌ಸ್ಟಿಟ್ಯೂಟ್ ಮತ್ತು ಮೆಡಿಕಲ್ ಸೈನ್ಸ್, ಮಂಗಳೂರು ಇಲ್ಲಿನ ವೈದ್ಯರಾದ ಶ್ರೀ ಡಾ| ಆಶೀಷ್, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಇದರ ಪಿ.ಆರ್.ಓ ಆದ ಶ್ರೀ ಭರತ್ ಕುಮಾರ್ ಮತ್ತಿತ್ತರರು ಉಪಸ್ಥಿತರಿದ್ದರು.

ಈ ಶಿಬಿರದಲ್ಲಿ ಸುಮಾರು ೧೫೦ ಕ್ಕೂ ಮಿಕ್ಕಿ ಶಿಬಿರಾರ್ಥಿಗಳು ವೈದ್ಯಕೀಯ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.

ಸAಘದ ಹಿರಿಯ ಶಾಖಾಧಿಕಾರಿಯಾದ ಶ್ರೀಮತಿ ರವಿಕಲಾ ವಿಶ್ವನಾಥ್ ಸ್ವಾಗತಿಸಿ, ಹಿರಿಯ ಶಾಖಾಧಿಕಾರಿಯಾದ ಶ್ರೀಮತಿ ಸೌಮ್ಯಲತಾ ರವರು ವಂದಿಸಿದರು. ಮಾಡೂರು ಶಾಖೆಯ ಪ್ರಭಾರ ಶಾಖಾಧಿಕಾರಿ ಶ್ರೀಮತಿ ಭವ್ಯ ರವರು ಕಾರ್ಯಕ್ರಮ ನಿರೂಪಿಸಿದರು.