ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ತೊಕ್ಕೊಟ್ಟು ಶಾಖೆಯ ವತಿಯಿಂದ ಶ್ರೀ ಜೈ ವೀರಮಾರುತಿ ವ್ಯಾಯಾಮ ಶಾಲೆ ಟ್ರಸ್ಟ್ (ರಿ.), ಭಟ್ನಗರ ತೊಕ್ಕೊಟ್ಟು ಇವರ ಅಮೃತ ಮಹೋತ್ಸವದ ಪ್ರಯುಕ್ತ ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಇವರ ನುರಿತ ತಜ್ಞ ವೈದ್ಯ ತಂಡದವರಿ0ದ ಉಚಿತ ದಂತ ತಪಾಸಣೆ ಮತ್ತು ಎ.ಜೆ. ಇನ್‌ಸ್ಟಿಟ್ಯೂಟ್ ಮತ್ತು ಮೆಡಿಕಲ್ ಸೈನ್ಸ್, ಮಂಗಳೂರು ಇವರ ನುರಿತ ತಜ್ಞ ವೈದ್ಯರ ತಂಡದವರಿ0ದ ಉಚಿತ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರವು ಶ್ರೀ ಜೈ ವೀರಮಾರುತಿ ವ್ಯಾಯಾಮ ಶಾಲೆ ಟ್ರಸ್ಟ್ (ರಿ.), ಭಟ್ನಗರ ತೊಕ್ಕೊಟ್ಟು ಇದರ ಆವರಣದಲ್ಲಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷ÷್ಯತೆಯಲ್ಲಿ ಜರುಗಿತು.


ಈ ಕಾರ್ಯಕ್ರಮವನ್ನು ಶ್ರೀ ಜೈ ವೀರಮಾರುತಿ ವ್ಯಾಯಾಮ ಶಾಲೆ ಟ್ರಸ್ಟ್ (ರಿ.) ಇದರ ಮುಖ್ಯ ಶಿಕ್ಷಕರಾದ ಶ್ರೀ ಜಯಾನಂದ ಅಂಚನ್‌ರವರು ಉದ್ಘಾಟಿಸಿದರು.

ಶ್ರೀ ಜೈ ವೀರಮಾರುತಿ ವ್ಯಾಯಾಮ ಶಾಲೆ ಟ್ರಸ್ಟ್ (ರಿ.) ಇದರ ಅಧ್ಯಕ್ಷರಾದ ಶ್ರೀ ಪುರುಷೋತ್ತಮ ಗಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ಟ್ರಸ್ಟ್ನ ಅಮೃತ ಮಹೋತ್ಸವದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಇದರ ಅಂಗವಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಇದರ ಸಹಯೋಗದೊದಿಗೆ ಇಂತಹ ಅಚ್ಚುಕಟ್ಟಾದ ಉಚಿತ ವೈದ್ಯಕೀಯ ಶಿಬಿರವನ್ನು ನಡೆಸುತ್ತಿದ್ದೇವೆ. ಇದಕ್ಕೆ ಸಹಕಾರ ನೀಡಿದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಹಾಗೂ ಎಲ್ಲಾ ಆಡಳಿತ ಮಂಡಳಿಗೆ ಕೃತಜ್ಞತೆಯನ್ನು ಸಲ್ಲಿಸಿದರು.

ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳ ಕಟ್ಟೆ ಇಲ್ಲಿನ ವೈದ್ಯರಾದ ಡಾ| ಶ್ರೀಮತಿ ರೇಖಾ ಪಿ ಶೆಣೈ ರವರು ಮಾತನಾಡಿ ಸಮಾಜದ ಎಲ್ಲಾ ಜನರು ಉದ್ಯೋಗದ ಜೊತೆಗೆ ತಮ್ಮ ಆರೋಗ್ಯದ ಕಾಳಜಿಯನ್ನು ನೋಡಿಕೊಳ್ಳಬೇಕು ಮತ್ತು ಈ ಶಿಬಿರದಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಯ ಹಸಿರು ಕಾರ್ಡನ್ನು ವಿತರಿಸುತ್ತಿದ್ದು ಶಿಬಿರಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಸಾಮಾಜಿಕ ಕಾರ್ಯಕರ್ತರಾದ ಶ್ರೀ ಸುಂದರ ಉಳ್ಳಾಲ ಇವರು ಮಾತನಾಡಿ ಬ್ಯಾಂಕಿAಗ್ ಸೇವೆಯ ಜೊತೆಗೆ ಇಂತಹ ವೈದ್ಯಕೀಯ ಶಿಬಿರವನ್ನು ಆಯೋಜಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಾಮಾಜಿಕ ಕಳಕಳಿಯು ಶ್ಲಾಘನೀಯವೆಂದರು.

ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರು ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕಳೆದ ೧೩ ವರ್ಷಗಳಿಂದ ಉಚಿತ ವೈದ್ಯಕೀಯ ಶಿಬಿರವನ್ನು ಏರ್ಪಡಿಸುತ್ತಿದ್ದು, ಸಂಘದ ಸದಸ್ಯರು ಹಾಗೂ ಸಾರ್ವಜನಿಕರು ಇದರ ಸಂಪೂರ್ಣ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಸಂಘದ 84ನೇ ಉಚಿತ ವೈದ್ಯಕೀಯ ಶಿಬಿರವು ಇದಾಗಿದ್ದು ದಿನಾಂಕ 15/06/2025 ರಂದು ಉಳ್ಳಾಲದ ಪರಿಸರದಲ್ಲಿ ಉಚಿತ ವೈದ್ಯಕೀಯ ಶಿಬಿರವನ್ನು ಆರೋಜಿಸಲಾಗುವುದೆಂದು ತಿಳಿಸಿದರು.
ಸಂಘವು ಬ್ಯಾಕಿಂಗ್ ವ್ಯವಹಾರದ ಜೊತೆಗೆ ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ತನ್ನ ಸೇವೆಗಳಿಗೆ ಹಲವಾರು ಪ್ರಶ್ರಸ್ತಿಗಳನ್ನು ಪಡೆದಿರುತ್ತದೆ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯರ‍್ಥಿಗಳ ವಿದ್ಯಾಭ್ಯಾಸಕ್ಕೆ ಧನ ಸಹಾಯ ನೀಡುತ್ತಾ ಬರುತ್ತಿದೆ. ಈ ಶಿಬಿರವನ್ನು ಆಯೋಜಿಸಲು ಸಹಕಾರ ನೀಡಿದ ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳ ಕಟ್ಟೆ ಹಾಗೂ ಎ.ಜೆ. ಇನ್‌ಸ್ಟಿಟ್ಯೂಟ್ ಮತ್ತು ಮೆಡಿಕಲ್ ಸೈನ್ಸ್, ಮಂಗಳೂರು ಇವರಿಗೆ ಧನ್ಯವಾದ ಸಲ್ಲಿಸಿದರು.

ಈ ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ , ಮುಖ್ಯಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಸೌಮ್ಯ ವಿಜಯ್, ಉದ್ಯಮಿ ಶ್ರೀ ಭಾಸ್ಕರ ಗಟ್ಟಿ, ಎ.ಜೆ. ಇನ್‌ಸ್ಟಿಟ್ಯೂಟ್ ಮತ್ತು ಮೆಡಿಕಲ್ ಸೈನ್ಸ್, ಮಂಗಳೂರು ಇಲ್ಲಿನ ವೈದ್ಯರಾದ ಡಾ| ಮಾಣಿಕ್ ಆರೋರ ಹಾಗೂ ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ಇಲ್ಲಿನ ಪಿ.ಆರ್.ಓ ಆದ ಶ್ರೀ ಭರತ್ ಮತ್ತಿತ್ತರರು ಉಪಸ್ಥಿತರಿದ್ದರು.

ಈ ಶಿಬಿರದಲ್ಲಿ ಸುಮಾರು 150 ಕ್ಕೂ ಮಿಕ್ಕಿ ಶಿಬಿರಾರ್ಥಿಗಳು ವೈದ್ಯಕೀಯ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು
ಸಂಘದ ಉಳ್ಳಾಲ ಶಾಖೆಯ ಹಿರಿಯ ಶಾಖಾಧಿಕಾರಿ ಶ್ರೀ ಸಚಿನ್ ರವರು ವಂದಿಸಿದರು, ಶ್ರೀಮತಿ ತ್ರಿವೇಣಿ ಕಿರಣ್ ರವರು ಕಾರ್ಯಕ್ರಮ ನಿರೂಪಿಸಿದರು.